KMFನ್ನು ನಂ.1 ಸಂಸ್ಥೆಯನ್ನಾಗಿ ಪರಿವರ್ತಿಸುವುದೇ ನನ್ನ ಗುರಿ : ಬಾಲಚಂದ್ರ ಜಾರಕಿಹೊಳಿ


Team Udayavani, Sep 4, 2021, 6:36 PM IST

KMFನ್ನು ನಂ.1 ಸಂಸ್ಥೆಯನ್ನಾಗಿ ಪರಿವರ್ತಿಸುವುದೇ ನನ್ನ ಗುರಿ : ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು : ಕಳೆದ ಎರಡು ವರ್ಷಗಳಿಂದ ಕೆಎಂಎಫ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ತೃಪ್ತಿ ತಮಗಿದೆ. ನಂದಿನಿ ಉತ್ಪನ್ನಗಳನ್ನು ದೇಶಾಧ್ಯಂತ ವಿಸ್ತರಿಸಿ ಕೆಎಂಎಫ್‍ನ್ನು ನಂ.1 ಸಂಸ್ಥೆಯನ್ನಾಗಿ ಪರಿವರ್ತಿಸುವ ಇರಾದೆ ಹೊಂದಿರುವುದಾಗಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

ಶುಕ್ರವಾರ ರಾತ್ರಿ ನಗರದ ಖಾಸಗಿ ಹೊಟೇಲ್‍ನಲ್ಲಿ ಕೆಎಂಎಫ್ ಅಧ್ಯಕ್ಷರಾಗಿ ಎರಡು ವರ್ಷ ಪೂರೈಸಿದ ನಿಮಿತ್ತ ಜರುಗಿದ ಆಡಳಿತ ಮಂಡಳಿ ಮತ್ತು ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಹಿರಿಯರ ಆಶಯದಂತೆ ಕೆಎಂಎಫ್‍ನ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುವುದಾಗಿ ತಿಳಿಸಿದರು.

ಈ ಸಾಲಿನಲ್ಲಿ 90.62 ಲಕ್ಷ ಲೀಟರ್ ಹಾಲು ಶೇಖರಿಸಿದ್ದು, ಇದೊಂದು ಗರಿಷ್ಠ ದಾಖಲೆಯಾಗಿದೆ. ಮುಂದಿನ ಮೂರು ವರ್ಷದ ಅವಧಿಯಲ್ಲಿ 1.35 ಕೋಟಿ ಲೀ ಹಾಲು ಶೇಖರಣೆ ಮಾಡುವ ಗುರಿ ಹೊಂದಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ ಬೆಂಗಳೂರು, ಕೋಲಾರ ಮತ್ತು ತುಮಕೂರು ಹಾಲು ಒಕ್ಕೂಟಗಳಲ್ಲಿ ಮಾತ್ರ ರಾಸುಗಳಿಗೆ ವಿಮೆಗೊಳಪಡಿಸಲಾಗಿತ್ತು. ಆದರೆ ಪ್ರಸಕ್ತ ಸಾಲಿನಿಂದ ಎಲ್ಲ ಜಿಲ್ಲಾ ಹಾಲು ಒಕ್ಕೂಟಗಳಲ್ಲಿ ರಾಸುಗಳನ್ನು ವಿಮೆಗೆ ಒಳಪಡಿಸಿದ್ದು, ಪ್ರಸ್ತುತ 8 ಲಕ್ಷ ರಾಸುಗಳಿಗೆ ಗುಂಪು ವಿಮೆಗೆ ಒಳಪಡಿಸಲಾಗಿದೆ ಎಂದು ಹೇಳಿದರು.

ತಾವು ಅಧಿಕಾರವಹಿಸಿಕೊಂಡ ಕೆಲವೇ ದಿನಗಳಲ್ಲಿ ಕೋವಿಡ್ ಅಲೆ ಪ್ರಾರಂಭವಾಯಿತು. ದೇಶವ್ಯಾಪಿ ಲಾಕ್‍ಡೌನ್ ಆಗಿದ್ದರಿಂದ ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಹಾಲು ಉತ್ಪಾದಕರಿಗೆ ಶೇಖರಣಾ ದರವನ್ನು ಕಡಿಮೆ ಮಾಡದೇ ಮತ್ತು ರಜಾ ಘೋಷಿಸದೇ ಉತ್ಪಾದಿಸಿದ ಎಲ್ಲ ಹಾಲನ್ನು ಉತ್ಪಾದಕರಿಂದ ಖರೀದಿ ಮಾಡಲಾಗಿದೆ. ಹೈನು ರಾಸುಗಳಲ್ಲಿ ಕಾಣಿಸಿಕೊಳ್ಳುವ ಕೆಚ್ಚಲು ಬಾವು ರೋಗವನ್ನು ತಡೆಗಟ್ಟಿ ಗುಣಮಟ್ಟದ ಹಾಲು ಶೇಖರಣೆ ಮತ್ತು ಇದರ ರೋಗ ನಿಯಂತ್ರಣಕ್ಕಾಗಿ ಆದ್ಯತೆ ನೀಡಲಾಗಿದೆ. ಈ ಅವಧಿಯಲ್ಲಿ 62 ಲಕ್ಷ ಅಂದರೆ ಶೇ 50 ರಷ್ಟು ಅನುದಾನವನ್ನು ಒಕ್ಕೂಟಗಳಿಗೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ರೋಗ ನಿಯಂತ್ರಣಕ್ಕೆ 200 ಲಕ್ಷ ರೂ.ಗಳನ್ನು ಮೀಸಲಿಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ :ಸಂತೆಕಟ್ಟೆ ಕೊಲೆ ಪ್ರಕರಣ: ಕಿರುಕುಳ, ಮದುವೆ ವಿಳಂಬವೇ ಕೊಲೆಗೆ ಕಾರಣ :ಯುವತಿ ಪೋಷಕರ ಹೇಳಿಕೆ

ಪ್ರಥಮ ಬಾರಿಗೆ ಬಲ್ಕ್‍ಮಿಲ್ಕ್ ಕೂಲರ್ ಡೇಟಾ ಲಾಗರ್ ಕಿಟ್‍ನ್ನು ಕಹಾಮ ವ್ಯಾಪ್ತಿಯ ಹಾಲು ಒಕ್ಕೂಟಗಳ ಸಂಘಗಳಲ್ಲಿ ಅಳವಡಿಸಲಾಗಿದ್ದು, ಇದಕ್ಕೆ ಸಂಸ್ಥೆಯ ವತಿಯಿಂದ ಶೇ 25 ರಷ್ಟು ಅನುದಾನ ನೀಡಲಾಗುತ್ತಿದೆ. ಇದರಿಂದ ಬಿಎಂಸಿ ನಿರ್ವಹಣೆಯ ಶುದ್ಧ ಹಾಲು ಉತ್ಪಾದನೆಗೆ ಅನುಕೂಲವಾಗಿದೆ. ಪಶು ಆಹಾರ ರಿಯಾಯತಿ ದರಕ್ಕೆ ಸಂಬಂಧಿಸಿದಂತೆ ಎರಡು ವರ್ಷದಲ್ಲಿ ಅಂದಾಜು 500 ರಿಂದ 2000 ರೂ. ವರೆಗೆ ವಿವಿಧ ಸಂದರ್ಭಗಳಲ್ಲಿ ಪ್ರತಿ ಮೆಟ್ರಿಕ್ ಟನ್‍ಗೆ ರಿಯಾಯತಿ ನೀಡಲಾಗಿದೆ.

ಪಶು ಆಹಾರವನ್ನು ಎರಡು ವರ್ಷಗಳಲ್ಲಿ 14 ಜಿಲ್ಲಾ ಹಾಲು ಒಕ್ಕೂಟಗಳಿಗೆ ಅವಶ್ಯವಿರುವ ಪಶು ಆಹಾರವನ್ನು 55 ರಿಂದ 63 ಸಾವಿರ ಮೆಟ್ರಿಕ್ ಟನ್ ಪಶು ಆಹಾರ ಉತ್ಪಾದಿಸಿ ಉತ್ಪಾದಕರ ಬೇಡಿಕೆ ಅನುಸಾರ ಸರಬರಾಜು ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಹೊಸದಾಗಿ ಮಂಡ್ಯ, ಅರಕಲಗೂಡು ಹಾಗೂ ಸಾದಲಿಯಲ್ಲಿ ಪಶು ಆಹಾರ ಘಟಕಗಳನ್ನು ನಿರ್ಮಿಸುವ ಉದ್ಧೇಶ ಹೊಂದಲಾಗಿದೆ ಎಂದು ಹೇಳಿದರು.

ಕೋವಿಡ್ ಸಂದರ್ಭದಲ್ಲೂ ಹಾಲಿನ ಮಾರಾಟವನ್ನು ಅತ್ಯಂತ ಜಾಗೃತಿಯಿಂದ ಮಾರುಕಟ್ಟೆಯಲ್ಲಿ ಬೇಡಿಕೆ ಕುಸಿಯದಂತೆ ಕರ್ತವ್ಯ ನಿರ್ವಹಿಸಲಾಗಿದೆ. ಲಾಕ್‍ಡೌನ್ ಸಂದರ್ಭದಲ್ಲಿ ಹಲವು ಅಡತಡೆಗಳನ್ನು ಮೀರಿ ಈ ಹಿಂದಿನ ಮಾರಾಟವನ್ನು ಮೊದಲಿನಂತೆ ಮರಳಿ ಪಡೆಯಲಾಗಿದೆ. ಹೊರ ರಾಜ್ಯಗಳಲ್ಲಿ ಮಾರಾಟವನ್ನು ವಿಸ್ತರಿಸಲಾಗಿದ್ದು, ಪ್ರಮುಖ ವಾಣಿಜ್ಯ ನಗರಗಳಾದ ಮುಂಬಯಿ, ಪುಣೆ, ಗೋವಾ, ಹೈದ್ರಾಬಾದ್‍ಗಳಲ್ಲಿ ಹಾಲು ಮಾರಾಟದ ಬಲವರ್ಧನೆಗೊಳಿಸಲಾಗಿದೆ. ಇತ್ತೀಚೆಗೆ ಮಹಾರಾಷ್ಟ್ರದ ವಿದರ್ಭ ಪ್ರಾಂತ್ಯ (ನಾಗಪುರ್) ನಂದಿನಿ ಚಿಲ್ಲರೆ ಮಾರಾಟ ಜಾಲವನ್ನು ವಿಸ್ತರಿಸಲಾಗಿದ್ದು, ಮುಂದಿನ ದಿನಗಳಲ್ಲಿಯೂ ಸಹ ದೇಶವಲ್ಲದೇ ಜಾಗತಿಕವಾಗಿಯೂ ನಂದಿನಿ ಉತ್ಪನ್ನಗಳ ಮಾರಾಟ ಜಾಲಕ್ಕೆ ಹೆಚ್ಚಿನ ಒತ್ತು ನೀಡುವುದಾಗಿ ಅವರು ತಿಳಿಸಿದರು.

ಇದನ್ನೂ ಓದಿ :ಹಳೆಯಂಗಡಿ : ಮನೆಯ ಮೇಲ್ಛಾವಣಿ ಕುಸಿದು ಬಿದ್ದು ಮಹಿಳೆ ಗಂಭೀರ

ಹಾಲು ಮಾರಾಟಗಾರರು ಮತ್ತು ಗ್ರಾಹಕರನ್ನು ಗಮನದಲ್ಲಿಟ್ಟುಕೊಂಡು ಮಾರಾಟಗಾರರಿಗೆ ಲಾಭಾಂಶ ಹೆಚ್ಚಳ ಮಾಡಲಾಗಿದೆ. ಗ್ರಾಹಕರಿಗೆ ಪ್ರತಿ ಲೀಟರ್ ಹಾಲಿನೊಂದಿಗೆ 40 ಎಂಎಲ್ ಉಚಿತ ಹಾಲನ್ನು ನೀಡಲಾಗಿದೆ. ಹಾಲು, ಮೊಸರು ಅಲ್ಲದೇ ನಂದಿನಿ ಬ್ರಾಂಡ್‍ನ ಇತರೇ ಸಿಹಿ ಉತ್ಪನ್ನಗಳನ್ನು, ಇತರೇ ಉಪ ಉತ್ಪನ್ನಗಳ ಮಾರಾಟವನ್ನು ಬಲಪಡಿಸಲು ಕ್ರಮ ಕೈಗೊಳ್ಳಲಾಗಿದೆ. ರಾಜ್ಯಾಧ್ಯಂತ 150 ಹೊಸ ನಂದಿನಿ ಪಾರ್ಲರ್‍ಗಳನ್ನು ತೆರೆಯಲಾಗಿದ್ದು, ಹೊಸ ಕಲ್ಪನೆಗಳನ್ನು ನೀಡಲಾಗಿದೆ. ನಂದಿನಿ ಕೆಫೆ ಮೂ ಎಂಬ ಆಧುನಿಕ ಶೈಲಿಯ ಪಾರ್ಲರ್‍ಗಳನ್ನು ಸಹ ತೆರೆಯಲಾಗಿದೆ. ಮುಂದಿನ ದಿನಗಳಲ್ಲಿ 5000 ಹೊಸ ನಂದಿನಿ ಮಳಿಗೆಗಳು ಮತ್ತು 100 ಕೆಫೆ ಮೂ ಮಳಿಗೆಗಳನ್ನು ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

ಕಳೆದ ಎರಡು ವರ್ಷಗಳ ಅವಧಿಯಲ್ಲಿ 40 ಹೊಸ ಉತ್ಪನ್ನಗಳನ್ನು ಮಾರುಕಟ್ಟೆಗಳಿಗೆ ಪರಿಚಯಿಸಲಾಗಿದೆ. ಇದರಲ್ಲಿ ಬ್ರೆಡ್ ಸಹ ಒಳಗೊಂಡಿದೆ. ಈಗಾಗಲೇ ಹೊರ ದೇಶಗಳಿಗೆ ನಂದಿನಿ ಉತ್ಪನ್ನಗಳನ್ನು ಮಾರಾಟ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಮಲೇಶಿಯಾ, ನಾನ್ ಯುರೋಪಿಯನ್ ರಾಷ್ಟ್ರಗಳಲ್ಲಿ ನಂದಿನಿ ಸಿಹಿ ಉತ್ಪನ್ನಗಳನ್ನು ರಫ್ತು ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಶೀಘ್ರದಲ್ಲಿ ಬೆಳಗಾವಿಯಲ್ಲಿ ಎನ್‍ಎಂಪಿ ಪ್ಲಾಂಟ್‍ನ್ನು ತೆರೆಯುವ ಉದ್ಧೇಶ ಹೊಂದಲಾಗಿದ್ದು, ಆಡಳಿತ ಮಂಡಳಿ, ರೈತರು, ಗ್ರಾಹಕರು ಹಾಗೂ ನೌಕರರ ಸಹಕಾರದೊಂದಿಗೆ ಕೆಎಂಎಫ್ ಬಲವರ್ಧನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಕೆಎಂಎಫ್ ನಂದಿನಿ ಬ್ರಾಂಡ್‍ನ್ನು ಜಾಗತೀಕವಾಗಿ ಗುರುತಿಸಲು ಯೋಜನೆಗಳನ್ನು ರೂಪಿಸಿರುವುದಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿ ನಿರ್ದೇಶಕರು, ಜಿಲ್ಲಾ ಹಾಲು ಒಕ್ಕೂಟಗಳ ವ್ಯವಸ್ಥಾಪಕ ನಿರ್ದೇಶಕರು, ಕೆಎಂಎಫ್‍ನ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕೆಎಂಎಫ್ ಎಂಡಿ ಬಿ.ಸಿ. ಸತೀಶ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಿ.ಎನ್. ಹೆಗಡೆ ಸ್ವಾಗತಿಸಿದರು. ಎಂ.ಟಿ. ಕುಲಕರ್ಣಿ ವಂದಿಸಿದರು. ರಘುನಂದನ್ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.