ಮಕ್ಕಳಿಗೆ ಶ್ರೀಕೃಷ್ಣ ವೇಷ ಹಾಕಿಸಿ ಸಂಭ್ರಮಿಸಿದ ಪೋಷಕರು 

Team Udayavani, Aug 31, 2021, 3:26 AM IST

ಮಕ್ಕಳಿಗೆ ಶ್ರೀಕೃಷ್ಣ ವೇಷ ಹಾಕಿಸಿ ಸಂಭ್ರಮಿಸಿದ ಪೋಷಕರು 

ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಸೋಮವಾರ ಕೃಷ್ಣಾಷ್ಟಮಿ ಸಂಭ್ರಮ ಮನೆಮಾಡಿದ್ದು, ನಗರದೆಲ್ಲೆಡೆ ಪೋಷಕರು ಮಕ್ಕಳಿಗೆ ಕೃಷ್ಣವೇಷ ಹಾಕಿಸಿಕೊಂಡು ಸಂಭ್ರಮಿಸುತ್ತಿರುವ ದೃಶ್ಯಗಳು ಕಂಡು ಬಂತು.

ಶ್ರೀಕೃಷ್ಣ ಜನ್ಮಾಷ್ಟಮಿಯ ಹಿನ್ನೆಲೆಯಲ್ಲಿ ಸೋಮವಾರ ರಥಬೀದಿ ರಂಗುರಂಗಿನಿಂದ ಕಂಗೊಳಿಸುತ್ತಿತ್ತು. ಒಂದೆಡೆ ಬಗೆಬಗೆಯ ಪುಷ್ಪಗಳು ನೋಡುಗರ ಗಮನ ಸೆಳೆದರೆ ಇನ್ನೊಂದೆಡೆ ಬಣ್ಣಬಣ್ಣದ ಆಟಿಕೆಗಳು ಕಣ್ಣಿಗೆ ರಾರಾಜಿಸುತ್ತಿದ್ದವು. ಬಿಸಿಬಿಸಿ ತಿಂಡಿ ಸವಿಯುವವರಿಗಾಗಿ ಜೋಳ, ತಣ್ಣಗಿನ ಆಹಾರ ಸೇವಿಸುವವರಿಗಾಗಿ ಸೋಡಾ, ತಾಜಾ ಜ್ಯೂಸ್‌ ಅಂಗಡಿಯತ್ತ ಗ್ರಾಹಕರನ್ನು ಸೆಳೆಯುತ್ತಿದ್ದವು. ಹೂ, ಹಣ್ಣುಗಳ ರಾಶಿ ಕಂಡುಬಂದವು.

ಹಾಸನ, ಚಿಕ್ಕಮಗಳೂರು, ಮೈಸೂರು, ಅರಕಲಗೋಡು ಸಹಿತ ವಿವಿಧ ಜಿಲ್ಲೆ ಗಳಿಂದ ಸುಮಾರು 100ಕ್ಕೂ ಅಧಿಕ ಹೂವಿನ ವ್ಯಾಪಾರಿಗಳು ಆಗಮಿಸಿದ್ದು ವ್ಯಾಪಾರ ಬಿರುಸಿನಿಂದ ನಡೆಯಿತು.

ಮಧ್ಯಾಹ್ನದ ವೇಳೆಗೆ ದಿಢೀರ್‌ ಸುರಿದ ಮಳೆಗೆ ವ್ಯಾಪಾರಸ್ಥರೆಲ್ಲ ಕಂಗಾಲಾದರು. ತಾವು ತಂದ ವಸ್ತುಗಳಿಗೆ ರಕ್ಷಣೆ ಒದಗಿಸಲೆಂದು ಕೆಲ ವ್ಯಾಪಾರಿಗಳು ಮೊದಲೇ ಪ್ಲಾಸ್ಟಿಕ್‌ ಹೊದಿಕೆಗಳನ್ನು ತಂದಿದ್ದರು.

ಕೃಷ್ಣ ವೇಷ ಧರಿಸಿದ ಮಕ್ಕಳು :

ಅಷ್ಟಮಿಯ ವಿವಿಧ ಬಗೆಯ ವೇಷಗಳನ್ನು ನೋಡಲು ದೂರದ ಊರಿನಿಂದ ಕಲಾಭಿಮಾನಿಗಳು ರಥಬೀದಿಗೆ ಬರುತ್ತಾರೆ. ಆದರೆ ಕೊರೊನಾದಿಂದ ಜನ್ಮಾಷ್ಟಮಿ ವೇಷ ಹಾಕುವುದಕ್ಕೆ ತಡೆಯಾಗಿದೆ. ಆದ್ದರಿಂದ ಈ ಬಾರಿ ರಥಬೀದಿಯಲ್ಲಿ ಇತರ ವೇಷಗಳು ಕಂಡುಬಂದಿಲ್ಲ. ಕೆಲ ಪೋಷಕರು ಹರಕೆ ನಿಮಿತ್ತ ಮಕ್ಕಳಿಗೆ ಕೃಷ್ಣ ವೇಷ ಹಾಕಿಸಿ ದೇವರ ದರ್ಶನ ಪಡೆಯುತ್ತಿರುವ ದೃಶ್ಯಗಳು ಕಂಡು ಬಂತು. ಈ ಹಿಂದೆ ಕೃಷ್ಣ ಜನ್ಮಾಷ್ಟಮಿಯ ಹಿಂದಿನ ದಿನವೇ ರಥಬೀದಿಯಲ್ಲಿ ನೂರಾರು ವೇಷಗಳು ಕಾಣಸಿಗುತ್ತಿತ್ತು.

ಟ್ರಾಫಿಕ್‌ ಜಾಮ್‌:

ಭಕ್ತರಿಗೆ ಸೋಮವಾರ ನಗರದ ಪ್ರಮುಖ  ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌ ಸುಗಮ ವಾಹನ ಸಂಚಾರಕ್ಕೆ ಅಡಿಯಾಗಿತ್ತು. ಬೆಳಗ್ಗಿ ನಿಂದ ವಾಹನ ಸಂಚಾರ ದಟ್ಟಣೆ ಹೆಚ್ಚಾಗಿತ್ತು. ವಾಹನ, ಸಾರ್ವಜನಿಕರು ಓಡಾಡಲು ಹರಸಾಹಸಪಡುವಂತಾಗಿತ್ತು. ಉಡುಪಿ ನಗರದ ಸಿಟಿ ಬಸ್‌ ನಿಲ್ದಾಣ ರಸ್ತೆ, ಆಭರಣ ಮಳಿಗೆ ಸಮೀಪ, ಚಿತ್ತರಂಜನ್‌ ಸರ್ಕಲ್‌, ಕೋರ್ಟ್‌ ರೋಡ್‌, ಕಲ್ಸಂಕ ಮಾರ್ಗದ ರಸ್ತೆಯಲ್ಲಿ ಟ್ರಾಫಿಕ್‌ ಸಮಸ್ಯೆ ಎದುರಾಗಿತ್ತು.

ಲಕ್ಷ ತುಳಸೀ ಅರ್ಚನೆ :

ಸೋಮವಾರ ಶ್ರೀಕೃಷ್ಣನಿಗೆ ಲಕ್ಷತುಳಸೀ ಅರ್ಚನೆ ನಡೆಯಿತು. ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಲಕ್ಷತುಳಸೀ ಅರ್ಚನೆ ನಡೆಸಿ ಮಹಾಪೂಜೆ ನಡೆಸಿದರು.

ಇದಕ್ಕೂ ಮುನ್ನ ಕೃಷ್ಣಾಪುರ, ಅದಮಾರು, ಪಲಿಮಾರು, ಕಾಣಿಯೂರು ಮಠಾಧೀಶರು ವಿವಿಧ ಪೂಜೆಗಳನ್ನು ಸಲ್ಲಿಸಿದರು. ರಾತ್ರಿ ಮಹಾಪೂಜೆ ಬಳಿಕದ ನೈವೇದ್ಯಕ್ಕಾಗಿ ಉಂಡೆಗಳನ್ನು ಕಟ್ಟುವ ಸಂಪ್ರದಾಯ ಬೆಳಗ್ಗಿನ ಮಹಾಪೂಜೆ ಬಳಿಕ ನಡೆಯಿತು. ಇದರಲ್ಲಿ ಅದಮಾರು, ಪಲಿಮಾರು ಉಭಯ ಮಠಾಧೀಶರು, ಕಾಣಿಯೂರು ಶ್ರೀಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

ಸಜೀಪಮೂಡ: ಮನೆಗೆ ಸಿಡಿಲು ಬಡಿದು ಹಾನಿ

Bantwal ಸಜೀಪಮೂಡ: ಮನೆಗೆ ಸಿಡಿಲು ಬಡಿದು ಹಾನಿ

DK-Suresh

By Election: ಮಗನಿಗಾಗಿ ಎಚ್‌ಡಿಕೆ ನಿಮ್ಮ ಊರು ಹುಡುಕಿ ಬರುತ್ತಾರಷ್ಟೇ: ಡಿ.ಕೆ.ಸುರೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

fraud-2

ಆನ್‌ಲೈನ್‌ನಲ್ಲಿ ಅಧಿಕ ಲಾಭಾಂಶದ ಆಮಿಷ: ಬ್ಯಾಂಕ್‌ ಮ್ಯಾನೇಜರ್‌ಗೆ ಲಕ್ಷಾಂತರ ರೂ. ವಂಚನೆ

Udupi: ಹೂಡೆ ಬೀಚ್‌ನಲ್ಲಿ ಪ್ರವಾಸಿಗರ ಮೇಲೆ ಸ್ಥಳೀಯರಿಂದ ಹಲ್ಲೆ

Udupi: ಹೂಡೆ ಬೀಚ್‌ನಲ್ಲಿ ಪ್ರವಾಸಿಗರ ಮೇಲೆ ಸ್ಥಳೀಯರಿಂದ ಹಲ್ಲೆ

2

Hiriydaka: ಒಟಿಪಿ ನೀಡಿ 5 ಲಕ್ಷ ರೂ. ಕಳೆದುಕೊಂಡ ಯುವತಿ

balli

Padubidri: ನೇಣು ಬಿಗಿದು ವ್ಯಕ್ತಿ ಆತ್ಮಹ*ತ್ಯೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.