ವಾರ್ಡ್ ಗೆಲುವಿಗಾಗಿ ಜಿದ್ದಾಜಿದ್ದಿ!
Team Udayavani, Aug 30, 2021, 6:04 PM IST
*ಶರತ್ ಭದ್ರಾವತಿ
ಶಿವಮೊಗ್ಗ : ಭದ್ರಾವತಿ ನಗರಸಭೆ 29ನೇ ವಾರ್ಡ್ ಉಪಚುನಾವಣೆಯು ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದ್ದು ಮೂರು ಪಕ್ಷಗಳೂ ಪ್ರತಿಷ್ಠೆಯಾಗಿ ಪರಿಗಣಿಸಿವೆ. ಜೆಡಿಎಸ್‌ನಿಂದ ನಾಗರತ್ನ ಅನಿಲ್ ಕುಮಾರ್, ಬಿಜೆಪಿಯಿಂದ ರಮಾ ವೆಂಕಟೇಶ್, ಕಾಂಗ್ರೆಸ್‌ನಿಂದ ಲೋಹಿತಾ ನಂಜಪ್ಪ ಕಣದಲ್ಲಿದ್ದಾರೆ.
ಪಕ್ಷೇತರರಾಗಿ ಯಾರೂ ಸ್ಪರ್ಧಿಸಿಲ್ಲ. 29ನೇ ವಾರ್ಡ್‌ನ ಕಾಂಗ್ರೆಸ್ ಅಭ್ಯರ್ಥಿ ಶ್ರುತಿ ಮಂಜುನಾಥ್ ನಿಧನದ ಪರಿಣಾಮ ಚುನಾವಣೆ ಮುಂದೂಡಲಾಗಿತ್ತು. ಜೆಡಿಎಸ್ ಅಭ್ಯರ್ಥಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಬಿಜೆಪಿಯಿಂದ ಶೋಭಾ ಬದಲಿಗೆ ರಮಾ ವೆಂಕಟೇಶ್ ಅವರಿಗೆ ಟಿಕೆಟ್ ನೀಡಲಾಗಿದೆ. 29ನೇ ವಾರ್ಡ್ ಹಿಂದಿನಿಂದಲೂ ಜೆಡಿಎಸ್ ಹಿಡಿತದಲ್ಲಿದ್ದು ಅದನ್ನು ಗೆಲ್ಲಲು ಕಾಂಗ್ರೆಸ್, ಬಿಜೆಪಿ ಪ್ರಬಲ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಿದೆ.
ಒಕ್ಕಲಿಗರ ಮತಗಳೇ ಹೆಚ್ಚಿರುವ ಈ ವಾರ್ಡ್‌ನಲ್ಲಿ ಮೂರು ಪಕ್ಷದಿಂದಲೂ ಒಕ್ಕಲಿಗ ಅಭ್ಯರ್ಥಿಗಳೇ ಕಣಕ್ಕಿಳಿದಿರುವುದು ವಿಶೇಷ. ಕಳೆದ ಬಾರಿ 29ನೇ ವಾರ್ಡ್‌ನಿಂದ ಅನಿಲ್‌ಕುಮಾರ್ ಆಯ್ಕೆಯಾಗಿದ್ದರು. ಮೀಸಲಾತಿ ಬದಲಾದ ಕಾರಣ ಪತ್ನಿ ನಾಗರತ್ನರನ್ನು ಕಣಕ್ಕಿಳಿಸಿದ್ದಾರೆ.
ಅವರ ಪರವಾಗಿ ಜೆಡಿಎಸ್ ಮುಖಂಡರಾದ ಅಜಿತ್ ಅಪ್ಪಾಜಿ ಗೌಡ, ಶಾರದಾ ಅಪ್ಪಾಜಿ, ಯೋಗೇಶ್ ಗೌಡ, ಮಣಿಶೇಖರ್ ಸೇರಿ ಘಟಾನುಘಟಿಗಳು ಭರ್ಜರಿ ಕ್ಯಾಂಪೇನ್ ಮಾಡುತ್ತಿದ್ದು ಐದಾರು ಬಾರಿ ಮನೆ- ಮನೆ ಸಂದರ್ಶನ ಮಾಡಿದ್ದು ಗೆಲುವಿನ ವಿಶ್ವಾಸದಲ್ಲಿದ್ದಾರೆ.
ಇನ್ನು ಕಾಂಗ್ರೆಸ್ ಅಭ್ಯರ್ಥಿ ಲೋಹಿತಾ ನಂಜಪ್ಪ ವೃತ್ತಿಯಲ್ಲಿ ವಕೀಲರಾಗಿದ್ದು ಅವರ ಪತಿ ನಂಜಪ್ಪಕೂಡ ವಕೀಲರಾಗಿದ್ದರು. ಮಹಿಳಾ ಒಕ್ಕಲಿಗ ಸಂಘ, ಹಲವು ಸಂಘ-ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ. ಅವರ ಪುತ್ರ ಕೂಡ ವಕೀಲರೆಂಬುದು ವಿಶೇಷ. ಇದೇ ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಧುಮುಕಿರುವ ಅವರಿಗೆ ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್, ಬಾಲಣ್ಣ ಸೇರಿ ಹಲವು ಪ್ರಮುಖರ ಬೆಂಬಲ ಸಿಕ್ಕಿದೆ.
ನಗರಸಭೆಯಲ್ಲಿ ಕಾಂಗ್ರೆಸ್ ಬಹುಮತ ಸಾಧಿಸಿದ್ದು ಈ ವಾರ್ಡ್ ಕೂಡ ಗೆಲ್ಲುವ ಮೂಲಕ ಶಕ್ತಿ ಹೆಚ್ಚಿಸಿಕೊಳ್ಳಲು ಕಾರ್ಯಕರ್ತರು, ಮುಖಂಡರು ಶ್ರಮಿಸುತ್ತಿದ್ದಾರೆ. ಬಿಜೆಪಿಯಿಂದ ಕಣಕ್ಕಿಳಿದಿರುವ ರಮಾ ವೆಂಕಟೇಶ್ ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ಮೂಲಕ ಚಿರಪರಿಚಿತರು.
ಘಟಾನುಘಟಿನಾಯಕರಪ್ರಚಾರದಹೊರತಾಗಿಯೂ ನಾಲ್ಕು ಸ್ಥಾನ ಗೆದ್ದಿರುವ ಬಿಜೆಪಿಗೆ ಈ ವಾರ್ಡ್ ಕೂಡ ಕಠಿಣ ಸವಾಲಾಗಿ ಪರಿಗಣಿಸಿದೆ. ಈ ಬಾರಿ ತಾಲೂಕು ಮಟ್ಟದ ನಾಯಕರ ಹೊರತಾಗಿ ಬೇರೆ ಯಾರೂ ಪ್ರಚಾರಕ್ಕೆ ಬಂದಿಲ್ಲ. ಮಹಿಳಾ ಸಂಘಟನೆಗಳ ಮೂಲಕ ಚಿರಪರಿಚಿತರಾಗಿರುವ ರಮಾ ವೆಂಕಟೇಶ್ ಅದೃಷ್ಟ ಪರೀಕ್ಷೆಗೆ ನಿಂತಿದ್ದು ಪ್ರಬಲ ಸ್ಪರ್ಧೆ ಒಡ್ಡುತ್ತಿದ್ದಾರೆ. ಮೂರು ಅಭ್ಯರ್ಥಿಗಳು ಪ್ರಬಲ ಹಿನ್ನೆಲೆಯುಳ್ಳವರಾದ ಕಾರಣ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.