ಅಫ್ಘಾನಿಸ್ಥಾನದಲ್ಲಿ ಇಂದು ಹೊಸ ಸರ್ಕಾರ ರಚಿಸಲಿದೆ ತಾಲಿಬಾನ್
Team Udayavani, Sep 3, 2021, 9:02 AM IST
ಕಾಬೂಲ್: ಅಫ್ಘಾನಿಸ್ಥಾನ ದೇಶವನ್ನು ಸಂಪೂರ್ಣವಾಗಿ ವಶಪಡಿಸಿಕೊಂಡ ಮೂರು ವಾರಗಳ ಬಳಿಕ ತಾಲಿಬಾನ್ ತನ್ನದೇ ಆದ ಸರ್ಕಾರವನ್ನು ರಚಿಸಲು ಮುಂದಾಗಿದೆ. ಇಂದು ( ಸೆ.3) ತಾಲಿಬಾನ್ ಸರ್ಕಾರ ರಚಿಸಲಿದೆ ಎಂದು ವರದಿ ತಿಳಿಸಿದೆ.
ಶುಕ್ರವಾರದ ಪ್ರಾರ್ಥನೆಯ ನಂತರ ತಾಲಿಬಾನ್ ಸರ್ಕಾರ ರಚಿಸಲಿದೆ ಎಂದು ಮೂಲಗಳು ತಿಳಿಸಿವೆ. ಆಗಸ್ಟ್ 15 ರಂದು ಕಾಬೂಲ್ ಅನ್ನು ವಶಪಡಿಸಿಕೊಂಡ ನಂತರ ತಾಲಿಬಾನ್ ಅಫ್ಘಾನಿಸ್ತಾನವನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿತು.
ಸುಮಾರು ಎರಡು ದಶಕಗಳ ಬಳಿಕ ಅಮೆರಿಕವು ತನ್ನ ಸೈನ್ಯವನ್ನು ಹಿಂತೆಗೆದುಕೊಂಡ ಬಳಿಕ ತಾಲಿಬಾನ್ ತನ್ನ ನಿಯಂತ್ರಣ ಸಾಧಿಸಿದೆ. ಒಂದೊಂದೇ ಪ್ರದೇಶಗಳನ್ನು ವಶಕ್ಕೆ ಪಡೆದಿದ್ದ ತಾಲಿಬಾನ್ ಆಗಸ್ಟ್ 15ರಂದು ರಾಜಧಾನಿ ಕಾಬೂಲ್ ನ್ನು ವಶಕ್ಕೆ ಪಡೆದಿತ್ತು.
ಇದನ್ನೂ ಓದಿ:ತೈಲೋತ್ಪನ್ನಗಳ ಬೆಲೆ ಏರಿಕೆಗೆ ಕಡಿವಾಣ ಬೀಳಲಿ
ಸೋಮವಾರದಂದು ಅಮೆರಿಕ ತನ್ನ ಕೊನೆಯ ಸೇನಾ ತುಕಡಿಯನ್ನೂ ಹಿಂದಕ್ಕೆ ಕರೆಸಿಕೊಂಡಿದೆ. ಸದ್ಯ ಅಫ್ಘಾನ್ ನಲ್ಲಿ ಉಳಿದಿರುವ ಯಾವುದೇ ವಿದೇಶಿಯರಿಗೆ ತೆರಳಲು ದೇಶದಿಂದ ಸುರಕ್ಷಿತ ಮಾರ್ಗವನ್ನು ಅನುಮತಿಸುವುದಾಗಿ ತಾಲಿಬಾನ್ ಭರವಸೆ ನೀಡಿದೆ. ಆದರೆ ಕಾಬೂಲ್ ವಿಮಾನ ನಿಲ್ದಾಣ ಇನ್ನೂ ಮುಚ್ಚಿರುವುದರಿಂದ, ಅನೇಕರು ನೆರೆಯ ದೇಶಗಳಿಗೆ ಪಲಾಯನ ಮಾಡಲು ಪ್ರಯತ್ನಿಸುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Australia: ಜಾಲತಾಣ ಬಳಕೆಗೆ ಕನಿಷ್ಠ 16 ವರ್ಷ ಮಿತಿ ನಿಗದಿ?
US: ಮೊದಲ ದಿನವೇ ಜಗತ್ತಿಗೆ ಟ್ರಂಪ್ “ಎನರ್ಜಿ’ ಶಾಕ್!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.