ಮಹಾಲಿಂಗಪುರ ಪುರಸಭೆಯ ಚುನಾವಣೆ ದೌರ್ಜನ್ಯಕ್ಕೆ ಕಾಂಗ್ರೆಸ್ ಕಾರಣ: ಸಿದ್ದು ಸವದಿ
Team Udayavani, Aug 28, 2021, 8:12 PM IST
ಬನಹಟ್ಟಿ: ಮಾಜಿ ಸಚಿವೆ ಉಮಾಶ್ರೀ ಬಿಜೆಪಿ ಆಡಳಿತದಲ್ಲಿ ರಾಜ್ಯದ ಮತ್ತು ತೇರದಾಳ ಮತಕ್ಷೇತ್ರದಲ್ಲಿ ಹೆಣ್ಣು ಮಕ್ಕಳಿಗೆ ಗೌರವ ಮತ್ತು ರಕ್ಷಣೆ ದೊರೆಯುತ್ತಿಲ್ಲ ಎಂದು ಆರೋಪಿಸಿದ್ದರು. ಈ ಮಾತುಗಳನ್ನು ಹೇಳುವ ಮೊದಲು ಮಾಜಿ ಸಚಿವೆ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿತ್ತು. ತಮ್ಮ ಅಧಿಕಾರ ಅವಧಿಯಲ್ಲಿ ನಡೆದ ಘಟನೆಯ ಬಗ್ಗೆ ಯಾವುದೇ ರೀತಿಯಲ್ಲಿ ಮಾತನಾಡದ ಸಚಿವೆ ಈಗ ಮಾತಾಡುತ್ತಿರುವುದು ಖಂಡನೀಯವಾಗಿದೆ ಎಂದು ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ತೇರದಾಳ ಮತಕ್ಷೇತ್ರದ ಶಾಸಕ ಸಿದ್ದು ಸವದಿ ಹೇಳಿದರು.
ಅವರು ಶನಿವಾರ ಬನಹಟ್ಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಮಹಾಲಿಂಗಪುರ ಪುರಸಭೆಯ ಚುನಾವಣೆಯ ಸಂದರ್ಭದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಮಾಡಿದ್ದು ಕಾಂಗ್ರೆಸ್ನವರು. ರಾತ್ರಿ ಬಿಜೆಪಿ ಸದಸ್ಯರನ್ನು ಅಪಹರಣ ಮಾಡಲು ಮುಂದಾಗಿದ್ದು ಕಾಂಗ್ರೆಸ್ ಕಾರ್ಯಕರ್ತರು. ಅಂದಿನ ದಿನಗಳಲ್ಲಿ ನಮ್ಮ ಸದಸ್ಯರ ರಕ್ಷಣೆಯನ್ನು ಮಾಡುವ ಸಂದರ್ಭದಲ್ಲಿ ತಳ್ಳಾಟ ನಡೆದಿದೆ. ಆದರೆ ಈ ಎಲ್ಲಾ ಘಟನೆಗೆ ಕಾಂಗ್ರೆಸ್ ಕಾರಣ ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.
ಇದನ್ನೂ ಓದಿ:ಕ್ಯಾಸಿನೊ ಬಂದ್ ಇರುವುದರಿಂದ ಗೋವಾಕ್ಕೆ ದೊಡ್ಡ ಪೆಟ್ಟು ಬಿದ್ದಿದೆ: ಶ್ರೀನಿವಾಸ್ ನಾಯಕ್
ಮೈಸೂರು ಘಟನೆಯನ್ನು ಕೂಡಾ ನಾವು ಕೂಡಾ ಖಂಡಿಸುತ್ತೇನೆ ಮತ್ತು ಘಟನೆಯಲ್ಲಿ ಪಾಲ್ಗೊಂಡವರಿಗೆ ಉಗ್ರ ಶಿಕ್ಷೆಯನ್ನು ನೀಡಬೇಕು ಎಂದು ಸರ್ಕಾರವನ್ನು ಆಗ್ರಹಿಸುತ್ತೇನೆ ಎಂದು ಸವದಿ ತಿಳಿಸಿದರು.
ಗಣೇಶೋತ್ಸವಕ್ಕೆ ಅನುಮತಿಯನ್ನು ನೀಡಿ
ಇದೇ ಸಂದರ್ಭದಲ್ಲಿ ಸವದಿ ಮಾತನಾಡಿ, ಸಾರ್ವಜನಿಕ ಗಣೇಶೊತ್ಸವಕ್ಕೆ ಸರ್ಕಾರ ಅನುಮತಿಯನ್ನು ನೀಡಬೇಕು. ಸಾರ್ವಜನಿಕ ಗಣೇಶೋತ್ಸವದ ಸಂದರ್ಭದಲ್ಲಿ ಸರ್ಕಾರ ಕೋವಿಡ್ ನಿಯಮಾಳಿಗಳನ್ನು ರೂಪಿಸಬೇಕು. ಅದರಂತೆ ಆಚರಣೆ ಮಾಡಲು ತಿಳಿಸಬೇಕು.
ಸಾರ್ವಜನಿಕ ಗಣೇಶೋತ್ಸವ ಹಿಂದೂಗಳ ಪವಿತ್ರ ಹಬ್ಬವಾಗಿದ್ದು, ಇದು ನಾವು ಜಾತಿ, ಮತ, ಧರ್ಮವನ್ನು ಮರೆತು ಒಂದಾಗಿ ಆಚರಿಸುವ ಹಬ್ಬವಾಗಿದೆ. ಆದ್ದರಿಂದ ಸರ್ಕಾರ ಹಬ್ಬಕ್ಕೆ ಯಾವುದೇ ಅಡೆತಡೆ ಮಾಡಬಾರದು.
ಸರ್ಕಾರ ಯಾವುದೇ ವಿವಾದಕ್ಕೆ ಒಳಗಾಗಬಾರದು ಎಂದರೆ ಸಾರ್ವಜನಿಕ ಗಣೇಶೋತ್ಸಕ್ಕೆ ಅವಕಾಶ ನೀಡಬೇಕು ಎಂದು ಸರ್ಕಾರವನ್ನು ಆಗ್ರಹಿಸುತ್ತೇನೆ ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.