ಕೆಜಿಎಫ್‌ನ ನರ್ಸಿಂಗ್‌ ಕಾಲೇಜು ವಿರುದ್ಧ ಕ್ರಮ

ಕೇರಳದಿಂದ ಬರುವವರಿಗೆ ಸಾಂಸ್ಥಿಕ ಕ್ವಾರಂಟೈನ್‌ ಕಡ್ಡಾಯ; ಸಿಎಂ ಸಭೆಯಲ್ಲಿ ನಿರ್ಧಾರ: ಸಚಿವ ಡಾ.ಕೆ.ಸುಧಾಕರ್‌

Team Udayavani, Sep 1, 2021, 3:56 PM IST

ಕೆಜಿಎಫ್‌ನ ನರ್ಸಿಂಗ್‌ ಕಾಲೇಜು ವಿರುದ್ಧ ಕ್ರಮ

ಚಿಕ್ಕಬಳ್ಳಾಪುರ: ಕೇರಳದಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರಿಗೆ ಕಡ್ಡಾಯವಾಗಿ ಒಂದು ವಾರ ಸಾಂಸ್ಥಿಕ ಕ್ವಾರಂಟೈನ್‌ ಮಾಡಲು ಮುಖ್ಯಮಂತ್ರಿಗಳ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌
ತಿಳಿಸಿದರು.

ಕ್ಷೇತ್ರದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ ಗಡಿ ಜಿಲ್ಲೆಗಳಲ್ಲಿ ಯಾವ ರೀತಿ ನಿಯಮ ಪಾಲಿಸಬೇಕೆಂದು ಚರ್ಚಿಸಬೇಕಿದೆ.ಈಬಗ್ಗೆ ಮುಖ್ಯಮಂತ್ರಿಗಳೊಂದಿಗೆ
ಮಾತುಕತೆ ಮಾಡಲಾಗುವುದು. ಪ್ರತಿ ದಿನ ಗಡಿ ಜಿಲ್ಲೆಗಳಿಗೆ ಬರುವ ಜನರಿಗೆ ಯಾವ ರೀತಿ ನಿಯಮ ಪಾಲಿಸಬೇಕೆಂದು ಚರ್ಚಿಸಲಾಗುವುದು ಎಂದು ತಿಳಿಸಿದರು.

ಸಾಂಸ್ಥಿಕ ಕ್ವಾರಂಟೈನ್‌: ಕೇರಳದಿಂದ ಪ್ರತಿ ದಿನ ಅನೇಕರು ಗಡಿಜಿಲ್ಲೆಗಳಿಗೆ ಬರುತ್ತಾರೆ. ಶಿಕ್ಷಣ,ಆರೋಗ್ಯ ಸೇವೆ, ನಿತ್ಯದ ವಹಿವಾಟುಗಳಿಗೆ ದಕ್ಷಿಣ ಕನ್ನಡ, ಉಡುಪಿ ಮೊದಲಾದ ಜಿಲ್ಲೆಗಳಿಗೆ ಜನರು ಬರುತ್ತಾರೆ. ಇನ್ನು ವಿಮಾನ, ರೈಲುಗಳ ಮೂಲಕ ಬರುವವರಿಗೆ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್‌ ಮಾಡಬೇಕಿದೆ. ಇದಕ್ಕಾಗಿ ಕೋವಿಡ್‌ ಮಾರ್ಗಸೂಚಿ ರೂಪಿಸಲಾಗುವುದು ಎಂದು ಹೇಳಿದರು. ಕೆಜಿಎಫ್‌ನ ಶಿಕ್ಷಣ ಸಂಸ್ಥೆಯಲ್ಲಿ  32 ವಿದ್ಯಾರ್ಥಿಗಳಿಗೆ ಕೋವಿಡ್‌ ಸೋಂಕು ತಗುಲಿದೆ. ಈ ಎಲ್ಲಾ ವಿದ್ಯಾರ್ಥಿಗಳು ಕೇರಳದಿಂದ ಬಂದವರಾಗಿದ್ದಾರೆ. ಬುಧವಾರ ಸಂಸ್ಥೆಗೆ ಹೋಗಿ ಅದರ ಮೇಲೂ ಕ್ರಮ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳು ಕೇರಳದಿಂದ ಬಂದಾಗಲೇ ಅವರ ನೆಗೆಟಿವ್‌ ವರದಿ ಪಡೆಯಬೇಕಿತ್ತು. ಇದು ಸಂಸ್ಥೆ ಯ ಜವಾಬ್ದಾರಿಯಾೂ ಆಗಿದೆ ಎಂದು ವಿವರಿಸಿದರು.

ಇದನ್ನೂ ಓದಿ:ಆಣೆ ಮಾಡಿದ್ರೆ ಹಣ ಫಿಕ್ಸ್‌: ರಾಜಕೀಯದ ಹೊಸ ರಣತಂತ್ರ

ರಾಜ್ಯದಲ್ಲಿ 50 ಸಾವಿರ ಪ್ರಕರಣಗಳನ್ನು700-800ಕ್ಕೆ ತರಲಾಗಿದೆ. ಸರ್ಕಾರ ಇಷ್ಟು ಕಷ್ಟಪಟ್ಟು ಕೆಲಸ ಮಾಡುತ್ತಿದೆ ಎಂದ ಸಚಿವರು, ಮಕ್ಕಳಿಗೆ ಶೈಕ್ಷಣಿಕ ಭವಿಷ್ಯ ಹಾಗೂ ಸಂರಕ್ಷಣೆ ಸರ್ಕಾರದ ಜವಾಬ್ದಾರಿ. ಎಲ್ಲಾ ಶಾಲೆಗಳಲ್ಲಿ ವಿಶೇಷ ಮಾರ್ಗಸೂಚಿ ಪಾಲಿಸಲು ಸೂಚಿಸಲಾಗಿದೆ. ಶೇ.2ಕ್ಕಿಂತ ಹೆಚ್ಚು ಪಾಸಿಟಿವಿಟಿ ಕಂಡು ಬಂದರೆ ಶಾಲೆ ಮುಚ್ಚಿ ಕ್ರಮ ವಹಿಸಲಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮ,ಸಮಾರಂಭಗಳನ್ನುಮಾಡಬೇಕೆನ್ನುವುದು ಎಲ್ಲರಿಗೂ ಇದೆ. ಆದರೆ ಕೋವಿಡ್‌ ಸುರಕ್ಷತಾ ಕ್ರಮ ಗಳನ್ನು ಎಲ್ಲರೂ ಪಾಲಿಸಲೇ ಬೇಕು. ಕೋವಿಡ್‌ ತಡೆಗೆ ತಾಂತ್ರಿಕ ಸಲಹಾ ಸಮಿತಿಯಾ ಸಲಹೆ, ಆರೋಗ್ಯ ಇಲಾಖೆಯಾ ಸಲಹೆಗಳನ್ನು ಸರ್ಕಾರಕ್ಕೆ ತಿಳಿಸಲಾಗಿದೆ.ಕೋವಿಡ್‌ ನಿಯಾಂತ್ರಿಸುವ ಒಂದೇ ದೃಷ್ಟಿಯಿಂದ ನಾವು ನೋಡುತ್ತಿದ್ದೇವೆ.. ಮುಖ್ಯಮಂತ್ರಿಗಳು ಎಲ್ಲಾ ದೃಷ್ಟಿಕೋನದಿಂದ ನೋಡಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.

ಟಾಪ್ ನ್ಯೂಸ್

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

ಸಂಸದ ಡಾ. ಸುಧಾಕರ್‌ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್‌

MP ಡಾ. ಸುಧಾಕರ್‌ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್‌

13-bng

Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!

ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ: ಒಬ್ಬ ಮೃತ

Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

byndoor

Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.