ಬಿಜೆಪಿ ಯೋಧ-ರೈತರಿಗೆ ಗೌರವ ನೀಡುವ ಪಕ್ಷ

Team Udayavani, Sep 2, 2021, 5:55 PM IST

2-12

ಹೊನ್ನಾಳಿ : ದೇಶ ಕಾಯುವ ಯೋಧರನ್ನು ಹಾಗೂ ದೇಶಕ್ಕೆ ಅನ್ನ ಕೊಡುವ ರೈತರನ್ನು ಗೌರವಿಸುವ ಪಕ್ಷ ಭಾರತೀಯ ಜನತಾ ಪಾರ್ಟಿ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ಹಿರೇಕಲ್ಮಠದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಂಘಟನೆಯಿಂದ ಅಧಿ ಕಾರ ಹಿಡಿದಿರುವ ಯಾವುದಾದರೂ ಪಕ್ಷ ಇದ್ದರೆ ಅದು ಬಿಜೆಪಿ.ಪಕ್ಷದ ಯಾವುದೇಕಾರ್ಯಕ್ರಮ ಹಮ್ಮಿಕೊಳ್ಳಲಿ ಭಾರತ್‌ ಮಾತಾಕೀ ಜೈ ಎನ್ನುವ ಉದ್ಘೋಷದಿಂದ ಕಾರ್ಯಕ್ರಮ ಪ್ರಾರಂಭವಾಗುವುದು ನಮ್ಮ ಹೆಮ್ಮೆಯ ಬಿಜೆಪಿಯಲ್ಲಿ ಮಾತ್ರ ಎಂದು ಹೇಳಿದರು.

ಪಕ್ಷದಲ್ಲಿ ವಿವಿಧ ಹಂತಗಳ ಪದಾಧಿಕಾರಿಗಳ ಅವಧಿ ನಿರ್ದಿಷ್ಟ ಅವಧಿಗೆ ಸೀಮಿತಗೊಳಿಸಿ ಎಲ್ಲ ಕಾರ್ಯಕರ್ತರಿಗೂ ಅವಕಾಶ ಮಾಡಿಕೊಡಲಾಗುತ್ತಿದೆ. ಕಾಂಗ್ರೆಸ್‌ ಪಕ್ಷದಲ್ಲಿ ರಾಜ್ಯಾಧ್ಯಕ್ಷ, ಜಿಲ್ಲಾಧ್ಯಕ್ಷ ಸ್ಥಾನಗಳನ್ನು ಗೊತ್ತು ಗುರಿ ಇಲ್ಲದೇ ಮುಂದುವರಿಸಿಕೊಂಡು ಹೋಗುವುದನ್ನು ನಾವು ಕಾಣುತ್ತೇವೆ. ಬಿಜೆಪಿಯಲ್ಲಿ ಎಲ್ಲ ಹಂತದ ಅಧ್ಯಕ್ಷರುಗಳಿಗೆ ಗೌರವ, ಮೌಲ್ಯ ಇದೆ ಬೇರೆ ಪಕ್ಷದಲ್ಲಿ ಇದನ್ನು ಕಾಣಲು ಸಾಧ್ಯವಿಲ್ಲ ಎಂದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆಗಳನ್ನು ಕಾರ್ಯಕರ್ತರು ಜನರ ಬಳಿಗೆ ಕೊಂಡೋಯ್ಯಬೇಕು ಆಗ ಮಾತ್ರ ನಮ್ಮ ಪಕ್ಷ ಹೆಚ್ಚು ಸದೃಢವಾಗುತ್ತದೆ ಹಾಗೂ ಚುನಾವಣೆಗಳನ್ನು ಗೆಲ್ಲಲು ಸಾಧ್ಯವಾಗುತ್ತದೆ. ಅಟಲ್‌ಬಿಹಾರಿ ವಾಜಪೇಯಿ ಪ್ರಧಾನಿಯಾದಾಗ ಬಹುದೊಡ್ಡ ಗೌರವ ದೇಶಕೆ R ಬಂತು. ಇಂದು ನರೇಂದ್ರ ಮೋದಿ ಅವರಿಂದ ಈ ಗೌರವ ಇಮ್ಮಡಿಯಾಗಿ ವಿಶ್ವವೇ ಭಾರತದತ್ತ ನೋಡುತ್ತಿದೆ. ಇದು ದೊಡ್ಡ ಹೆಗ್ಗಳಿಕೆ ಎಂದು ಹೇಳಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಹನಗವಾಡಿ ವೀರೇಶ್‌ ಮಾತನಾಡಿ, ಬೇರೆ ಪಕ್ಷದವರು ಚುನಾವಣೆಗಳ ಬಂದಾಗ ಮಾತ್ರ ಕಾರ್ಯಕ್ರಮಗಳನ್ನು ನೆಪ ಮಾತ್ರಕ್ಕೆ ಹಮ್ಮಿಕೊಳ್ಳುತ್ತಾರೆ. ಬಿಜೆಪಿ ತಳ ಮಟ್ಟದ ಬೂತ್‌ ಮಟ್ಟದಿಂದ ಹಿಡಿದು ರಾಷ್ಟ್ರ ಮಟ್ಟದವರೆಗೆ ಅನೇಕ ಕಾರ್ಯಕ್ರಮಗಳನ್ನು ನಿರಂತರ ಹಮ್ಮಿಕೊಂಡು ಯಶಸ್ವಿ ಕಾಣುತ್ತಿದೆ ಇದು ಬಿಜೆಪಿ ಹಾಗೂ ಇತರ ಪಕ್ಷಗಳಿಗಿರುವ ವ್ಯಾತ್ಯಾಸ ಎಂದು ಹೇಳಿದರು.

ಬೇರೆ ಪಕ್ಷಗಳಲ್ಲಿ ಅಧಿಕಾರದ ಹಂಚಿಕೆ ಇಲ್ಲದೆ ಕೇಂದ್ರೀಕೃತವಾದರೆ ನಮ್ಮ ಪಕ್ಷದಲ್ಲಿ ಅಧಿಕಾರ ವಿಕೇಂದ್ರೀಕರಣಗೊಂಡು ಸಾಮಾನ್ಯ ಕಾರ್ಯಕರ್ತರಿಗೂ ಅಧಿಕಾರ ಸಿಗುತ್ತದೆ. ಶಾಸಕ ರೇಣುಕಾಚಾರ್ಯ ಒಬ್ಬ ಸಾಮಾನ್ಯ ಕಾರ್ಯಕರ್ತರಾಗಿದ್ದು ಅವರು ಮೂರು ಬಾರಿ ಶಾಸಕರಾಗಿರುವುದೇ ಜೀವಂತ ನಿದರ್ಶನ‌ ಎಂದು ಹೇಳಿದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷ ನಂದೀಶ್‌, ವಿಧಾನ ಪರಿಷತ್‌ ಮಾಜಿ ಸದಸ್ಯ ಶಿವಯೋಗಿಸ್ವಾಮಿ, ಮಾಯಕೊಂಡ ಮಾಜಿ ಶಾಸಕ ಬಸವರಾಜನಾಯ್ಕ, ಬಿಜೆಪಿ ತಾಲೂಕು ಅಧ್ಯಕ್ಷ ಜೆ.ಕೆ.ಸುರೇಶ್‌ ಉಪಸ್ಥಿತರಿದ್ದರು. ಶಾಂತರಾಜ್‌ ಪಾಟೀಲ್‌ ಪ್ರಾಸ್ತಾವಿಕ ಮಾತನಾಡಿದರು. ನೆಲಹೊನ್ನೆ ಮಂಜುನಾಥ್‌ ನಿರೂಪಿಸಿದರು. ಸಿ.ಆರ್‌.ಶಿವಾನಂದ್‌ ವಂದಿಸಿದರು.

ಟಾಪ್ ನ್ಯೂಸ್

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

2

Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ

4(1)

Lupus Nephritis: ಲೂಪಸ್‌ ನೆಫ್ರೈಟಿಸ್‌ ರೋಗಿಗಳಿಗೆ ಒಂದು ಮಾರ್ಗದರ್ಶಿ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.