![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 31, 2021, 2:36 PM IST
ಧಾರವಾಡ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 60 ರಿಂದ 62 ಸೀಟುಗಳನ್ನು ಗೆದ್ದು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ, ಕಲಬುರ್ಗಿ ಹಾಗೂ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೇರಲಿದೆ. ಮೂರೂ ಜಿಲ್ಲೆಗಳಲ್ಲಿ ನಾನು ಪ್ರವಾಸ ಮಾಡಿದ್ದೇನೆ. ಬೆಳಗಾವಿಯಲ್ಲಿ ಪ್ರಸಕ್ತ ವರ್ಷ ಪಕ್ಷದ ಚಿಹ್ನೆ ಆಧಾರದ ಮೇಲೆ ಮತದಾನ ನಡೆಯಲಿದೆ ಎಂದರು.
ಹುಬ್ಬಳ್ಳಿ- ಧಾರವಾಡ ಪಾಲಿಕೆಯಲ್ಲಿ ಹತ್ತು ವರ್ಷ ಬಿಜೆಪಿ ಅಧಿಕಾರ ನಡೆಸಿದೆ. ಇಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳಿಗೆ ಮುನ್ನುಡಿ ಬರೆದಿದ್ದೇ ಬಿಜೆಪಿ. ಸ್ಮಾರ್ಟ್ ಸಿಟಿ ಯೋಜನೆ, ಅಮೃತ ಯೋಜನೆ, ಮನೆ ಮನೆಗೆ ಗಂಗೆ, ಮನೆ ಮನೆಗೆ ಗ್ಯಾಸ್ ಯೋಜನೆ ಸೇರಿದಂತೆ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಅವರ ನೇತೃತ್ವದಲ್ಲಿ ಅವಳಿ ನಗರಕ್ಕೆ ಸಾಕಷ್ಟು ಅನುದಾನ ತಂದು ಕೆಲಸ ಮಾಡಲಾಗಿದೆ. ಮನೆ- ಮನೆಗೆ ಮಹಾನಗರ ಪಾಲಿಕೆ ಎಂಬ ಧ್ಯೆಯೋದ್ದೇಶ ಇಟ್ಟುಕೊಂಡು ನಾವು ಚುನಾವಣೆಗೆ ಇಳಿದಿದ್ದೇವೆ ಎಂದರು.
ಇದನ್ನೂ ಓದಿ:ಕಾಂಗ್ರೆಸ್ ಮಾಡಿದ ಸಾರ್ವಜನಿಕ ಆಸ್ತಿಗಳನ್ನು BJP ಖಾಸಗಿ ಪಾಲಿಗೆ ನೀಡುತ್ತಿದೆ:ಎಚ್.ಕೆ.ಪಾಟೀಲ
ಇಲ್ಲಿನ ಸ್ಥಳೀಯ ಮಾಜಿ ಮುಖ್ಯಮಂತ್ರಿಗಳಾದಂತಹ ಜಗದೀಶ ಶೆಟ್ಟರ್, ಶಾಸಕರಾದ ಅಮೃತ ದೇಸಾಯಿ, ಅರವಿಂದ ಬೆಲ್ಲದ ಅವರು, ಸಾಕಷ್ಟು ಅನುದಾನ ತಂದು ವಾರ್ಡ್‌ಗಳ ಅಭಿವೃದ್ಧಿ, ನಗರ ಸೌಂದರ್ಯೀಕರಣ ಮಾಡಿದ್ದಾರೆ. ಹೀಗಾಗಿ ಪ್ರಸಕ್ತ ವರ್ಷ ಕೂಡ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಮುಂದಿನ ಐದು ವರ್ಷಗಳ ಕಾಲ ಅವಳಿನಗರ ಸ್ಮಾರ್ಟ್ ನಗರಗಳಾಗಿ ಬೆಳೆಯುವುದರಲ್ಲಿ ಯಾವುದೇ ಸಂದೇಹವಿಲ್ಲ. ನೆನೆಗುದಿಗೆ ಬಿದ್ದ ಎಲ್ಲಾ ಕಾಮಗಾರಿಗಳು ಮುಂದಿನ ದಿನಗಳಲ್ಲಿ ಪೂರ್ಣಗೊಳ್ಳಲಿವೆ ಎಂದರು.
ಪ್ರತ್ಯೇಕ ಮಹಾನಗರ ಪಾಲಿಕೆ ಬೇಕು ಎಂಬುದು ಜನರ ಕೂಗು ನಮ್ಮ ಕೂಗಲ್ಲ. ಅವಳಿ ಮಕ್ಕಳನ್ನು ನಾವು ಬೇರೆ ಮಾಡಿದಂತಾಗುತ್ತದೆ. ಜನರ ಅಭಿಪ್ರಾಯದ ಮೇರೆಗೆ ಪ್ರತ್ಯೇಕ ಮಹಾನಗರ ಪಾಲಿಕೆ ಬಗ್ಗೆ ನಾವು ಮುಂದುವರೆಯುತ್ತೇವೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಶಾಸಕ ಅಮೃತ ದೇಸಾಯಿ, ಮಹೇಶ ಟೆಂಗಿನಕಾಯಿ, ಮಾಜಿ ಶಾಸಕಿ ಸೀಮಾ ಮಸೂತಿ, ತವನಪ್ಪ ಅಷ್ಟಗಿ ಸೇರಿದಂತೆ ಇದ್ದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.