ಶೃಂಗೇರಿ ಶಾರದಾ ಪೀಠಕ್ಕೆ ಸಚಿವ ನಾಗೇಶ್ ಭೇಟಿ
Team Udayavani, Aug 30, 2021, 6:59 PM IST
ಶೃಂಗೇರಿ: ಶಿಕ್ಷಣಸಚಿವಬಿ.ಸಿ.ನಾಗೇಶದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾಪೀಠಕ್ಕೆ ಭೇಟಿ ನೀಡಿ ಶ್ರೀ ಶಾರದಾಂಬೆಗೆ ಪೂಜೆ ಸಲ್ಲಿಸಿ ಜಗದ್ಗುರುಗಳ ಆಶೀರ್ವಾದ ಪಡೆದರು.
ಶನಿವಾರ ರಾತ್ರಿ ಶ್ರೀ ಶಾರದಾ ಪೀಠಕ್ಕೆ ಆಗಮಿಸಿ ವಾಸ್ತವ್ಯ ಮಾಡಿದ್ದ ಸಚಿವರು ಭಾನುವಾರ ಬೆಳಗ್ಗೆ ಶ್ರೀಮಠದ ಹೊರ ಪ್ರಾಂಗಣದ ಶ್ರೀ ತೋರಣ ಗಣಪತಿ, ಶ್ರೀ ಶಂಕರಾಚಾರ್ಯ ದೇವಸ್ಥಾನ ಹಾಗೂ ಶ್ರೀ ಶಾರದಾಂಬಾ ದೇಗುಲಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ನರಸಿಂಹವನದಲ್ಲಿರುವ ಗುರುಭವನಕ್ಕೆ ತೆರಳಿದ ಸಚಿವರು ಚಾತುರ್ಮಾಸ್ಯ ವ್ರತದಲ್ಲಿರುವ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳ ಆಶೀರ್ವಾದ ಪಡೆದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ.30ರಿಂದ ರಾಜ್ಯದಲ್ಲಿ ಪ್ರಾಥಮಿಕ ಹಂತದ ಶಾಲೆ ಆರಂಭಿಸಲು ಸೋಮವಾರ ತಜ್ಞರ ಸಭೆಯಲ್ಲಿ ನಿರ್ಣಯಕೈಗೊಳ್ಳಲಾಗುವುದು. ಕೋವಿಡ್ ನಿಯಮ ಪಾಲಿಸಿ ಅಗತ್ಯ ಮುನ್ನೆಚರಿಕೆ c ಕ್ರಮಗಳೊಂದಿಗೆ ತರಗತಿ ಆರಂಭಿಸಲಾಗುವುದು.
ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಈ ಬಗ್ಗೆ ಈಗಾಗಲೇ ಸುತ್ತೋಲೆ ಹೊರಡಿಸಲಾಗಿದೆ. ವಿದ್ಯಾರ್ಥಿಗಳ ಆರೋಗ್ಯ ಹಾಗೂ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಕ್ರಮ ಕೈಗೊಳ ಲಾಗುತ್ತಿದೆ. ಈಗಾಗಲೇ ಬೇರೆ ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭಿಸಲಾಗಿದೆ.
ರಾಜ್ಯದಲ್ಲಿ ಪದವಿ ತರಗತಿಗಳು ಆರಂಭಗೊಂಡಿದ್ದು, ಯಾವುದೇ ಸಮಸ್ಯೆ ಉಂಟಾಗಿಲ್ಲ. ಕೋವಿಡ್ ಮೂರನೇ ಅಲೆಯನ್ನು ಸರಕಾರ ಗಂಭಿರವಾಗಿ ಪರಿಗಣಿಸಿದ್ದು ಲಸಿಕಾ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದೆ. ಸಾರ್ವಜನಿಕರು ಹಾಗೂ ಪೋಷಕರ ಸಹಕಾರ ಅಗತ್ಯವಾಗಿದೆ ಎಂದರು. ಪಕ್ಷದ ಮುಖಂಡರಾದ ಎ.ಎಸ್. ನಯನ, ಹರೀಶ್ ಶೆಟಿ, ಚೇತನ್ ಹೆಗ್ಡೆ, ಟಿ.ಕೆ. ಪರಾಶರ, ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಜಿ. ರಾಘವೇಂದ್ರ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್ ಓಡಾಟ ಶಂಕೆ
MUST WATCH
ಹೊಸ ಸೇರ್ಪಡೆ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
Editorial: ಪಾಕ್ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು
Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.