2023ರ ಎಲೆಕ್ಷನ್: ಜೆಡಿಎಸ್‌ಗೆ ಸ್ವತಂತ್ರ ಅಧಿಕಾರ
ಜೆಡಿಎಸ್‌ಕಾರ್ಯಕರ್ತರ ಸಭೆಯಲ್ಲಿ ಭವಾನಿ ರೇವಣ್ಣ ಬಣ್ಣನೆ
Team Udayavani, Sep 4, 2021, 4:41 PM IST
ಹೊಳೆನರಸೀಪುರ: ರಾಜ್ಯದಲ್ಲಿ ಬರುವ 2023 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಜೆಡಿಎಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಜಿಪಂ ಸದಸ್ಯೆ ಹಾಗು ಜಿಪಂ ಶಿಕ್ಷಣ ಹಾಗು ಆರೋಗಯ ಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ರೇವಣ್ಣ ನುಡಿದರು.
ಪಟ್ಟಣದ ಚೆನ್ನಾಂಬಿಕ ಕನ್ವೆಂಷನಲ್ ಹಾಲ್ ನಲ್ಲಿ ತಾಲೂಕು ಮಟ್ಟದ ಜೆಡಿಎಸ್ ಕಾರ್ಯಕರ್ತರ ಸಭೆಯನ್ನು ಉದ್ಧೇಶಿಸಿ ಮಾತನಾಡಿದರು. ರಾಜ್ಯದಲ್ಲಿ ಕುಮಾರಸ್ವಾಮಿ ಅವರ ನೇತ್ರತ್ವದಲ್ಲಿ ಅಧಿಕಾರಕ್ಕೆ ಬರುವುದು ಶತಸಿದ್ದ. ಆದರೆ ಅದನ್ನು ಅಧಿಕಾರಕ್ಕೆ ತರುವಲ್ಲಿ ನಮ್ಮ ಪಕ್ಷ ಕಾರ್ಯಕತರುಗಳು ಮತ್ತು ಅಭಿಮಾನಿಗಳು ಪಕ್ಷ ದ ಸದಸ್ಯತ್ವವನ್ನು ಪಡೆದುಕೊಳ್ಳುವುದರಿಂದ ಮತ್ತಷ್ಟು ಬಲಗೊಳ್ಳಲಿದೆ. ಆದ್ದರಿಂದ ಇಂದಿನಿಂದ ಜಿಲ್ಲೆ ಹಾಗು ತಾಲೂಕಿನಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ಅಭಿಯಾನ ಆರಂಭಿಸಲು ಈ ಸಭೆ ಕರೆಯಲಾಗಿದೆ ಜೊತೆಗೆ ಬರುವ ತಾಪಂ,ಜಿಪಂ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಜಯಬೇರಿ ಭಾರಿಸಲು ನಮ್ಮ ಮತದಾರರ ಆರ್ಶಿವಾದ ಬೇಕಿದೆ ಎಂದರು.
ಇದನ್ನೂ ಓದಿ:ಬಂಗಾಳ ವಿಧಾನಸಭೆಯಲ್ಲಿ ಬಿಜೆಪಿ ಶಾಸಕರ ಸಂಖ್ಯೆ ಇಳಿಕೆ: ಬಿಜೆಪಿ ಶಾಸಕ ಸೌಮೆನ್ TMCಗೆ ಸೇರ್ಪಡೆ
ಜೆಡಿಎಸ್ ಪಕ್ಷ ರಾಜ್ಯದ ಎಲ್ಲಾ ಜಿಲ್ಲೆ ತಾಲೂಕುಗಳಲ್ಲಿ ಪಕ್ಷದ ಮುಖಂಡರುಗಳು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಿದ್ದು
ಪ್ರತಿಯೊಬ್ಬರು ಸದಸ್ಯತ್ವ ಪ ಡೆದು ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರಲು ಕಾರಣರಾಗಬೇಕೆಂದು ಮನವಿ ಮಾಡಿದರು.
ಯಾವ ತಾಲೂಕು ಮತ್ತು ಜಿಲ್ಲೆ ಅತಿಯಾದ ಹೆಚ್ಚು ಸದಸ್ಯತ್ವವನ್ನು ಮಾಡುವುದೋ ಆ ಜಿಲ್ಲೆಯ ಮತ್ತು ತಾಲೂಕಿನ ಅಧ್ಯಕ್ಷರನ್ನು ಮಾಜಿ
ಪ್ರಧಾನಿ ದೇವೇಗೌಡ ಅವರು ರಾಜ್ಯ ಮಟ್ಟದಲ್ಲಿ ಗೌರವಿಸಿ ಸನ್ಮಾನಿಸಲಿದ್ದಾರೆ. ಈ ಸನ್ಮಾನದ ಭಾಗ್ಯ ನಮ್ಮ ಜಿಲ್ಲೆ ಮತ್ತು ತಾಲೂಕಿಗೆ ಲಭಿಸುವಂತಾಗಬೇಕು.ಎಂಬ ಭಯಕೆ ತಮ್ಮದಾಗಿದೆ.ಇದಕ್ಕೆ ಕಾರಣ ದೇವೇಗೌಡ ಸ್ವಂತ ಜಿಲ್ಲೆ ಮತ್ತು ತಾಲೂಕು ಹೊಳೆನರಸೀಪುರ ಆಗಿರುವುದರಿಂದ ನಮ್ಮ ತಾಲೂಕಿಗೆ ಈ ಭಾಗ್ಯ ದೊರಕಲಿ ಎಂಬ ಹೆಬ್ಬಯಕೆ ತಮ್ಮದಾಗಿದೆ ಎಂದರು.
ಸದಸ್ಯತ್ವ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಹಾಗು ಶಾಸಕ ಎಚ್.ಡಿ.ರೇವಣ್ಣ ಮಾತನಾಡಿ, ಜಿಲ್ಲೆ ಮತ್ತು ತಾಲೂಕಿಗೆ ಬಹಳಷ್ಟು ಅಭಿವೃದ್ದಿಗಳ
ಕಾಮಗಾರಿಗೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದೆ ಎಂದು ವಿವರಿಸಿದರು. ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ತಾಲೂಕಿನ
ಗ್ರಾಮೀಣ ಪ್ರದೇಶಗಳಿಂದ ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.