ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮಾಡಿದ ಸುಮಲತಾ : ಅಭಿಷೇಕ್ ರಾಜಕೀಯ ಭವಿಷ್ಯಕ್ಕೆ ಮುನ್ನುಡಿ?
Team Udayavani, Sep 1, 2021, 1:01 PM IST
ಮಂಡ್ಯ: ಚುನಾವಣೆಯಲ್ಲಿ ಕೊಟ್ಟ ಮಾತಿನಂತೆ ಸಂಸದೆ ಸುಮಲತಾಅಂಬರೀಶ್ ಮಂಡ್ಯದಲ್ಲಿಯೇ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ್ದಾರೆ.
ತಾಲೂಕಿನ ಹನಕೆರೆ ಗ್ರಾಮದ ಬಳಿಯ ಬೆಂಗಳೂರು ಮೈಸೂರು ಹೆದ್ದಾರಿ ಪಕ್ಕದಲ್ಲಿ ಮನೆ ನಿರ್ಮಾಣಕ್ಕೆ ಮುಂದಾಗಿದ್ದಾರೆ. ತಮ್ಮ ಆಪ್ತ ಹನಕೆರೆ ಶಶಿಕುಮಾರ್ ಅವರ ಮುಕ್ಕಾಲು ಎಕರೆ ಜಮೀನಿನಲ್ಲಿ ಮನೆ ನಿರ್ಮಾಣ ಮಾಡಲು ಪೂಜೆ ನೆರವೇರಿಸಿದ್ದಾರೆ.
ಕಳೆದ 2019ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿಯೇ ಮನೆ ನಿರ್ಮಾಣ ಮಾಡಿ ವಾಸವಿರುವುದಾಗಿ ಮಾತು ನೀಡಿದ್ದರು. ಅದರಂತೆ ಮುಕ್ಕಾಲು ಎಕರೆ ಜಮೀನು ಖರೀದಿಸಲಾಗಿದ್ದು, ಇನ್ನು 6 ತಿಂಗಳಲ್ಲಿಯೇ ಮನೆ ನಿರ್ಮಾಣ ಪೂರ್ಣಗೊಳಿಸಲು ಸಜ್ಜಾಗಿದ್ದಾರೆ.
ಈಗಾಗಲೇ ಮಂಡ್ಯ ನಗರದ ಚಾಮುಂಡೇಶ್ವರಿ ನಗರದಲ್ಲಿ ಬಾಡಿಗೆ ಮನೆ ಮಾಡಿರುವ ಸುಮಲತಾ ಮಂಡ್ಯ-ಮದ್ದೂರು ನಡುವಿನ ಹನಕೆರೆ ಗ್ರಾಮದಲ್ಲಿ ಸುಮಲತಾ ಸ್ವಂತ ಮನೆ ನಿರ್ಮಾಣ ಮಾಡುತ್ತಿರುವುದು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.
ವಿಧಾನಸಭೆ ಚುನಾವಣೆಗೆ ತಯಾರಿ?:
6-7 ತಿಂಗಳಲ್ಲಿ ಮನೆ ನಿರ್ಮಿಸಿ ಅಲ್ಲಿಂದಲೇ ವಿಧಾನಸಭೆ ಚುನಾವಣೆ ತಯಾರಿ ಆರಂಭಿಸುವ ಚಿಂತನೆ ನಡೆಸಲಾಗುತ್ತಿದೆ.
ಅಭಿಷೇಕ್ ರಾಜಕೀಯ ಭವಿಷ್ಯಕ್ಕೆ ಮುನ್ನುಡಿ?:
ಸ್ವಂತ ಮನೆ ನಿರ್ಮಾಣದಲ್ಲಿ ಪುತ್ರ ಹಾಗೂ ನಟ ಅಭಿಷೇಕ್ ರಾಜಕೀಯ ಭವಿಷ್ಯ ಅಡಗಿದೆ ಎನ್ನಲಾಗುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಕಳೆದ ಹಲವು ದಿನಗಳ ಹಿಂದೆ ಮದ್ದೂರಿಗೆ ಭೇಟಿ ನೀಡಿದ್ದ ಅಭಿಷೇಕ್ ರಾಜಕೀಯ ಪ್ರವೇಶದ ಸುಳಿವು ನೀಡಿದ್ದರು. ಮದ್ದೂರಿನಿಂದಲೇ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರು.
ಮುಂದಿನ ಚುನಾವಣೆಯಲ್ಲಿ ಮದ್ದೂರು ಕ್ಷೇತ್ರದಿಂದ ಅಭಿಷೇಕ್‌ನ ಕಣಕ್ಕಿಸಲು ಸುಮಲತಾ ರಾಜಕೀಯ ಸಿದ್ಧತೆ ನಡೆಸಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.
ಅಂಬಿ ಹುಟ್ಟೂರು ಡಿ.ಎ.ಕೆರೆ:
ರೆಬೆಲ್ ಸ್ಟಾರ್ ಅಂಬರೀಶ್ ಹುಟ್ಟೂರು ಕೂಡ ಮದ್ದೂರಿನ ದೊಡ್ಡರಸಿನಕೆರೆ ಗ್ರಾಮವಾಗಿದ್ದು, ತಂದೆ ಹುಟ್ಟೂರು ಕ್ಷೇತ್ರದಿಂದಲೇ ಮಗನ ಸ್ಪರ್ಧೆಗೆ ಸಿದ್ಧತೆ ನಡೆಸಲಾಗುತ್ತಿದೆ ಎಂದು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದ್ದು, ಮಂಡ್ಯ-ಮದ್ದೂರು ನಡುವೆ ಹನಕೆರೆ ಬಳಿ ಸ್ವಂತ ಮನೆ ನಿರ್ಮಾಣ ಮಾಡಲಾಗುತ್ತಿದೆ.
ಮಂಡ್ಯ-ಮದ್ದೂರು ನಡುವೆ ಇರುವ ಹನಕೆರೆ:
ಜಿಲ್ಲಾಕೇಂದ್ರ ಮಂಡ್ಯದಲ್ಲಿ ಮನೆ ನಿರ್ಮಾಣ ಮಾಡದೆ ಹನಕೆರೆಯಲ್ಲೇ ಸ್ವಂತ ಮನೆ ಮಾಡಲಾಗುತ್ತಿದೆ. ಒಟ್ಟಾರೆ ಸುಮಲತಾ ಕೊಟ್ಟ ಮಾತಿನಂತೆ ಮಂಡ್ಯದಲ್ಲಿ ಮನೆ ನಿರ್ಮಾಣ ಮಾಡಲಾಗುತ್ತಿದ್ದರೂ ಇದರ ಹಿಂದೆ ರಾಜಕೀಯ ತಂತ್ರವೂ ಅಡಗಿದೆ ಎಂಬುದಂತೂ ಸುಳ್ಳಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ
MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ
BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್ ಮಾತ್ರ!
High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫಲ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು