ಕೃಷಿಯಲ್ಲಿ ಸ್ವಾವಲಂಬನೆ ಸಾಧಿಸಲು 10 ಸಾವಿರ ಕೃಷಿ ಉತ್ಪಾದಕರ ಸಂಘ ರಚನೆ : ಕರಂದ್ಲಾಜೆ
Team Udayavani, Sep 4, 2021, 12:29 PM IST
ಕಲಬುರಗಿ : ಕೃಷಿಯಲ್ಲಿ ಸ್ವಾವಲಂಬನೆ ಸಾಧಿಸಲು ಹಾಗೂ ಅರ್ಥಿಕವಾಗಿ ಬಲವರ್ದನೆಗೊಳಿಸಲು ದೇಶಾದ್ಯಂತ 10 ಸಾವಿರ ಕೃಷಿ ಉತ್ಪಾದಕರ ಸಂಘ ( ಎಫ್ ಪಿಓ) ರಚಿಸಲು ಉದ್ದೇಶಿಸಲಾಗಿದೆ ಎಂದು ಕೇಂದ್ರದ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರದ್ಲಾಂಜೆ ತಿಳಿಸಿದರು.
ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘ ಹಮ್ಮಿಕೊಂಡಿರುವ ಯುವಕರ ನಡೆ- ಕೃಷಿಯ ಕಡೆ ಕಾರ್ಯಾಗಾರದಲ್ಲಿ ಆಗಮಿಸಿದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘಗಳ ರಚನೆ ಮೂಲಕ ರೈತರಿಗೆ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ, ಸೂಕ್ತ ಬೆಲೆ ಜತೆಗೆ ಕೃಷಿ ಕಾರ್ಯಕ್ಕೆ ಬೇಕಾಗುವ ಮೂಲ ಸೌಕರ್ಯಗಳ ನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಆರ್ಥಿಕ ಸೌಲಭ್ಯ ಕಲ್ಪಿಸುವುದು ಇತರ ಹತ್ತಾರು ನಿಟ್ಟಿನ ಕಾರ್ಯಗಳು ಸಂಘಗಖ ಮುಖಾಂತರ ಕೃಷಿಯಲ್ಲಿ ಕ್ರಾಂತಿ ತರಲು ಉದ್ದೇಶಿಸಲಾಗುತ್ತಿದೆ ಎಂದು ವಿವರಣೆ ನೀಡಿದರು.
ಸಂಘಗಳಲ್ಲಿ ರೈತರು ಕೃಷಿ ಯಂತ್ರೋಪಕರಣಗಳನ್ನು ಹೊಲದ ಕೃಷಿ ಕಾರ್ಯಕ್ಕೆ ಪಡೆಯುವುದು, ಒಂದು ಜಿಲ್ಲೆ ಒಂದು ಕೃಷಿ ಉತ್ಪನ್ನ ಕ್ಕೆ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸಿ ಮಾರುಕಟ್ಟೆ ಕಲ್ಪಿಸಲಾಗುವುದು. ಹೀಗಾಗಿ ಈಗಾಗಲೇ ಸಂಘಗಳ ರಚನೆಗೆ ಚಾಲನೆ ನೀಡಲಾಗಿದೆ.ರಾಜ್ಯದಲ್ಲಿ ಮುಂದಿನ ಮೂರು ವರ್ಷದಲ್ಲಿ 750 ಕೃಷಿ ಉತ್ಪಾದಕರ ಸಂಘ ರಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ. ಹೀಗಾಗಿ ಯುವಕರು ಕೃಷಿಯಲ್ಲಿ ಆಸಕ್ತಿಯಿಂದ ತೊಡಗಿಸಿ ಕೊಳ್ಳಬೇಕೆಂದರು.
ಇದನ್ನೂ ಓದಿ :ಸರ್ಕಾರಿ ಮನೆಗಳಿಗೆ ಸಚಿವರ ಸರ್ಕಸ್: ಯೋಗೇಶ್ವರ್ ಮನೆ ಮೇಲೆ ಐವರ ಕಣ್ಣು
ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವುದಕ್ಕೂ ಮುನ್ನ ಕೃಷಿ ಇಲಾಖೆಗೆ 23 ಸಾವಿರ ಕೋಟಿ ಹಂಚಿಕೆಯಾಗುತ್ತಿತ್ತು. ಇಡೀ ದೇಶದ ಜನಕ್ಕೆ ಇಷ್ಟು ಹಣ ಬಹಳ ಕಡಿಮೆಯಾಗಿತ್ತು. ಹೀಗಾಗಿ ರೈತರ ನೆರವಿಗೆ ಬರುವ ನಿಟ್ಟಿನಲ್ಲಿ ಮೋದಿ ಅವರು 1.23 ಲಕ್ಷ ಕೋಟಿ ರೂ ಹಣವನ್ನು ಕೃಷಿ ಇಲಾಖೆಗೆ ಹಾಗೂ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಗೆ (ಐಸಿಎಆರ್) 8,500 ಕೋಟಿ ರೂ.ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದರು.
ಕ್ಲಸ್ಟರ್ ಆಧಾರಿತ ಮಾರುಕಟ್ಟೆ: ಈಗಾಗಲೇ ಕಾಫಿ, ಮೆಣಸು, ರೋಸ್ ಈರುಳ್ಳಿಗೆ ಸೃಷ್ಟಿಯಾದಂತೆ ರೈತರ ಇತರೆ ಉತ್ಪನ್ನಗಳಿಗೆ ಕ್ಲಸ್ಟರ್ ಆಧಾರಿತ ಮಾರುಕಟ್ಟೆಯನ್ನು ಸೃಷ್ಟಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಸಚಿವೆ ಶೋಭಾ ಹೇಳಿದರು.
ಜಿಡಿಪಿಯಲ್ಲಿ ಒಟ್ಟಾರೆ ಕೃಷಿ ಪಾಲು ಮುಂಚೆ ಶೇ 13ರಷ್ಟಿತ್ತು. ಅದನ್ನು ಶೇ 20ಕ್ಕೆ ಹೆಚ್ಚಿಸಲಾಗಿದೆ. ಮುಂದಿನ ಮೂರ್ನಾಲ್ಕು ವರ್ಷಗಳಲ್ಲಿ ಶೇ 25ಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದರು.
ಇದನ್ನೂ ಓದಿ :ನಿಜಕ್ಕೂ ಮೇಲುಗೈ ಸಾಧಿಸಿದ್ದು ಯಾರು? ಪಂಜ್ ಶೀರ್ ಕಣಿವೆಯ ಯುದ್ಧದಲ್ಲಿ ಏನಾಯ್ತು…
ತೊಗರಿ ಬೆಂಬಲ ಬೆಲೆ ಹೆಚ್ಚಿಸುವ ವಿಶ್ವಾಸ: ಕಲ್ಯಾಣ ಕರ್ನಾಟಕದ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ತೊಗರಿ ಬೆಂಬಲ ಬೆಲೆ ಹೆಸರು, ಉದ್ದುಗಿಂತ ಕಡಿಮೆ ಇರುವುದು ತಮ್ಮ ಗಮನಕ್ಕಿದೆ. ಹೀಗಾಗಿ ಈ ಸಲ
ತೊಗರಿಗೆ ಬೆಂಬಲ ಬೆಲೆ ಹೆಚ್ಚಿಸುವ ಪ್ರಸ್ತಾವ ಕೇಂದ್ರದ ಕೃಷಿ ಉತ್ಪನ್ನ ಗಳ ಬೆಲೆ ನಿಗದಿ ಆಯೋಗದ ಮುಂದಿದೆ ಎಂದು ಕೇಂದ್ರದ ಸಚಿವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.
ರೈತರಿಗೆ ಕೇಂದ್ರದಿಂದ ನೀಡಲಾಗುವ ವಿವಿಧ ಸಬ್ಸಿಡಿ ಯನ್ನು ನೇರವಸಗಿ ಅವರ ಖಾತೆಗೆ ಜಮಾ ಮಾಡುವ ಚಿಂತನೆ ಸಹ ನಡೆದಿದೆ ಎಂದರು.
ಹರಿಯಾಣದಲ್ಲಿ ರೈತರ ಮೇಲಿನ ಲಾಠಿ ಪ್ರಹಾರ, ರಾಜ್ಯದ ಕೃಷಿ ಇಲಾಖೆಯಿಂದ ಸ್ಥಗಿತಗೊಂಡ ಹಲವು ಯೋಜನೆಗಳ ಬಗ್ಗೆ ಸುದ್ದಿಗಾರರ ಪ್ರಶ್ನೆಗಳಿಗೆ ಸಚಿವೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.
ಶಾಸಕರಾದ ಬಸವರಾಜ ಮತ್ತಿಮೂಡ, ಶಶೀಲ್ ಜಿ.ನಮೋಶಿ, ಕರ್ನಾಟಕ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಲಿಂಗಾರೆಡ್ಡಿ ಬಾಸರೆಡ್ಡಿ, ಕೃಷ್ಣಾ ಕಾಡಾ ಅಧ್ಯಕ್ಷ ಶರಣಪ್ಪ ತಳವಾರ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುರೇಶ ಸಜ್ಜನ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ರೈತ ಮುಖಂಡ ಬಸವರಾಜ್ ಇಂಗಿನ್, ಬಿಜೆಪಿ ಎಸ್ಸಿ ಮೋರ್ಚಾ ಉಪಾಧ್ಯಕ್ಷ ಅಂಬಾರಾಯ ಅಷ್ಠಗಿ ಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.