![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Sep 2, 2021, 1:20 PM IST
ಬೆಂಗಳೂರು : ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಶುಭಾಶಯಗಳು ಸುರಿಮಳೆಯಾಗುತ್ತಿದೆ. ಚಿತ್ರರಂಗದ ಆಪ್ತರು, ಕ್ರಿಕೆಟ್ ರಂಗದ ಸ್ನೇಹಿತರು, ಕುಟುಂಬದವರು ಹಾಗೂ ಅಭಿಮಾನಿಗಳಿಂದ ಕರುನಾಡಿನ ‘ಮಾಣಿಕ್ಯ’ನಿಗೆ ವಿಶ್ ಗಳ ರಾಶಿ ಹರಿದು ಬರುತ್ತಿದೆ.
ಸುದೀಪ್ ಅದ್ದೂರಿ ಬರ್ತ್‍ಡೇ ಆಚರಿಸಿಕೊಳ್ಳುತ್ತಿಲ್ಲವಾದರೂ ಅಭಿಮಾನಿಗಳ ಹೃದಯದಲ್ಲಿ ಸಂಭ್ರಮ ಮನೆ ಮಾಡಿದೆ. ಈ ಸಂಭ್ರಮ ಸಡಗರವನ್ನು ಇಂದು ರಿಲೀಸ್ ಆಗಿರುವ ವಿಕ್ರಾಂತ್ ರೋಣ ಚಿತ್ರದ ‘ಡೆಡ್ ಮ್ಯಾನ್ಸ್ ಟೀಸರ್ ಮತ್ತಷ್ಟು ಹೆಚ್ಚಿಸಿದೆ.
ವಿಕ್ರಾಂತ್ ರೋಣ ಟೀಸರ್ ಗೆ ಅಭಿಮಾನಿಗಳಿಂದ ಸಖತ್ ರೆಸ್ಪಾನ್ಸ್ ಸಿಕ್ಕಿದೆ. ಯುಟ್ಯೂಬ್‍ನಲ್ಲಿ ದಾಖಲೆ ಪ್ರಮಾಣದಲ್ಲಿ ವೀಕ್ಷಣೆ ಹಾಗೂ ಲೈಕ್ಸ್ ಗಳು ಬರುತ್ತಿವೆ.
https://t.co/O62nMCXQDp
It’s time for ‘The Deadman’s Anthem’#VikrantRonaGlimpse Out Now #HBDKicchaSudeep @KicchaSudeep #VikrantRona @JackManjunath @nirupbhandari @Asli_Jacqueline @neethaofficial @AJANEESHB @shaliniartss @Kichchacreatiin @TSeries @LahariMusic— Anup Bhandari (@anupsbhandari) September 2, 2021
ವಿಕ್ರಾಂತ್ ರೋಣ ಈಗಾಗಲೇ ಸ್ಯಾಂಡಲ್ ವುಡ್ ಮಾತ್ರವಲ್ಲದೆ ಬೇರೆ ಬೇರೆ ಭಾಷೆಗಳಲ್ಲಿಯೂ ನಿರೀಕ್ಷೆ ಹುಟ್ಟುಹಾಕಿದ ಸಿನಿಮಾವಾಗಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುತ್ತಿರುವ ವಿಕ್ರಾಂತ್ ರೋಣ ಸದ್ಯ ಡೆಡ್ ಮ್ಯಾನ್ಸ್ ಟೀಸರ್ ನಿಂದ ಮತ್ತಷ್ಟು ಕ್ರೇಜ್ ಹುಟ್ಟುಹಾಕಿದೆ. ನಿರ್ದೇಶಕ ಅನೂಪ್ ಭಂಡಾರಿ ಸಾರಥ್ಯದಲ್ಲಿ ಮೂಡಿಬರುತ್ತಿರುವ ಈ ಸಿನಿಮಾಗೆ ಜಾಕ್ ಮಂಜು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರದಲ್ಲಿ ನಿರೂಪ್ ಭಂಡಾರಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇನ್ನು ನೀತಾ ಅಶೋಕ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
ಇನ್ನು ಸಿನಿಮಾ ಹೈಲೆಟ್ಸ್ ಅಂದರೆ ಬಾಲಿವುಡ್ ಖ್ಯಾತ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಐಟಂ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಮೊದಲ ಬಾರಿಗೆ ಜಾಕ್ವೆಲಿನ್ ಕನ್ನಡ ಸಿನಿಮಾದಲ್ಲಿ ನಟಿಸಿದ್ದು ಈ ಹಾಡಿನ ಪೋಸ್ಟರ್ ಈಗಾಗಲೇ ವೈರಲ್ ಆಗಿದೆ. ಜಾಕ್ವೆಲಿನ್ ಕೂಡ ಸಿನಿಮಾದ ಬಗ್ಗೆ ಸಖತ್ ಎಕ್ಸಾಯಿಟ್ ಆಗಿದ್ದಾರೆ. ಈಗಾಗಲೇ ವಿಕ್ರಾಂತ್ ರೋಣ ಚಿತ್ರದ ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಯ ಆಡಿಯೋ ಹಕ್ಕು ಭರ್ಜರಿ ಮೊತ್ತಕ್ಕೆ ಸೇಲ್ ಆಗಿದೆ. ಲಹರಿ ಮ್ಯೂಸಿಕ್ ಸಂಸ್ಥೆ ಆಡಿಯೋ ಹಕ್ಕು ಖರೀದಿ ಮಾಡಿದೆ. ಹಿಂದಿಯಲ್ಲಿ ಟಿ-ಸಿರೀಸ್ ಸಂಸ್ಥೆ ವಿಕ್ರಾಂತ್ ರೋಣ ಮ್ಯೂಸಿಕ್ ತನ್ನ ತೆಕ್ಕೆಗೆ ಹಾಕಿಕೊಂಡಿದೆ. ಸದ್ಯ ಭಾರಿ ನಿರೀಕ್ಷೆ ಮೂಡಿಸಿರುವ ವಿಕ್ರಾಂತ್ ರೋಣ ಯಾವಾಗ ತೆರೆಗೆ ಬರಲಿದೆ ಎನ್ನುವುದು ಅಭಿಮಾನಿಗಳ ಕುತೂಹಲ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
You seem to have an Ad Blocker on.
To continue reading, please turn it off or whitelist Udayavani.