ತೇಜ್ಪಾಲ್ ಲೈಂಗಿಕ ದೌರ್ಜನ್ಯ ಪ್ರಕರಣ: ಸೆಪ್ಟೆಂಬರ್ 20ಕ್ಕೆ ವಿಚಾರಣೆ ಮುಂದೂಡಿಕೆ
Team Udayavani, Aug 31, 2021, 7:20 PM IST
ಪಣಜಿ: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪತ್ರಕರ್ತ ತರುಣ್ ತೇಜ್ಪಾಲ್ ಅವರನ್ನು ಖುಲಾಸೆಗೊಳಿಸಿರುವುದರ ವಿರುದ್ಧ ಗೋವಾ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಬಾಂಬೆ ಹೈಕೋರ್ಟ್ನ ಗೋವಾ ಪೀಠ ಸೆಪ್ಟೆಂಬರ್ 20ಕ್ಕೆ ಮುಂದೂಡಿದೆ.
ತರುಣ್ ತೇಜ್ಪಾಲ್, 2013ರಲ್ಲಿ ಗೋವಾದ ಐಷಾರಾಮಿ ಹೋಟೆಲ್ನ ಲಿಫ್ಟ್ನೊಳಗೆ ಮಹಿಳಾ ಸಹೋದ್ಯೋಗಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಗೋವಾದ ಸೆಷನ್ಸ್ ನ್ಯಾಯಾಲಯ ಮೇ 21ರಂದು ತೇಜ್ಪಾಲ್ ಅವರನ್ನು ಲೈಂಗಿಕ ದೌರ್ಜನ್ಯ ಆರೋಪಗಳಿಂದ ಖುಲಾಸೆಗೊಳಿಸಿತ್ತು. ಇದನ್ನು ಪ್ರಶ್ನಿಸಿ ಗೋವಾ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಇಂದು ಈ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ಮುಂದಿನ ವಿಚಾರಣೆನ್ನು ಸೆಪ್ಟೆಂಬರ್ 20ಕ್ಕೆ ಮುಂದೂಡಿತು.
ಕೋವಿಡ್ –19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಇಲ್ಲಿಯವರೆಗೆ ಈ ಪ್ರಕರಣದ ವಿಚಾರಣೆಯನ್ನು ಆನ್ಲೈನ್ ಮೂಲಕ ನಡೆಸಲಾಗುತ್ತಿತ್ತು. ಇದೇ ಮೊದಲ ಬಾರಿಗೆ ಈ ಪ್ರಕರಣದ ವಿಚಾರಣೆಯನ್ನು ಭೌತಿಕವಾಗಿ ನಡೆಸಲಾಯಿತು.
ಗೋವಾ ಸರ್ಕಾರದ ಮೇಲ್ಮನವಿಯ ವಿಚಾರಣೆಯನ್ನು ಗೌಪ್ಯವಾಗಿ ನಡೆಸುವಂತೆ ತೇಜ್ಪಾಲ್ ಈ ತಿಂಗಳ ಆರಂಭದಲ್ಲಿ ಬಾಂಬೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.