ಉತ್ತರ ಕನ್ನಡಕ್ಕೆ ಪ್ರತ್ಯೇಕ ಹಾಲು ಒಕ್ಕೂಟ ಒದಗಿಸಲು ಸಿಎಂಗೆ ಒತ್ತಾಯ


Team Udayavani, Aug 29, 2021, 1:59 PM IST

Separate Milk Union for Uttara Kannada

ಶಿರಸಿ: ಅನೇಕ ಸಮಸ್ಯೆಗಳ ನಡುವೆಯೂ ಹೈನುಗಾರಿಕೆಯಲ್ಲಿ ಪಳಗಿದ ಉತ್ತರ ಕನ್ನಡ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಒದಗಿಸಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಲ್ಲಿ ಧಾರಾವಾಡ ಹಾಲು ಒಕ್ಕೂಟ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ ನೇತೃತ್ವದಲ್ಲಿ ಹಕ್ಕೊತ್ತಾಯ ಮಾಡಲಾಯಿತು.

ಹಾವೇರಿಯಲ್ಲಿ ಧಾರವಾಡ ಒಕ್ಕೂಟದ ನೂತನ ಘಟಕವೊಂದರ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವೇಳೆ ಬೊಮ್ಮಾಯಿ ಅವರನ್ನು ಅಧ್ಯಕ್ಷ ಶಂಕರ ಮುಗದ ಅವರ ಜೊತೆಯಲ್ಲಿ ಭೇಟಿ ಮಾಡಿದ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ, ಶಂಕರ ಹೆಗಡೆ, ಪರಮೇಶ್ವರ ನಾಯ್ಕ  ಅವರು ಬಹು ಕಾಲದ ಬೇಡಿಕೆಯಾದ ಪ್ರತ್ಯೇಕ ಹಾಲು ಒಕ್ಕೂಟಕ್ಕೆ ನೆರವಾಗಬೇಕು. ಕ್ಷೀರದ ಸಾಗಾಟದ ವೆಚ್ಚ ತಗ್ಗಿಸಲೂ ಹಾಗೂ ಹೈನುಗಾರರಿಗೆ ಇನ್ನಷ್ಟು ಉತ್ತೇಜಿಸಲು ಒಕ್ಕೂಟ ಅನಿವಾರ್ಯವಾಗಿದೆ ಎಂದು ಮನವಿ ಮಾಡಿದ್ದಾರೆ.

ಕೊರತೆ ನೀಗಿಸಿ: ಜಿಲ್ಲೆಯಲ್ಲಿ 250 ಕ್ಕೂ ಅಧಿಕ ಹಾಲು ಉತ್ಪಾದಕರ ಸಹಕಾರಿ ಸಂಘಗಳು ಇವೆ. ವರ್ಷದ ಎಲ್ಲ ದಿನವೂ ಕೋವಿಡ್ ಸಂಕಷ್ಟದ ಕಾಲದಲ್ಲೂ ಇವು ಬೆಳಿಗ್ಗೆ ಹಾಗೂ ಇಳಿಹೊತ್ತು ಕೆಲಸ ಮಾಡುತ್ತಿವೆ. ಆದರೆ, ಸಂಘಗಳಿಗೆ ಕಟ್ಟಡಗಳ ಕೊರತೆ ಇದೆ. ಬಾಡಿಗೆ ಕಟ್ಟಡಗಳಲ್ಲಿ ಕೆಲಸ ಮಾಡುತ್ತಿವೆ ಶೇ.80ರಷ್ಟು ಸಂಘಗಳಿಗೆ ಸ್ವಂತ ಕಟ್ಟಡಗಳು ಇಲ್ಲ. ಸ್ವಂತ ಕಟ್ಟಡ ಇಲ್ಲದ ಪರಿಣಾಮ ಆಧುನಿಕ ಉಪಕರಣ ಬಳಸಿ ಗುಣಮಟ್ಟದ ಹಾಲು ಸಂಗ್ರಹಣೆಗೆ ಅಡಚಣೆ ಆಗುತ್ತವೆ. ಅವುಗಳ ಭದ್ರತೆಗೂ ಕೊರತೆ ಆಗುತ್ತದೆ ಈ ಸಮಸ್ಯೆ ನಿವಾರಣೆಗ ನೆರವಾಗಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

ಹಾಲು ಸಂಘಗಳ ನೂತನ ಕಟ್ಟಡ ಕಟ್ಟಲು ಶಾಸಕರ ಹಾಗೂ ವಿಧಾನ ಪರಿಷತ್ ಸದಸ್ಯರ ಅನುದಾನ ಬಳಕೆಗೆ ಅನುಮತಿ ಈವರೆಗೆ ಇಲ್ಲ. ಇದಕ್ಕೆ ಅವಕಾಶ ನೀಡಿದರೆ ಈ ಸಮಸ್ಯೆ ನೀಗುತ್ತದೆ ಎಂದು ಒತ್ತಾಯಿಸಿರುವ ಕೆಶಿನ್ಮನೆ ನಿಯೋಗ, ಜಿಲ್ಲೆಯ ಯಲ್ಲಾಪುರ, ಮುಂಡಗೋಡ, ಶಿರಸಿ ಹಾಗೂ ಸಿದ್ದಾಪುರ ತಾಲೂಕುಗಳು ಈಗಾಗಲೇ ಗುಡ್ಡಗಾಡು ತಾಲೂಕುಗಳಾಗಿವೆ. ಇಲ್ಲಿ ಸಾರಿಗೆ ಸಂಪರ್ಕಗಳೂ ಕಷ್ಟವಾಗುತ್ತವೆ. ಹಾಲು ಸಂಘಗಳಿಗೆ ಕ್ಷೀರ ತಂದು ಕೊಡಲು ಸಮಸ್ಯೆ ಆಗುತ್ತವೆ. ಈ ಕಾರಣದಿಂದ ಆದ್ಯತೆ ವಲಯ ಎಂದು ಘೋಷಣೆ ಮಾಡಿಕೊಡಬೇಕು ಎಂದೂ ಮನವಿ ಮಾಡಿದ್ದಾರೆ.

ಕೈ ಹಿಡಿಯಲು ಒತ್ತಾಯ: ಹಾಲು ಉತ್ಪಾದಕರ ಸಹಕಾರಿ ಸಂಘಗಳಲ್ಲಿ ಕಾರ್ಯ ನಿರ್ವಹಿಸುವ ಮುಖ್ಯ ಕಾರ್ಯ ನಿರ್ವಾಹಕರಿಗೆ ಕನಿಷ್ಠ ವೇತನ ಹಾಗೂ ಕಾರ್ಮಿಕ ಇಲಾಖೆಯ ವ್ಯಾಪ್ತಿಗೆ ಸೇರಿಸಿ ಅಲ್ಲಿನ ಸೌಲಭ್ಯ ಒದಗಿಸಲು ಒತ್ತಾಯಿಸಿದ್ದಾರೆ.

ಸಂಘಗಳಲ್ಲಿ ಕಾರ್ಯ ನಿರ್ವಹಿಸುವ ಮುಖ್ಯ ಕಾರ್ಯ ನಿರ್ವಾಹಕರು ದಿನವೊಂದಕ್ಕೆ 100 ರೂಪಾಯಿಗೂ ಕಡಿಮೆ ದರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸರಕಾರದಿಂದ ಹಾಲು ಉತ್ಪಾದಕರಿಗೆ ನೀಡುವ ಪ್ರೋತ್ಸಾಹ ಧನ ಸೇರಿದಂತೆ ಉಳಿದ ಮಾಹಿತಿ ನೀಡಲು ಕನಿಷ್ಠ 6 ತಾಸುಗಳ ಕಾರ್ಯ ಅವರಿಗೆಲ್ಲ ಆಗುತ್ತವೆ. ಅವರಿಗೆ ಕನಿಷ್ಠ ವೇತನ ಸಿಗುವಂತಾಗಬೇಕು. ಕಾರ್ಮಿಕ ಇಲಾಖೆಯ ಅಡಿಯಲ್ಲಿ ಸೇರಿಸಿ ಅಲ್ಲಿನ ಸೌಲಭ್ಯ ಕಲ್ಪಿಸಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಸೆಂಟ್ರಲ್‌ ವಾರ್ಡ್‌ಗಳ ಚಿತ್ರಣ| ಅಭಿವೃದ್ಧಿ ಚಿತ್ರಣದೋಳ್‌ ಸಮಸ್ಯೆಗಳ ಸರಮಾಲೆ

ಮಾಹಿತಿ ಪಡೆದುಕೊಂಡಿರುವ ಸಿಎಂ ಅವರು ಹೈನುಗಾರರ ಸಮಸ್ಯೆಗೆ ನಿವಾರಣೆಗೆ ಸ್ಪಂದಿಸುವದಾಗಿ ಭರವಸೆ ನೀಡಿದ್ದಾರೆ.ಪ್ರತ್ಯೇಕ ಒಕ್ಕೂಟ, ಶಾಸಕರ ಅನುದಾನ ಬಳಕೆಗೆ ಅನುಮತಿ ಕಾರ್ಯದರ್ಶಿಗಳಿಗೆ ನೆರವು ನಮ್ಮ ಮುಖ್ಯ ಬೇಡಿಕೆ ಆಗಿದ್ದವು.

ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ, ಒಕ್ಕೂಟ ನಿರ್ದೇಶಕ

ಟಾಪ್ ನ್ಯೂಸ್

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

5-dandeli

Dandeli: ವಿದ್ಯುತ್ ಕಂಬದ ಜಿಓಎಸ್ ಕಳವು‌ ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು

10

Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ

10-dandeli

Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ

1-dandeli

Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.