ಒಂದೇ ಮಾತಿನಲ್ಲಿ ರಾಜ್ಯ ನಾಯಕರಿಗೆ ಸ್ಪಷ್ಟ ಸಂದೇಶ ರವಾನಿಸಿದ ಅಮಿತ್ ಶಾ
Team Udayavani, Sep 3, 2021, 8:32 AM IST
ದಾವಣಗೆರೆ: ಮುಂದಿನ ವಿಧಾನಸಭೆ ಚುನಾವಣೆ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲೇ ಎದುರಿಸಿ ಮತ್ತೂಮ್ಮೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದು, ಈ ಮೂಲಕ ನಾಯಕತ್ವ ಕುರಿತು ರಾಜ್ಯ ನಾಯಕರಿಗೂ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.
ಬೊಮ್ಮಾಯಿ ಅವರು ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಹೇಳುವ ಮೂಲಕ ಒಂದೆಡೆ ಮುಖ್ಯಮಂತ್ರಿಗೆ ಆತ್ಮಸ್ಥೈರ್ಯ ತುಂಬುವ ಪ್ರಯತ್ನ ಮಾಡಿದ್ದರೆ, ಇನ್ನೊಂದೆಡೆ ಪಕ್ಷಕ್ಕೆ ಮತ್ತು ರಾಜ್ಯಕ್ಕೆ ಸಂದೇಶವನ್ನೂ ರವಾನಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದೇ ಸಂದರ್ಭದಲ್ಲಿ ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಇಳಿಸಲಿಲ್ಲ, ಹೊಸ ನಾಯಕತ್ವಕ್ಕೆ ಅವಕಾಶ ಕೊಡಲು ಸ್ವಯಂ ಪ್ರೇರಿತರಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅವರ ಕಾರ್ಯವೈಖರಿ ಬಗ್ಗೆ ಪಕ್ಷದ ರಾಷ್ಟ್ರೀಯ ನಾಯಕರಲ್ಲಿ ಯಾವುದೇ ಅಸಮಾಧಾನವಿಲ್ಲ ಎಂಬ ಅಮಿತ್ ಶಾ ಅವರ ಹೇಳಿಕೆಯೂ ಕುತೂಹಲ ಮೂಡಿಸಿದೆ.
ಇತ್ತೀಚೆಗಷ್ಟೇ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸಹ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದ್ದರು. ಇದೀಗ ಅಮಿತ್ ಶಾ ಸಹ ಬಹಿರಂಗವಾಗಿಯೇ ಹೇಳಿರುವುದು ರಾಜಕೀಯ ವಲಯದಲ್ಲೂ ಅಚ್ಚರಿ ಮೂಡಿಸಿದೆ.
ಇದನ್ನೂ ಓದಿ:ರಾಜ್ಯ ಭಾಷೆಯಾಗಿ ತುಳು : ಅಧಿವೇಶನದಲ್ಲಿ ಮೊಳಗಲಿದೆ ಕರಾವಳಿಯ ಕೂಗು !
ಕಾರ್ಯಕ್ರಮದಲ್ಲಿ ಅಮಿತ್ ಶಾ ಅವರ ಮಾತುಗಳು ಒಂದು ರೀತಿಯಲ್ಲಿ ಜಾಣ್ಮೆಯ ನಡೆ ಎಂದೇ ವ್ಯಾಖ್ಯಾನಿಸಲಾಗುತ್ತಿದ್ದು, “ರಾಜಕೀಯ ಚಾಣಕ್ಯ’ ಖ್ಯಾತಿಯ ಅಮಿತ್ ಶಾ ಅವರು ಪ್ರತಿಯೊಂದು ಮಾತನ್ನೂ ಸಾಕಷ್ಟು ಅಳೆದು ತೂಗಿ ಮಾತನಾಡುವುದರಿಂದ ಅವರ ಈ ಹೇಳಿಕೆ ಹೆಚ್ಚು ಪ್ರಾಮುಖ್ಯತೆ ಪಡೆದುಕೊಂಡಿದೆ. ಅಮಿತ್ ಶಾ ಅವರಈ ಹೇಳಿಕೆ ರಾಜ್ಯದ ಪ್ರತಿಪಕ್ಷಗಳ ನಾಯಕರ ಬಾಯಿ ಮುಚ್ಚಿಸುವ ಜತೆಗೆ ರಾಜಕೀಯ ವಲಯದ ಹಲವು ಊಹಾಪೋಹಗಳಿಗೆ ತೆರೆ ಎಳೆದಂತಾಗಿದೆ.
ಬಸವರಾಜ ಬೊಮ್ಮಾಯಿ ಅವರು ಬಿ.ಎಸ್. ಯಡಿಯೂರಪ್ಪ ಅವರ ನೆರಳಾಗಿ (ಶ್ಯಾಡೋ ಸಿಎಂ) ಅಧಿಕಾರ ನಡೆಸುತ್ತಿದ್ದು ಬಹಳ ದಿನ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯುವುದಿಲ್ಲ ಎಂದು ಪ್ರತಿಪಕ್ಷಗಳ ನಾಯಕರ ಹೇಳಿಕೆಗೂ ಇದು ಒಂದು ರೀತಿಯ ತಿರುಗೇಟು. ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ ಎದುರಿಸಲಾಗುವುದು ಎಂದು ಹೇಳುವ ಮೂಲಕ ಅವರಿಗೂ ಸಂದೇಶ ತಲುಪಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಬಸವರಾಜ ಬೊಮ್ಮಾಯಿ ಅವರಿಗೂ ನಿಮ್ಮದೇ ನಾಯಕತ್ವ, ನಿಮ್ಮದೇ ನೇತೃತ್ವ. ಸರ್ಕಾರಕ್ಕೆ ಒಳ್ಳೆಯ ಹೆಸರು ಬರುವಂತೆ ನೋಡಿಕೊಂಡು ಪಕ್ಷ ಹಾಗೂ ಸರ್ಕಾರದ ನಡುವೆ ಸಮನ್ವಯತೆ ಸಾಧಿಸಿ ಮುನ್ನಡೆಯಬೇಕು ಎಂಬ ಸೂಚನೆಯನ್ನೂ ಪರೋಕ್ಷವಾಗಿ ಕೊಟ್ಟಿದ್ದಾರೆಂಬ ಮಾತುಗಳು ಕೇಳಿಬರುತ್ತಿವೆ.
ಬಸವರಾಜ ಬೊಮ್ಮಾಯಿ ಅವರ ನಂತರ ಬೇರೊಬ್ಬರಿಗೆ ನಾಯಕತ್ವ ವಹಿಸಲಾಗುವುದು ಎಂಬ ಊಹಾಪೋಹಗಳಿಗೂ ತೆರೆ ಎಳೆಯುವಂತೆ ಅಮಿತ್ ಶಾ ಪಕ್ಷದ ಮನದಾಳ ಬಿಚ್ಚಿಟ್ಟಿದ್ದಾರೆ. ಇದರಿಂದ ಬಸವರಾಜ ಬೊಮ್ಮಾಯಿ ಅವರ ಮುಂದಿನ ಹಾದಿಯೂ ಸ್ಪಷ್ಟವಾಗಿರಲಿದೆ ಎಂದು ಹೇಳಲಾಗಿದೆ.
ಎಚ್.ಕೆ. ನಟರಾಜ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.