ಅಟಲ್‌ ಕನಸು ಮೋದಿಯಿಂದ ನನಸು

ಗ್ರಾಮೀಣ ಭಾಗದಲ್ಲಿ ಉತ್ತಮ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ಆದ್ಯತೆ: ಸಂಸದ ಡಾ| ಜಿ.ಎಂ. ಸಿದ್ದೇಶ್ವರ

Team Udayavani, Aug 30, 2021, 2:31 PM IST

Davanagere Honnali News

ಹೊನ್ನಾಳಿ: ಗ್ರಾಮೀಣ ಭಾಗದಲ್ಲಿ ಉತ್ತಮ ರಸ್ತೆ ಸಂಪರ್ಕ ಕಲ್ಪಿಸುವುದು ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಕನಸಾಗಿತ್ತು. ಈ ಕನಸನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶಾದ್ಯಂತ ಪಿಎಂಜಿಎಸ್‌ವೈ ಯೋಜನೆಯಡಿ ರಸ್ತೆ ಅಭಿವೃದ್ಧಿ ಮೂಲಕ ನನಸು ಮಾಡುತ್ತಿದ್ದಾರೆ ಎಂದು ಸಂಸದ ಡಾ| ಜಿ.ಎಂ. ಸಿದ್ದೇಶ್ವರ ಹೇಳಿದರು. ತಾಲೂಕಿನ ದಿಡಗೂರು ಗ್ರಾಮದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ವಿವಿಧ ಗ್ರಾಮಗಳ ಸುಮಾರು 5.6 ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ನ್ಯಾಮತಿ ಮತ್ತು ಹೊನ್ನಾಳಿ ಅವಳಿ ತಾಲೂಕುಗಳಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆಯಡಿ 29 ಕೋಟಿ ರೂ. ಅನುದಾನದಲ್ಲಿ ಗ್ರಾಮೀಣ ಭಾಗಗಳ 40 ಕಿಮೀ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ ಎಂದರು. ಕೇಂದ್ರ ಸರ್ಕಾರ ಜಲಜೀವನ್‌ ಯೋಜನೆಯಡಿ ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರು ಪೂರೈಕೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ.

ರಾಜ್ಯದ ಮುಖ್ಯಂತ್ರಿಯವರು ಬಸವ ಆಶ್ರಯ ಯೋಜನೆಯಡಿ ಪ್ರತಿ ಗ್ರಾಮ ಪಂಚಾಯಿತಿಗೆ 50 ಮನೆಗಳು, ರೈತರ ಮಕ್ಕಳಿಗೆ ಸ್ಕಾಲರ್‌ಶಿಪ್‌, ರೈತ ಸನ್ಮಾನ್‌ ಯೋಜನೆಯಡಿ ರೈತರ ಖಾತೆಗಳಿಗೆ 6 ಸಾವಿರ ರೂ. ಜಮಾ ಸೇರಿದಂತೆ ಅನೇಕ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದಾರೆ ಎಂದು ಶ್ಲಾಘಿಸಿದರು.

ಇಡೀ ಜಿಲ್ಲೆಯಲ್ಲಿ ಸರ್ಕಾರದಿಂದ ಅತಿ ಹೆಚ್ಚು ಅನುದಾನ ತಂದ ಶಾಸಕರು ಎಂ.ಪಿ. ರೇಣುಕಾಚಾರ್ಯ ಅವರಾಗಿದ್ದಾರೆ. ಕೋವಿಡ್‌ ಸಂದರ್ಭದಲ್ಲಿಯೂ ತಮ್ಮ ವಿಶಿಷ್ಟ ಜನಸೇವೆಯಿಂದ ಗುರುತಿಸಿಕೊಂಡು ಅಪರೂಪದ ಶಾಸಕ ಎನ್ನಿಸಿಕೊಂಡಿದ್ದಾರೆ ಎಂದು ಬಣ್ಣಿಸಿದರು. ಅಧ್ಯಕ್ಷತೆ ವಹಿಸಿದ್ದ ಶಾಸಕ ಎಂ.ಪಿ.ರೇಣುಕಾಚಾರ್ಯ ಮಾತನಾಡಿ, ಅವಳಿ ತಾಲೂಕಿನಲ್ಲಿ 1.35 ಲಕ್ಷ ಜನರಿಗೆ ಲಸಿಕೆ ಹಾಕಿಸಲಾಗಿದೆ.

ಶನಿವಾರ ಒಂದೇ ದಿನ 12 ಸಾವಿರ ಕೋವಿಡ್‌ ಲಸಿಕೆ ಹಾಕಿಸುವ ಮೂಲಕ ಅವಳಿ ತಾಲೂಕಿನ ಜನ ಲಸಿಕೆಯಿಂದ ವಂಚಿತರಾಗದಂತೆ ಲಸಿಕೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆಯಡಿ ಅವಳಿ ತಾಲೂಕಿನಾದ್ಯಂತ ಉತ್ತಮ ಗ್ರಾಮೀಣ ರಸ್ತೆಗಳು ನಿರ್ಮಾಣವಾಗಿವೆ. ಗುತ್ತಿಗೆದಾರರು ಸಾರ್ವಜನಿಕರಿಂದ ದೂರು ಬಾರದಂತೆ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಬೇಕೆಂದು ತಿಳಿಸಿದರು.

ದಿಡಗೂರು ಅಂಜನೇಯಸ್ವಾಮಿ ದೇವಸ್ಥಾನದ ಅಣ್ಣಪ್ಪ ಸ್ವಾಮಿ, ಗ್ರಾಪಂ ಉಪಾಧ್ಯಕ್ಷ ಹಾಲೇಶಪ್ಪ, ಕಸಬಾ ಸೊಸೈಟಿ ಮಾಜಿ ಅಧ್ಯಕ್ಷ ಗೋಪಾಲಪ್ಪ, ಪಿಎಸ್‌ಐ ಬಸವನಗೌಡ ಬಿರಾದಾರ್‌, ಇಂಜಿನಿಯರ್‌ ಚಂದ್ರಮೌಳಿ, ಗ್ರಾಮದ ಮುಖಂಡರು ಇದ್ದರು.

ಟಾಪ್ ನ್ಯೂಸ್

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.