ಇಂದು ನಿಮ್ಮ ಗ್ರಹಬಲ: ಗುರುವಾರ ಯಾರಿಗೆ ಶುಭ-ಯಾರಿಗೆ ಲಾಭ?
Team Udayavani, Sep 2, 2021, 8:32 AM IST
02-09-2021
ಮೇಷ: ಆರೋಗ್ಯ ಗಮನಿಸಿ. ಕೆಲಸ ಕಾರ್ಯಗಳಲ್ಲಿ ಪ್ರಗತಿಗೆ ಅಡ್ಡಿ ಆತಂಕಗಳು. ವಿಘ್ನ ಅಡಚಣೆ ಆಗದಂತೆ ಸರಿಯಾಗಿ ವಿಚಾರ ಮಾಡಿ ಪ್ರವೃತ್ತರಾಗಿ. ಪರರ ಸಂಪತ್ತನ್ನು ವಿನಿಯೋಗಿಸುವಾಗ ಜಾಗ್ರತೆ ವಹಿಸಿ. ದೂರದ ವ್ಯವಹಾರಗಳಲ್ಲಿ ಪ್ರಗತಿ.
ವೃಷಭ: ಆರೋಗ್ಯದ ಬಗ್ಗೆ ಉದಾಸೀನತೆ ಸಲ್ಲದು. ಅನ್ಯರ ಮಾತನ್ನು ಅವಲಂಬಿಸುವಾಗ ನಿಮ್ಮತನವನ್ನು ಕಳೆದುಕೊಳ್ಳದೇ ಕಾರ್ಯ ಪ್ರವೃತ್ತರಾಗಿರಿ. ದೂರದ ವಿದೇಶದ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾಗಮ.
ಮಿಥುನ: ಮಕ್ಕಳಿಂದ ಸುಖ. ಬಂಧು ಜನರೊಂದಗೆ ವಿಲಾ. ಸ್ಥಾನಮಾನ ಪದವಿ ವೃದ್ಧಿ. ಶ್ರೇಯಸ್ಕರ ಕಾರ್ಯಗಳಿಂದ ಜನಮ್ಮನಣೆ. ಆಚಾರ ವಿಚಾರಗಳಲ್ಲಿ ತಲ್ಲೀನತೆ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಿದ್ದರಿಂದ ಸಂತೋಷ.
ಕರ್ಕ: ದೇವತಾರಾಧನೆಯಿಂದ ನೆಮ್ಮದಿ ಲಭಿಸೀತು. ಅನಾವಶ್ಯಕ ಸಂಚಾರಕ್ಕೆ ಆಸ್ಪದ ನೀಡದಿರಿ. ಅನ್ಯರ ವಿಚಾರದಲ್ಲಿ ಭಾಗಿಯಾಗದಿರಿ. ಆದಷ್ಟು ವಿಶ್ರಾಂತಿ ಪಡೆದು ದೈಹಿಕ ಮಾನಸಿಕ ಸುಖಅನುಭವಿಸಲು ಪ್ರಯತ್ನಿಸಿ.
ಸಿಂಹ: ಆರೋಗ್ಯ ಗಮನಿಸಿ. ದಂಪತಿಗಳು ಪರಸ್ಪರ ಪ್ರೋತ್ಸಾಹಿಸಿ ಸುಖ ಕಾಣಿರಿ. ಸ್ತ್ರೀ ಪುರುಷರು ಪರಸ್ಪರರ ವಿಚಾರದಲ್ಲಿ ತಾಳ್ಮೆಯಿಂದ ವ್ಯವಹರಿಸಿ. ಪ್ರಾಮಾಣಿಕತೆಗೆ ಆದ್ಯತೆ ನೀಡಿ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ.
ಕನ್ಯಾ: ಆರೋಗ್ಯ ಉತ್ತಮ. ಕುಟುಂಬ ಸುಖ. ಸಭೆ ಸಮಾರಂಭಗಳಲ್ಲಿ ಭಾಗವಹಿಸುವಿಕೆ. ವಾಕ್‌ಚತುರತೆ ಯಿಂದ ಕೂಡಿದ ಕಾರ್ಯ ವೈಖರಿ. ಉತ್ತಮ ಧನಾರ್ಜನೆ. ಸಾಮಾಜಿಕ ಸುಖಪ್ರಾಪ್ತಿಗಾಗಿ ಹಿತುಕ್ತಿ ಬೋಧನೆ. ಸಾಂಸಾರಿಕ ಸುಖವೃದ್ಧಿ.
ತುಲಾ: ಆರೋಗ್ಯ ವೃದ್ಧಿ. ವಸ್ತ್ರಾಭರಣ ಖರೀದಿ. ವಿವಾಹಾದಿ ಶುಭ ಸಮಾರಂಭಗಳಲ್ಲಿ ಪಾಲ್ಗೊಳ್ಳುವಿಕೆ. ಸುಖ ಸಂತೋಷ ವೃದ್ಧಿ. ದೀರ್ಘ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ.
ವೃಶ್ಚಿಕ: ಸರಕಾರಿ ಕಾರ್ಯಗಳಲ್ಲಿ ಮುನ್ನಡೆ. ಗಣ್ಯರ ಸಂಪರ್ಕ. ಗೌರವಾದಿ ವೃದ್ಧಿ . ಬಂಧು ಜನರೊಂದಿಗೆ ವಿಲಾಸ. ಧಾರ್ಮಿಕ ವಿಚಾರ ಆಸಕ್ತಿ. ಜನಮೆಚ್ಚುವ ಕೆಲಸ ಕಾರ್ಯಗಳಿಂದ ಕೀರ್ತಿ ಸಂಪಾದನೆ. ಗೃಹದಲ್ಲಿ ಸಂತಸದ ವಾತಾವರಣ.
ಧನು: ಆರೋಗ್ಯ ವೃದ್ಧಿ. ಸತ್ಕರ್ಮ ಸದಾಚಾರತೆ. ದೇವತಾ ಕಾರ್ಯಗಳಲ್ಲಿ ಭಾಗಿಯಾಗಿ ದಾನ ಧರ್ಮನಿರತ. ಗುರು ಹಿರಿಯರ ಪ್ರೀತಿ ಸಂಪಾದನೆ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ಮನೆಯಲ್ಲಿ ಸಂತಸ ಸಂಭ್ರಮ.
ಮಕರ: ಪಾರದರ್ಶಕತೆಗೆ ಆದ್ಯತೆ ನೀಡಿ. ಯಾರ ಮಾತಿಗೂ ಮರುಳಾಗದಿರಿ. ಉದ್ಯೋಗ ವ್ಯವಹಾರ ಗಳಲ್ಲಿ ಆಸ್ತಿ ವಿಚಾರಗಳಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ಅನ್ಯರ ಸಹಾಯ ಅಪೇಕ್ಷಿಸದೇ ಸ್ವಂತ ಪರಿಶ್ರಮದಲ್ಲಿ ವಿಶ್ವಾಸವಿಡಿ.
ಕುಂಭ: ನಯವಿನಯದಿಂದ ಕಾರ್ಯ ಪ್ರವೃತ್ತರಾಗಿ. ಯಾವುದೇ ಆತುರದ ನಿರ್ಧಾರ ಮಾಡದಿರಿ. ಪರರ ಮಾತನ್ನು ಆಲಿಸುವಾಗ ನಿಮ್ಮ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಗುಟ್ಟನ್ನು ಕಾಪಾಡಿಕೊಳ್ಳಿ. ಉತ್ತಮ ಧನಸಂಪತ್ತು ವೃದ್ಧಿ.
ಮೀನ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಸಾಹಸ ಪ್ರವೃತ್ತಿ. ಪ್ರತಿಸ್ಪರ್ಧಿಗಳಿಗೆ ಅವಕಾಶವಿಲ್ಲದಂತೆ ಕಾರ್ಯಮಗ್ನರಾಗಿ. ಉತ್ತಮ ಧನಾರ್ಜನೆ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪರಿಶ್ರಮ.ಮಾತಿನಲ್ಲಿ ಸ್ಪಷ್ಟತೆ ತಾಳ್ಮೆಇರಲಿ. ಉತ್ತಮ ಧನಾರ್ಜನೆ.
ಜಯತೀರ್ಥ ಆಚಾರ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ
2025 ರ ವರ್ಷ ಫಲ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
Daily Horoscope; ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಕಸ್ಮಾತ್ ಧನಾಗಮ
Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.