ಜನರೊಂದಿಗೆ ಬೆರೆತು ಕಾರ್ಯನಿರ್ವಹಣೆ: ಜಿಲ್ಲಾಧಿಕಾರಿ ಕೂರ್ಮಾ ರಾವ್
Team Udayavani, Sep 2, 2021, 1:02 AM IST
ಉಡುಪಿ: ಜಿಲ್ಲೆಯ ವಿವಿಧೆಡೆ ಸಂಚರಿಸಿ ಜನರು ಮತ್ತು ಜನಪ್ರತಿನಿಧಿಗಳೊಡನೆ ಚರ್ಚಿಸಿ ಕಾರ್ಯಯೋಜನೆಗಳನ್ನು ರೂಪಿಸಲಾಗುವುದು ಎಂದು ನೂತನ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಅವರು “ಉದಯವಾಣಿ’ಗೆ ತಿಳಿಸಿದ್ದಾರೆ.
ಬುಧವಾರ ಅಧಿಕಾರ ಸ್ವೀಕರಿಸಿದ ಅವರು, ಮೊದಲು ಜಿಲ್ಲೆಯ ಸಮಸ್ಯೆಗಳನ್ನು ಅರಿತುಕೊಳ್ಳಬೇಕು. ಅನಂತರ ಪರಿಹರಿಸುವ ಕ್ರಮಕ್ಕೆ ಮುಂದಾಗಬೇಕು. ಸದ್ಯದ ಸ್ಥಿತಿಯಲ್ಲಿ ಕೋವಿಡ್ 19 ಪಾಸಿಟಿವಿಟಿ ಪ್ರಮಾಣವನ್ನು ಕಡಿಮೆಗೊಳಿಸಲು ಗಮನ ಹರಿಸುವೆ ಎಂದರು.
ಕಂಪ್ಯೂಟರ್ ಸೈನ್ಸ್‌ನಲ್ಲಿ ಬಿಟೆಕ್ ಪದವೀಧರರಾದ ರಾವ್ ಅವರು 2011ರಲ್ಲಿ ಭಾರತೀಯ ಆಡಳಿತ ಸೇವೆಗೆ ಆಯ್ಕೆಯಾದರು. ಮೂಲತಃ ಆಂಧ್ರ ಪ್ರದೇಶದವರಾದರೂ ಈಗ ಕರ್ನಾಟಕ ಶ್ರೇಣಿ ಅಧಿಕಾರಿಯಾಗಿ ಹತ್ತು ವರ್ಷಗಳಿಂದ ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಉಡುಪಿಗೆ ಬರುವ ಮುನ್ನ ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಆಡಳಿತ ನಿರ್ದೇಶಕರಾಗಿದ್ದ ರಾವ್ ಅದಕ್ಕೂ ಹಿಂದೆ ಯಾದಗಿರಿ ಜಿಲ್ಲಾಧಿಕಾರಿಯಾಗಿದ್ದರು. ಪ್ರೊಬೆಷನರಿ ಅವಧಿ ಬಳಿಕ ಭಟ್ಕಳದಲ್ಲಿ ಸಹಾಯಕ ಕಮಿಷನರ್ ಆಗಿ ಸೇವೆ ಸಲ್ಲಿಸಿ ಕರಾವಳಿಯ ಅನುಭವವನ್ನೂ ಪಡೆದವರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ
Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.