ಸೂರ್ಯಕಾಂತಿ ಬೆಳೆದ ರೈತರಿಗೆ ಬಂಪರ್‌ ಬೆಲೆ

Team Udayavani, Aug 30, 2021, 2:43 PM IST

30-3

ಬಸವರೆಡ್ಡಿ ಕರೂರು

ಸಿರುಗುಪ್ಪ: ತಾಲೂಕಿನಲ್ಲಿ ಮುಂಗಾರು ಮಳೆ ಆರಂಭವಾಗುತ್ತಿದ್ದಂತೆ ಮಳೆಯಾಶ್ರಿತ ಮತ್ತು ನೀರಾವರಿ ಪ್ರದೇಶ ಜಮೀನುಗಳಲ್ಲಿ ಸೂರ್ಯಕಾಂತಿ ಬೆಳೆಯನ್ನು ಮೊದಲ ಬೆಳೆಯಾಗಿ ಬೆಳೆದ ರೈತರಿಗೆ ಉತ್ತಮವಾದ ಯೋಗ್ಯಬೆಲೆ ದೊರೆತಿದ್ದು, ಸೂರ್ಯಕಾಂತಿ ಬೆಳೆದ ರೈತರರ ಮೊಗದಲ್ಲಿ ಮಂದಹಾಸ ಮೂಡಿದೆ.

ತಾಲೂಕಿನ ಬಲಕುಂದಿ, ಅರಳಿಗನೂರು, ಪೊಪ್ಪನಾಳು, ಗೋಸಬಾಳು, ಸಿರಿಗೇರಿ, ಹಾವಿನಾಳು, ಚನ್ನಪಟ್ಟಣ, ಗುಂಡಿಗನೂರು ಸೇರಿ ದಂತೆಇತರೆ ಗ್ರಾಮಗಳಲ್ಲಿ ಮುಂಗಾರುಆರಂಭದ ಮೇ ತಿಂಗಳಲ್ಲಿ ಉತ್ತಮ ಮಳೆಯಾಗಿದ್ದರಿಂದ ಮಳೆಯಾಶ್ರಿತ ಮತ್ತು ನೀರಾವರಿಯಾಶ್ರಿತ ಜಮೀನಿನಲ್ಲಿ ರೈತರು ಸೂರ್ಯಕಾಂತಿ ಬೆಳೆಯನ್ನು ಬಿñನೆ ‌¤ ಮಾಡಿದ್ದರು. ಸಾಮಾನ್ಯವಾಗಿ ತುಂಗಭದ್ರಾ ಜಲಾಶಯ ಭರ್ತಿಯಾಗಲು ಆಗಸ್ಟ್‌ ತಿಂಗಳವರೆಗೆ ಕಾಯಬೇಕಾಗುತ್ತದೆ ಎನ್ನುವ ಉದ್ದೇಶದಿಂದ ನೀರಾವರಿ ಆಶ್ರಿತ ಪ್ರದೇಶದ ರೈತರೂ ಸೂರ್ಯಕಾಂತಿ ಬೆಳೆಯನ್ನು ಬೆಳದಿದ್ದು, ತಾಲೂಕಿನಲ್ಲಿ ಈ ವರ್ಷ ಮುಂಗಾರು ಹಂಗಾಮಿನಲ್ಲಿ 700 ಹೆಕ್ಟೇರ್‌ ಪ್ರದೇಶದಲ್ಲಿ ಸೂರ್ಯಕಾಂತಿ ಬೆಳೆ ಬಿತ್ತನೆಯಾಗಿದ್ದು, ಈಗಾಗಲೇ ರೈತರು ಬೆಳೆ ಕಟಾವು ಮಾಡಿ 2ನೇ ಬೆಳೆಯನ್ನು ನೀರಾವರಿಯಾಶ್ರಿತ ಪ್ರದೇಶದಲ್ಲಿ ಭತ್ತವನ್ನು ನಾಟಿ ಮಾಡಿದ್ದಾರೆ.

ಉತ್ತಮ ಬೆಳೆ: ಪ್ರತಿ ವರ್ಷ ಮುಂಗಾರಿನಲ್ಲಿ ಸೂರ್ಯಕಾಂತಿ ಬಿತ್ತನೆ ಮಾಡಿದ ರೈತರಿಗೆ ನಂತರ ಉತ್ತಮ ಮಳೆಯಾಗದೆ ಹಳ್ಳ, ಹಗರಿ ನದಿಗೆ ನೀರಿಲ್ಲದೆ ಬೆಳೆ ನಷ್ಟ ಅನುಭವಿಸುತ್ತಿದ್ದರು. ಈ ವರ್ಷ ಮೇ ಮತ್ತು ಜೂನ್‌ ತಿಂಗಳಲ್ಲಿ ಉತ್ತಮ ಮುಂಗಾರು ಮಳೆಯಾಗಿದ್ದರಿಂದ ರೈತರು ಬಿತ್ತನೆ ಮಾಡಿದ ಸೂರ್ಯಕಾಂತಿ ಬೆಳೆ ಉತ್ತಮ ಫಸಲು ನೀಡಿದೆ.

ಉತ್ತಮ ಬೆಲೆ: ಪ್ರಸಕ್ತ ವರ್ಷ ಅಡುಗೆ ಎಣ್ಣೆ ಬೆಲೆ ಹೆಚ್ಚಾಗಿದ್ದು, ರೈತರು ಬೆಳೆದ ಸೂರ್ಯಕಾಂತಿಗೆ ಬೇಡಿಕೆ ಹೆಚ್ಚಾಗಿದ್ದು, ಉತ್ತಮ ಬೆಲೆಯು ದೊರೆತಿದ್ದು,ಒಂದುಕ್ವಿಂಟಲ್‌ಸೂರ್ಯಕಾಂತಿಯು ರೂ. 7000ಗಳ ಅಧಿಕ ಬೆಲೆಗೆ ಮಾರಾಟವಾಗಿದ್ದು, ಸೂರ್ಯಕಾಂತಿ ಬೆಳೆ ಬೆಳೆಯಲು ಒಂದು ಎಕರೆಗೆ ರೂ. 5ರಿಂದ7ಸಾವಿರ ವೆಚ್ಚವಾಗಿದೆ. ಆದರೆ ಒಂದು ಎಕರೆಗೆ5ರಿಂದ 10 ಕ್ವಿಂಟಲ್‌ ಇಳುವರಿ ಬಂದಿದ್ದು ರೈತರಿಗೆ ಬಂಪರ್‌ ಲಾಭ ಬಂದಿದೆ.

ಭತ್ತ ನಾಟಿಗೂ ಮುನ್ನ ಕೈಸೇರಿದ ಹಣ: ಸಾಮಾನ್ಯವಾಗಿಇಲ್ಲಿನ ರೈತರಿಗೆಬೇಸಿಗೆಬೆಳೆನಂತರ ಕೃಷಿ ಕೆಲಸ ಇರುವುದಿಲ್ಲ. ತುಂಗಭದ್ರಾ ಜಲಾಶಯ ಭರ್ತಿಯಾಗುತ್ತಿದಂತೆ ಕೃಷಿ ವೆಚcದ ‌ ಹಣಕ್ಕಾಗಿ ಪರದಾಡುತ್ತಿದ್ದ ರೈತರಿಗೆ ಮುಂಗಾರಿನಲ್ಲಿ ಬೆಳೆದ ಸೂರ್ಯಕಾಂತಿಯಿಂದ ಬಂದಉತ್ತಮಆದಾಯ ಭತ್ತ ನಾಟಿ ಮಾಡಲು ಅನುಕೂಲ ಮಾಡಿಕೊಟ್ಟಿದೆ.

ಟಾಪ್ ನ್ಯೂಸ್

Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ

Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ

Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ

Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ

prahlad-joshi

Mallikarjun kharge; ಹೇಳಿಕೆಯಿಂದ ಗ್ಯಾರಂಟಿ ಚುನಾವಣೆಗಾಗಿ ಎನ್ನುವುದು ಸ್ಪಷ್ಟ : ಜೋಶಿ

1-a-kharge

Poll promises; ಖರ್ಗೆ, ರಾಹುಲ್ ಗಾಂಧಿ ಕ್ಷಮೆಗೆ ಒತ್ತಾಯಿಸಿದ ಬಿಜೆಪಿ

INDvsNZ: ಮತ್ತೆ ಬ್ಯಾಟಿಂಗ್‌ ಕುಸಿತ; ಮುಂಬೈನಲ್ಲೂ ಸಂಕಷ್ಟಕ್ಕೆ ಸಿಲುಕಿದ ಭಾರತ

INDvsNZ: ಮತ್ತೆ ಬ್ಯಾಟಿಂಗ್‌ ಕುಸಿತ; ಮುಂಬೈನಲ್ಲೂ ಸಂಕಷ್ಟಕ್ಕೆ ಸಿಲುಕಿದ ಭಾರತ

Darshan (3)

Darshan; ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ನಟ: ಬಿಗಿ ಪೊಲೀಸ್ ಬಂದೋಬಸ್ತ್

20-hosanagara

Hosanagara: ಬಿಸಿ ಟೀ ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಎರಡು ವರ್ಷದ ಮಗು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…

Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…

“ಕೈ’ ಬಿಡದ ಸಂಡೂರು ಮತದಾರ; ಬಿಜೆಪಿಗೆ ಜಯದ ಕಾತರ: 13 ಚುನಾವಣೆಯಲ್ಲಿ ಕಾಂಗ್ರೆಸ್‌ ಮೇಲುಗೈ

“ಕೈ’ ಬಿಡದ ಸಂಡೂರು ಮತದಾರ; ಬಿಜೆಪಿಗೆ ಜಯದ ಕಾತರ: 13 ಚುನಾವಣೆಯಲ್ಲಿ ಕಾಂಗ್ರೆಸ್‌ ಮೇಲುಗೈ

ದರ್ಶನ್ ಗೆ ಜಾಮೀನು… ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಪತ್ನಿ ವಿಜಯಲಕ್ಷ್ಮೀ

ದರ್ಶನ್ ಗೆ ಜಾಮೀನು… ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಪತ್ನಿ ವಿಜಯಲಕ್ಷ್ಮೀ

Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ

Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-hampi-1

Deepawali; ಸರಣಿ‌ ರಜೆ :ಹಂಪಿಯಲ್ಲಿ ಪ್ರವಾಸಿಗರ ದಂಡು, ಪರದಾಟ!

Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ

Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ

Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ

Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ

1-dee

Kulgeri Cross; ನಾಡಿನಲ್ಲಿಯೇ ಪ್ರಥಮ…ತಾಯಿ ಭುವನೇಶ್ವರಿ ರಥೋತ್ಸವ

Padubidri: ರಸ್ತೆ ದಾಟುತ್ತಿದ್ದ ವೇಳೆ ಸ್ಕೂಟರ್‌ ಢಿಕ್ಕಿ… ಮಹಿಳೆಗೆ ಗಾಯ

Padubidri: ರಸ್ತೆ ದಾಟುತ್ತಿದ್ದ ವೇಳೆ ಸ್ಕೂಟರ್‌ ಢಿಕ್ಕಿ… ಮಹಿಳೆಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.