ವಿದ್ಯುತ್ ಬಿಲ್ ನಲ್ಲಿ ಅಕ್ರಮವೆಸಗಿದ ಮೂವರ ಅಮಾನತು: ಸಚಿವ ಸುನಿಲ್ ಕುಮಾರ್
Team Udayavani, Sep 4, 2021, 4:12 PM IST
ಬೆಂಗಳೂರು: ವಿದ್ಯುತ್ ಬಿಲ್ ನಲ್ಲಿ ತಿದ್ದುಪಡಿ ಮಾಡಿ ಬೆಸ್ಕಾಂಗೆ ನಷ್ಟ ಉಂಟು ಮಾಡಿದ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಿರುವುದಾಗಿ ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಮುಳಬಾಗಿಲು ಉಪವಿಭಾಗದ ಕಿರಿಯ ಸಹಾಯಕ ಮೆಹಬೂಬ್ ಪಾಷ, ಕಿರಿಯ ಸಹಾಯಕಿ ಗಾಯತ್ರಮ್ಮ, ಹಾಗೂ ಕಿರಿಯ ಸಹಾಯಕಿ ಸುಜಾತಮ್ಮ ಅಮಾನತಿಗೊಳಗಾದ ಸಿಬ್ಬಂದಿಯಾಗಿದ್ದಾರೆ.
ಇವರು ಪ್ರತಿ ತಿಂಗಳು ಗ್ರಾಹಕರಿಗೆ ವಿದ್ಯುತ್ ಬಿಲ್ಲು ವಿತರಿಸುವ ವೇಳೆಯಲ್ಲಿ ಕೆಲವು ಬಿಲ್ಲುಗಳನ್ನು ಮಾರ್ಪಾಟು ಮಾಡಿ ಅದರ ಮೊತ್ತವನ್ನು ಕಡಿಮೆ ಮಾಡಿ ಆ ಮೂಲಕ ಬೆಸ್ಕಾಂಗೆ ಬರಬೇಕಾದ ವಾಸ್ತವಿಕ ಆದಾಯದಲ್ಲಿ ನಷ್ಟ ಉಂಟಾಗಲು ಕಾರಣರಾಗಿದ್ದಾರೆ, ಈ ಹಿನ್ನೆಲೆಯಲ್ಲಿ ಇವರ ಮೇಲೆ ಕೋಲಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಕೂಡ ದಾಖಲಿಸಲಾಗಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ತಾವು ಇಲಾಖೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ, ಅಕ್ರಮವೆಸಗಿ ಆ ಮೂಲಕ ಇಲಾಖೆಗೆ ನಷ್ಟ ಉಂಟು ಮಾಡುವ ಯಾವುದೇ ಅಧಿಕಾರಿ, ಸಿಬ್ಬಂದಿ ಇರಲಿ ಅವರ ಮೇಲೆ ಮುಲಾಜಿಲ್ಲದೆ ಕ್ರಮ ವಹಿಸಲಾಗುವುದು ಎಂದು ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ.
ಪ್ರಸ್ತುತ ಈ ಮೂವರು ಸಿಬ್ಬಂದಿಗಳು ಬೇರೆ, ಬೇರೆ ಐಪಿ ವಿಳಾಸಗಳ ಗಣಕಯಂತ್ರಗಳಲ್ಲಿ ಐಡಿ ಗಳನ್ನು ಉಪಯೋಗಿಸಿ ವಂಚನೆ ಎಸಗಿರುವುದು ದೃಢ ವಾಗಿರುವುದರಿಂದ ಹಾಗೂ 8 ಆರ್ ಆರ್ ಸಂಖ್ಯೆಗಳಲ್ಲಿ ಒಟ್ಟು 444966-00 ಗಳಷ್ಟು ಮೊತ್ತ ಕಂಪನಿಗೆ ನಷ್ಟವಾಗಿರುವುದರಿಂದ ಇವರ ಮೇಲೆ ಇಲಾಖಾ ವಿಚಾರಣೆ ನಡೆಸಿ ಶಿಸ್ತು ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ, ಜೊತೆಗೆ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆಯನ್ನು ಸಹ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.