140ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಎರಡೇ ಶೌಚಾಲಯ | ಅನೈತಿಕ ಚಟುವಟಿಕೆಗಳ ತಾಣವಾಗಿರುವ ಶಾಲೆ

ಅಕ್ರಮ ಮತ್ತು ಅನೈತಿಕ ಚಟುವಟಿಕೆಗಳ ತಾಣವಾಗಿರುವ ತಾಲೂಕಿನ ಕುಟ್ಟಿ ಹೊಸೂರು ಗ್ರಾಮದ ಶಾಲೆಯ ದುಸ್ಥಿತಿ.

Team Udayavani, Sep 2, 2021, 11:59 AM IST

Two toilets for more than 140 students A school that is the site of immoral activities

ವರದಿ : ವಿನೋದ್ ಎನ್ ಗೌಡ

ಹನೂರು :  ಅನೈತಿಕ ಚಟುವಟಿಕೆಗಳ ತಾಣ ಮತ್ತು ಕುಡುಕರ ಅಡ್ಡೆಯಾಗಿರುವ ಶಾಲಾವರಣ, 140ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಎರಡೇ ಶೌಚಾಲಯ, ಎತ್ತರಕ್ಕೇರದ ಶಾಲಾ ಸುತ್ತುಗೋಡೆ, ಅರ್ಧಕ್ಕೆ ನಿಂತ  ಹೆಚ್ಚುವರಿ ಶೌಚಾಲಯದ ಕಾಮಗಾರಿ. ಇದು ತಾಲೂಕಿನ ಕುರಟ್ಟಿ ಹೊಸೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದುಸ್ಥಿತಿ.

ತಾಲೂಕಿನ ಕುರಟ್ಟಿ ಹೊಸೂರು ಗ್ರಾಮದಲ್ಲಿ ಶೇ. 90ಕ್ಕಿಂತ ಹೆಚ್ಚು ಜನರು ರೈತಾಪಿ ವರ್ಗದವರು, ಬಡತನ ರೇಖೆಗಿಂತ ಕೆಳಗಿರುವವರು ಮತ್ತು ದಿನಗೂಲಿ ನಂಬಿ ಜೀವನ ನಡೆಸುವವರಾಗಿದ್ದಾರೆ. ಇಲ್ಲಿನ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಇರುವ ಸರ್ಕಾರಿ ಶಾಲೆಯು ಅವ್ಯವಸ್ಥೆಯ ಆಗರವಾಗಿದ್ದು, ವಿದ್ಯಾರ್ಥಿಗಳಿಗೆ ಬೇಕಾದ ಮೂಲ ಸೌಕರ್ಯ ಮರೀಚಿಕೆಯಾಗಿದೆ.

140 ವಿದ್ಯಾರ್ಥಿಗಳಿಗೆ 2 ಶೌಚಾಲಯ : ಈ ಶಾಲೆಯಲ್ಲಿ ಸುಮಾರು 140ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, 2 ಶೌಚಾಲಯಗಳು ಮಾತ್ರ ಇವೆ. ಈ 2 ಶೌಚಾಲಯಗಳ ಪೈಕಿ 1 ಗಂಡು ಮಕ್ಕಳಿಗೆ, ಇನ್ನೊಂದು ಹೆಣ್ಣು ಮಕ್ಕಳು ಉಪಯೋಗಿಸುತ್ತಿದ್ದಾರೆ. ಆದರೆ ಕಳೆದ ಒಂದೂವರೆ ವರ್ಷದಿಂದ ಶಾಲೆಗಳು ನಡೆಯದ ಹಿನ್ನೆಲೆ ಕೆಲ ಕಿಡಿಗೇಡಿಗಳು ಹೆಣ್ಣುಮಕ್ಕಳು ಬಳಸುತ್ತಿದ್ದ ಶೌಚಾಲಯದ ಬಾಗಿಲನ್ನು ಮುರಿದು ಹಾಕಿದ್ದಾರೆ. ಅಲ್ಲದೆ ಶೌಚಾಲಯಕ್ಕೆ ನೀರು ಪೂರೈಕೆ ಮಾಡುವ ಸಿಂಟೆಕ್ಸ್ ಟ್ಯಾಂಕನ್ನು ಕೂಡ  ಒಡೆದು ಹಾಕಿದ್ದು ನೀರು ಪೂರೈಕೆಯು ಸ್ಥಗಿತಗೊಂಡಿದೆ.

ಅರ್ಧಕ್ಕೆ ನಿಂತ ಶೌಚಾಲಯ ಕಾಮಗಾರಿ : ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಶೌಚಾಲಯವಿಲ್ಲ, ಇರುವ ಶೌಚಾಲಯಗಳು ದುರಸ್ಥಿಯಲ್ಲಿರುವುದನ್ನು ಮನಗಂಡು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು, ಸದಸ್ಯರು ಮತ್ತು ಶಾಲಾ ಮುಖ್ಯೋಪಾಧ್ಯಾಯರು ಗ್ರಾಮ ಪಂಚಾಯಿತಿಗೆ ಪತ್ರ ವ್ಯವಹಾರ ನಡೆಸಿ ಮನವಿ ಮಾಡಿದ ಹಿನ್ನೆಲೆ ಗ್ರಾಮ ಪಂಚಾಯಿತಿವತಿಯಿಂದ ಹೆಚ್ಚುವರಿಯಾಗಿ ಒಂದು ಶೌಚಾಲಯವನ್ನು ನಿರ್ಮಾಣ ಮಾಡಲು ಅನುದಾನ ನೀಡಲಾಯಿತು. ಆದರೆ ಕಾಮಗಾರಿಯ ಹೊಣೆ ಹೊತ್ತ ಗುತ್ತಿಗೆದಾರರು ಅರ್ಧದಷ್ಟು ಕಾಮಗಾರಿಯನ್ನಷ್ಟೇ ನಿರ್ವಹಿಸಿದ್ದು ನೀರಿನ ಸಂಪರ್ಕ ಕಲ್ಪಸಿಲ್ಲ ಮತ್ತು ನಿರ್ವಹಿಸಿರುವ ಕಾಮಗಾರಿಯು ಕಳಪೆ ಗುಣಮಟ್ಟದಿಂದ ಕೂಡಿದೆ. ಈ ಬಗ್ಗೆ ಪ್ರಶ್ನಿಸದರೆ ನೀಡಿದ್ದ ಅನುದಾನಕ್ಕೆ ಅಷ್ಟು ಮಾತ್ರ ಕಾಮಗಾರಿ ನಿರ್ವಹಿಸಲು ಸಾಧ್ಯವಾಯಿತು ಎಂಬ ಹಾರಿಕೆಯ ಉತ್ತರ ನೀಡುತ್ತಿದ್ದಾರೆ.

ಸಂಜೆಯಾಗುತ್ತಲೆ ಅಕ್ರಮ ಚಟುವಟಿಕೆಗಳ ತಾಣ :  ಸೂರ್ಯಾಸ್ತಮವಾಗಿ ಕತ್ತಲು ಆವರಿಸುತ್ತಿದ್ದಂತೆ ಶಾಲಾ ಆವರಣವು ಅನೈತಿಕ ಚಟುವಟಿಕೆಗಳ ತಾಣ ಮತ್ತು ಕುಡುಕರ ಅಡ್ಡೆಯಾಗುತ್ತಿದೆ. ಗ್ರಾಮದ ಮತ್ತು ಅಕ್ಕ-ಪಕ್ಕದ ಕೆಲ ಗ್ರಾಮಸ್ಥರು ಸಂಜೆಯಾಗುತ್ತಲೇ ಶಾಲೆಯ ಸುತ್ತುಗೋಡೆಯನ್ನು ಹಾರಿ ಶಾಲಾ ಆವರಣವನ್ನು ಪ್ರವೇಶಿಸಿ ಮದ್ಯ ಸೇವಿಸಲು ಮತ್ತು ಇತರೆ ಅಕ್ರಮ ಚಟುವಟಿಕೆಗಳಿಗಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ದಿನಂ ಬೆಳಿಗ್ಗೆ ಶಾಲೆಗೆ ಆಗಮಿಸುವ ಶಿಕ್ಷಕರು, ಅಡುಗೆ ಸಹಾಯಕರನ್ನು ಮದ್ಯದ ಬಾಟಲಿಗಳು, ಪೌಚುಗಳು ಆಹ್ವಾನಿಸುತ್ತವೆ. ಕೂಡಲೇ ಅಡುಗೆ ಸಹಾಯಕಿಯರು ಅವುಗಳನ್ನು ತೆರವು ಮಾಡಿ ಶುಚಿಗೊಳಿಸುವ ಕಾರ್ಯ ಮಾಡಬೇಕಿದೆ. ಶಾಲೆಯ ಸುತ್ತುಗೋಡೆಯ ಎತ್ತರ ಕಡಿಮೆ ಇರುವುದೇ ಈ ಎಲ್ಲಾ ಅನೈತಿಕ ಕಾರ್ಯಕ್ರಮಗಳಿಗೆ ಕಾರಣವಾಗಿದ್ದು, ಸುತ್ತುಗೋಡೆಯನ್ನು ಎತ್ತರಗೊಳಿಸಿಕೊಡುವಂತೆ ಗ್ರಾಮ ಪಂಚಾಯಿತಿಗೆ ಎಷ್ಟೇ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ.

ಒಟ್ಟಾರೆ ಕುರಟ್ಟ ಹೊಸೂರು ಗ್ರಾಮದ ಶಾಲೆಯು ಮೂಲಭೂತ ಸಮಸ್ಯೆಗಳ ಜೊತೆ ಅಕ್ರಮ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದ್ದು ಶಾಲೆಯ ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಶೌಚಾಲಯ ಮತ್ತು ಶಾಲೆಯ ಸುತ್ತ್ತುಗೋಡೆಯನ್ನು ಎತ್ತರಗೊಳಿಸಬೇಕು  ಎಂದು ಪ್ರಜ್ಞಾವಂತ ನಾಗರೀಕರು ಆಗ್ರಹಿಸಿದ್ದಾರೆ.

*********

ಶಾಲೆಗೆ ಶೌಚಾಲಯ ನಿರ್ಮಾಣ ಮತ್ತು ಸುತ್ತಗೋಡೆ ಎತ್ತರ ಮಾಡುವ ಸಂಬಂಧ ಗ್ರಾಮ ಪಂಚಾಯಿತಿಗೆ ಹಲವಾರು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಸೆ.6ರಿಂದ 6 ಮತ್ತು 7ನೇ ತರಗಿತಿ ಪ್ರಾರಂಭವಾಘುತ್ತಿದ್ದು ಶೀಘ್ರದಲ್ಲಿಯೇ ಎಲ್ಲಾ ತರಗತಿಗಳು ಪ್ರಾರಂಭವಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆ ಅಗತ್ಯ ಕ್ರಮವಹಿಸಲು ಗ್ರಾಮ ಪಂಚಾಯಿತಿ ಅಧಿಕಾರಿಗಳು ಮುಂದಾಗಬೇಕು..

-ಗೋವಿಂದರಾಜು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ.

*****

ಹೊಸ ಶೌಚಾಲಯ ಕಟ್ಟಡ ಕಾಮಗಾರಿ ಅಪೂರ್ಣಗೊಂಡಿರುವ ಹಿನ್ನೆಲೆ ಹಣ ಬಿಡುಗಡೆಮಾಡಿಲ್ಲ. ಸುತ್ತುಗೋಡೆಯನ್ನು ಎತ್ತರ ಮಾಡಲು ಅಂದಾಜು ಪಟ್ಟಿ ತಯಾರಿಸಿ ಕ್ರಮವಹಿಸಲಾಗಿದೆ. ಮುಂದಿನ 15 ದಿನಗಳೊಳಗಾಗಿ ಶೌಚಾಲಯ ಕಾಮಗಾರಿಯನ್ನು ಪೂರ್ಣಗೊಳಿಸಿ, ದುರಸ್ಥಿಗೊಂಡ ಹಳೇ ಶೌಚಾಲಯಗಳನ್ನು  ನವೀಕರಿಸಿ, ಸುತ್ತುಗೋಡೆ ಕಾಮಗಾರ ಆರಂಭಿಸಲು ಕ್ರಮವಹಿಸಲಾಗುವುದು.

-ಗೋವಿಂದ, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ, ಕುರಟ್ಟಿ ಹೊಸೂರು.

******

ಟಾಪ್ ನ್ಯೂಸ್

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tiger

Gundlupet: ಬಂಡೆ ಮೇಲೆ ಹುಲಿ; ಆತಂಕ

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.