ಜಮ್ಮು-ಕಾಶ್ಮೀರ: ಉಗ್ರರ ಒಳನುಸುಳುವಿಕೆ ಪ್ರಯತ್ನ ವಿಫಲ, ಭದ್ರತಾ ಪಡೆ ದಾಳಿಗೆ ಉಗ್ರನ ಸಾವು
ಪೂಂಚ್ ಸೆಕ್ಟರ್ ನಲ್ಲಿ ಭದ್ರತಾ ಪಡೆಯ ಕಾರ್ಯಾಚರಣೆ ಮುಂದುವರಿದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
Team Udayavani, Aug 30, 2021, 1:35 PM IST
ಶ್ರೀನಗರ್: ಪಾಕಿಸ್ತಾನ ಬೆಂಬಲಿತ ಉಗ್ರರು ಜಮ್ಮು-ಕಾಶ್ಮೀರದ ಪೂಂಚ್ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆ ಪ್ರದೇಶದಲ್ಲಿ ಒಳನುಸುಳುತ್ತಿರುವುದನ್ನು ಭದ್ರತಾ ಪಡೆಗಳು ಸೋಮವಾರ (ಆಗಸ್ಟ್ 30) ವಿಫಲಗೊಳಿಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಹುಡುಗಿಯರಿಗೆ ಪುರುಷರು ಪಾಠ ಮಾಡುವಂತಿಲ್ಲ : ತಾಲಿಬಾನ್ ಹೊಸ ಆದೇಶ
ವರದಿಯ ಪ್ರಕಾರ, ಅತ್ಯಾಧುನಿಕ ಕಣ್ಗಾವಲು ಗ್ರಿಡ್ ನ ಬಳಕೆಯಿಂದ ಉಗ್ರರ ಒಳನುಸುಳುವಿಕೆಯನ್ನು ಭಾರತೀಯ ಸೇನಾಪಡೆ ಪತ್ತೆ ಹಚ್ಚಿತ್ತು. ಈ ಸಂದರ್ಭದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆ ನಡೆಸಿದ ಗುಂಡಿನ ದಾಳಿಗೆ ಉಗ್ರನೊಬ್ಬ ಸಾವನ್ನಪ್ಪಿರುವುದಾಗಿ ಸೇನಾ ಮೂಲಗಳು ಹೇಳಿವೆ.
ಮೃತ ಉಗ್ರನ ಶವ ಹಾಗೂ ಎಕೆ 47 ರೈಫಲ್ ಅನ್ನು ವಶಪಡಿಸಿಕೊಂಡಿರುವುದಾಗಿ ಭದ್ರತಾ ಪಡೆ ಮೂಲಗಳು ತಿಳಿಸಿವೆ. ಪೂಂಚ್ ಸೆಕ್ಟರ್ ನಲ್ಲಿ ಭದ್ರತಾ ಪಡೆಯ ಕಾರ್ಯಾಚರಣೆ ಮುಂದುವರಿದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಪಾಕಿಸ್ತಾನ ಮೂಲದ ಉಗ್ರರು ದಾಳಿ ನಡೆಸುವ ನಿಟ್ಟಿನಲ್ಲಿ ಗಡಿ ನಿಯಂತ್ರಣ ರೇಖೆ ಪ್ರದೇಶದಿಂದ ಒಳನುಸುಳಿ ಬರುತ್ತಿತ್ತು, ಇತ್ತೀಚೆಗೆ ಭದ್ರತಾ ಪಡೆ ಉಗ್ರರ ಹಲವಾರು ಪ್ರಯತ್ನಗಳನ್ನು ವಿಫಲಗೊಳಿಸಿತ್ತು ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.