ವೀಕೆಂಡ್ ಕರ್ಫ್ಯೂಗೆ ಮಿಶ್ರ ಪ್ರತಿಕ್ರಿಯೆ
Team Udayavani, Sep 4, 2021, 12:46 PM IST
ಕಾಪು : ಕೋವಿಡ್ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಸರಕಾರ ಮತ್ತು ಜಿಲ್ಲಾಡಳಿತ ಘೋಷಿಸಿರುವ ವೀಕೆಂಡ್ ಕರ್ಪ್ಯೂ ಗೆ ಕಾಪುವಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ದಿನಸಿ, ತರಕಾರಿ ಮತ್ತು ಅವಶ್ಯಕ ಸಾಮಾಗ್ರಿಗಳ ಅಂಗಡಿಗಳನ್ನು ಹೊರತುಪಡಿಸಿ ಉಳಿದ ಅಂಗಡಿಗಳನ್ನು ತೆರೆಯಲು ಅವಕಾಶ ನಿರಾಕರಿಸಲಾಗಿದೆಯಾದರೂ ಕೆಲವೆಡೆಗಳಲ್ಲಿ ವ್ಯಾಪಾರ ವಹಿವಾಟುಗಳು ಎಂದಿನಂತೆ ನಡೆಯುತ್ತಿವೆ. ವಾಹನ ಸಂಚಾರ ಕೂಡಾ ಎಂದಿನಂತೆ ಕಂಡುಬಂದಿದ್ದು ಜನಸಂಚಾರ ಕೂಡ ಮುಂದುವರೆದಿದೆ.
ಇದನ್ನೂ ಓದಿ : ಬೆರಿಸ್ಟೋ ಮೇಲೆ ಹಲ್ಲೆ ಆರೋಪ: ವಿಚಿತ್ರ ಅಭಿಮಾನಿ ‘ಜಾರ್ವೋ’ ಇದೀಗ ಪೊಲೀಸರ ಅತಿಥಿ!
ಕಾಪು ಪೇಟೆಯಲ್ಲಿ ಅವಶ್ಯಕ ಸಾಮಾಗ್ರಿಗಳ ಅಂಗಡಿಗಳನ್ನು ಹೊರತು ಪಡಿಸಿ, ಹೆಚ್ಚಿನ ಅಂಗಡಿಗಳು ಮುಚ್ಚಲ್ಪಟ್ಟಿದ್ದರೆ ಗ್ರಾಮೀಣ ಪ್ರದೇಶದಲ್ಲಿ ವ್ಯಾಪಾರ ವಹಿವಾಟುಗಳು ಎಂದಿನಂತೆ ನಡೆದಿವೆ.
ಕಾಪು ಪೊಲೀಸರು ಅಲ್ಲಲ್ಲಿ ವಾಹನ ತಪಾಸಣೆ ಸಹಿತವಾಗಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ನಡೆಸುತ್ತಿದ್ದು, ಮಧ್ಯಾಹ್ನದ ಬಳಿಕ ವೀಕೆಂಡ್ ಕರ್ಫ್ಯೂಗೆ ಪೂರ್ಣ ಬೆಂಬಲ ವ್ಯಕ್ತವಾಗುವ ಸಾಧ್ಯತೆಗಳಿವೆ.
ವೀಕೆಂಡ್ ಕರ್ಪ್ಯೂ ಹಿನ್ನೆಲೆಯಲ್ಲಿ ಕೆಲವೆಡೆ ಈ ಹಿಂದೆ ನಿಗದಿಪಡಿಸಿದ ಸಾರ್ವಜನಿಕ ಸಭೆ ಸಮಾರಂಭಗಳನ್ನು ಮತ್ತು ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದ್ದು, ಕೆಲವೆಡೆ ಕೋವಿಡ್ ನಿಯಮಗಳನ್ನು ಮೀರಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು ಅಂತಹ ಪ್ರದೇಶಗಳಿಗೆ ಪೊಲೀಸರು ಮತ್ತು ಅಧಿಕಾರಿಗಳು ಸ್ವಯಂ ಪ್ರೇರಿತರಾಗಿ ತೆರಳಿ ಎಚ್ಚರಿಕೆ ನೀಡಿರುವುದಾಗಿಯೂ ವರದಿಯಾಗಿದೆ.
ಇದನ್ನೂ ಓದಿ : ಕೃಷಿಯಲ್ಲಿ ಸ್ವಾವಲಂಬನೆ ಸಾಧಿಸಲು 10 ಸಾವಿರ ಕೃಷಿ ಉತ್ಪಾದಕರ ಸಂಘ ರಚನೆ : ಕರಂದ್ಲಾಜೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕರಾವಳಿಯಲ್ಲಿ ಕಾಶ್ಮೀರಿ ಕೇಸರಿ ಬೆಳೆದ ಟೆಕ್ಕಿಗಳು; ಹೊಸ ಪ್ರಯೋಗದಲ್ಲಿ ಮೊದಲ ಯಶಸ್ಸು !
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
ಆನ್‌ಲೈನ್‌ನಲ್ಲಿ ಅಧಿಕ ಲಾಭಾಂಶದ ಆಮಿಷ: ಬ್ಯಾಂಕ್ ಮ್ಯಾನೇಜರ್‌ಗೆ ಲಕ್ಷಾಂತರ ರೂ. ವಂಚನೆ
Udupi: ಹೂಡೆ ಬೀಚ್‌ನಲ್ಲಿ ಪ್ರವಾಸಿಗರ ಮೇಲೆ ಸ್ಥಳೀಯರಿಂದ ಹಲ್ಲೆ
Hiriydaka: ಒಟಿಪಿ ನೀಡಿ 5 ಲಕ್ಷ ರೂ. ಕಳೆದುಕೊಂಡ ಯುವತಿ
MUST WATCH
ಹೊಸ ಸೇರ್ಪಡೆ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.