ಶಾಂತಿಯುತವಾಗಿ ನಡೆಯುತ್ತಿರುವ ಉಪ ಚುನಾವಣೆ ಮತದಾನ
Team Udayavani, Sep 3, 2021, 1:43 PM IST
ದಾಂಡೇಲಿ : ನಗರದ ವಾರ್ಡ್ ನಂ:11 ಕ್ಕೆ ನಡೆಯುತ್ತಿರುವ ಉಪ ಚುನಾವಣೆಯ ಮತದಾನ ಪ್ರಕ್ರಿಯೆ ಶುಕ್ರವಾರ ಬೆಳಗ್ಗಿನಿಂದ ಆರಂಭವಾಗಿದೆ. ಮತದಾನ ಕೇಂದ್ರವಾದ ನಗರದ ಬಂಗೂರನಗರ ಜೂನಿಯರ್ ಕಾಲೇಜಿನ ಎರಡು ಮತಗಟ್ಟೆಗಳಲ್ಲಿ ಮತದಾನ ಕಾರ್ಯ ನಡೆಯುತ್ತಿದೆ. ಬೆಳಿಗ್ಗೆ 7 ಗಂಟೆಯಿಂದ ಆರಂಭಗೊಂಡ ಮತದಾನ ನಿಧಾನಗತಿಯಲ್ಲಿ ನಡೆಯುತ್ತಿರುವುದು ವಿಶೇಷವಾಗಿತ್ತು.
ಇದನ್ನೂ ಓದಿ:‘ಉಗುಳು’ ಹೇಳಿಕೆ : ಬಿಜೆಪಿಗೆ ಸೇರಿದ ಮೇಲೆ ಅವರ ಮಾನಸಿಕ ಸ್ಥಿತಿ ಹೀಗಾಗಿದೆ : ಭೂಪೇಶ್
ಮತದಾನಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ತಾಲೂಕಾಡಳಿತ ಮಾಡಿದ್ದು, ತಹಶೀಲ್ದಾರ್ ಶೈಲೇಶ್ ಪರಮಾನಂದ ಅವರ ಮೇಲುಸ್ತುವಾರಿಯಲ್ಲಿ ನಡೆಯುತ್ತಿರುವ ಚುನಾವಣೆಯಲ್ಲಿ ಚುನಾವಣಾಧಿಕಾರಿಯಾಗಿ ಪಿ.ಐ.ಮಾನೆ ಹಾಗೂ ಸಹಾಯಕ ಚುನಾವಣಾಧಿಕಾರಿಯಾಗಿ ಅಭಯ್.ಎಸ್.ವಾಡಕರ ಅವರು ಮತ್ತು ತಾಲೂಕಿನ ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮತದಾನದ ಕೇಂದ್ರದ ಸುತ್ತಲೂ ಪೊಲೀಸರನ್ನು ನಿಯೋಜಿಸಲಾಗಿದೆ. ಡಿವೈಎಸ್ಪಿ ಗಣೇಶ್.ಕೆ.ಎಲ್, ಸಿಪಿಐ ಪ್ರಭು ಗಂಗನಹಳ್ಳಿಯವರ ಮಾರ್ಗದರ್ಶನದಲ್ಲಿ ಪಿಎಸೈ ಯಲ್ಲಪ್ಪ.ಎಸ್ ಅವರ ನೇತೃತ್ವದಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಮತಗಟ್ಟೆಯ ಸ್ವಲ್ಪ ದೂರದಲ್ಲಿ ಎರಡು ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಮುಖಂಡರುಗಳು ಮತಯಾಚನೆಯಲ್ಲಿ ತೊಡಗಿಕೊಂಡಿರುವುದು ಕಂಡುಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ
Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.