ಬೇಡಿಕೆ ಈಡೇರಿಕೆಗೆ ಅಂಗನವಾಡಿ ನೌಕರರ ಒತ್ತಾಯ
Team Udayavani, Sep 5, 2021, 2:55 PM IST
ಗುಂಡ್ಲುಪೇಟೆ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ತಾಲೂಕು ಅಂಗನವಾಡಿ ನೌಕರರು ಶಾಸಕ ಸಿ.ಎಸ್.ನಿರಂಜನಕುಮಾರ್‌ರಿಗೆ ಮನವಿ
ಸಲ್ಲಿಸಿದರು.
ಪಟ್ಟಣದ ಪ್ರವಾಸಿ ಮಂದಿರದ ಮುಂದೆ ಜಮಾಯಿಸಿದ ಅಂಗನವಾಡಿ ನೌಕರರು, ರಾಜ್ಯ ಸರ್ಕಾರ ತಾರತಮ್ಯ ನೀತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಧಿಕ್ಕಾರಕೂಗಿದರು.
ಬೇಡಿಕೆಗಳು: ಅಂಗನವಾಡಿ ನೌಕರರ ಸಂಘದ ತಾಲೂಕು ಅಧ್ಯಕ್ಷೆ ವಿಮಲಾ ಮಾತನಾಡಿ, ಕೋವಿಡ್ ಫ್ರಂಟ್ ಲೈನ್ ವಾರಿಯರ್ಸ್ ಆಗಿ
ಯಾವುದೇ ಸುರಕ್ಷತೆ ಇಲ್ಲದಿದ್ದರೂ ಕೆಲಸ ನಿರ್ವಹಿಸಿದ್ದೇವೆ. ಮಾನವ ಹಕ್ಕುಗಳ ಆಯೋಗ ಅಂಗನವಾಡಿ ನೌಕರರಿಗೆ ಕನಿಷ್ಠ ವೇತನ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.
ಹೀಗಿದ್ದರೂ ನಮಗೆ ಸರಿಯಾದ ವೇತನ ಕೊಡುತ್ತಿಲ್ಲ. ಐಸಿಡಿಎಸ್ 6 ಉದ್ದೇಶಗಳ ಜತೆಗೆ ಭಾಗ್ಯಲಕ್ಷ್ಮೀ, ಸ್ತ್ರೀ ಶಕ್ತಿ, ಚುನಾವಣೆ ಕೆಲಸ, ಆರೋಗ್ಯ
ಇಲಾಖೆ, ಅಂಗವಿಕಲ ಹಿರಿಯ ನಾಗರಿಕರಸಬಲೀಕರಣ ಇಲಾಖೆ, ಗ್ರಾಮಾಭಿವೃದ್ಧಿ ಯೋಜನೆ ಕೆಲಸಗಳನ್ನು ನಿರಂತರವಾಗಿ ಮಾಡಿ
ಕೊಂಡು ಬರುತ್ತಿದ್ದೇವೆ. ಇಷ್ಟೆಲ್ಲ ಮಾಡಿದರೂ ಸರ್ಕಾರ ನಮ್ಮ ಯಾವುದೇ ಬೇಡಿಕೆ ಈಡೇರಿಕೆಗೆ ಮುಂದಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ:ನಾಳೆಯಿಂದಲೇ ಶಾಲೆಗಳ ಪುನಾರಂಭ; ಕೋವಿಡ್ ನಿಯಮದಡಿ ಶಾಲೆ ಶುರು
ಅವೈಜ್ಞಾನಿಕ ಕ್ರಮ: ನೂತನ ಶಿಕ್ಷಣ ನೀತಿ ಜಾರಿ ಭಾಗವಾಗಿ 4 ವರ್ಷದ ಮಕ್ಕಳನ್ನು ಶೈಕ್ಷಣಿಕ ವ್ಯವಸ್ಥೆಯಡಿ ತಂದರೆ ಐಸಿಡಿಎಸ್ ಯೋಜನೆ
ಉದ್ದೇಶಕ್ಕೆ ಮಾರಕವಾಗುತ್ತದೆ. ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ ಒತ್ತು ಕೊಟ್ಟು ಅಂಗನವಾಡಿ ಕೇಂದ್ರವನ್ನು ಮೇಲ್ದರ್ಜೆಗೆ ಉನ್ನತೀಕರಿಸಲು ಬೇಡಿಕೆ ಇಟ್ಟರೆ ಅಂಗನವಾಡಿಯಲ್ಲೇ ಶಿಶು ಪಾಲನಾ ಕೇಂದ್ರ ಸ್ಥಾಪಿಸುವ ಅವೈಜ್ಞಾನಿಕ ಕ್ರಮಕ್ಕೆ ಸರ್ಕಾರ ಮುಂದಾಗಿದೆ ಎಂದು ದೂರಿದರು.
ಸೆ.13ರಂದು ಆರಂಭವಾಗುವ ವಿಧಾನ ಸಭೆ ಅಧಿವೇಶದಲ್ಲಿ ಅಂಗನವಾಡಿ ನೌಕರರ ಎಲ್ಲಾ ಸಮಸ್ಯೆ ಚರ್ಚಿಸಿ ಬೇಡಿಕೆ ಈಡೇರಿಕೆಗೆ ಸರ್ಕಾರ ವನ್ನು ಒತ್ತಾಯಿಸುವಂತೆ ಆಗ್ರಹಿಸಿದರು. ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ಸಿ.ಎಸ್. ನಿರಂಜನಕುಮಾರ್, ಸಂಬಂಧಪಟ್ಟವರ
ಜತೆ ಚರ್ಚಿಸಿ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಅಂಗನವಾಡಿ ನೌಕರರ ಸಂಘದ ತಾಲೂಕು ಉಪಾಧ್ಯಕ್ಷೆ ಮಂಜುಳಾ, ಖಜಾಂಚಿ ಸುಮಿತ್ರಾ, ಕಾರ್ಯದರ್ಶಿ ಗುರುಮಲ್ಲಮ್ಮ, ನೌಕರರಾದ ಕೆ. ಜಿ.ಮಹೇಶ್ವರಿ, ಗೌರಿ, ಪುಟ್ಟಸಿದ್ದಮ್ಮ, ಮಹ ದೇವಮ್ಮ, ಗುರುಮಲ್ಲಮ್ಮ,ಭ್ರಮರಾಂಭಿಕಾ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.