ದ.ಕ.ಜಿಲ್ಲೆಯಲ್ಲಿ ಸರಳ ಗಣೇಶೋತ್ಸವ: ಇಂದು ಪರಿಷ್ಕೃತ ಆದೇಶ ಪ್ರಕಟ
Team Udayavani, Sep 7, 2021, 1:18 AM IST
ಮಂಗಳೂರು: ಸಾರ್ವಜನಿಕ ಗಣೇಶೋತ್ಸವಕ್ಕೆ ರಾಜ್ಯ ಸರಕಾರ ಷರತ್ತುಬದ್ಧ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ದ. ಕ. ಜಿಲ್ಲೆಗೆ ಸಂಬಂಧಪಟ್ಟು ನಿಯಮಗಳಲ್ಲಿ ಕೆಲವು ಬದಲಾವಣೆಗಳೊಂದಿಗೆ ಸರಳ ಗಣೇಶೋತ್ಸವಕ್ಕೆ ಅನುಮತಿ ನೀಡಲು ನಿರ್ಧರಿಸಲಾಗಿದ್ದು ಈ ಕುರಿತು ಸೆ. 7ರಂದು ಪರಿಷ್ಕೃತ ಆದೇಶ ಹೊರಬೀಳಲಿದೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಜರಗಿದ ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರ (ಡಿಡಿಎಂಎ)ದ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದೆ. ರಾಜ್ಯ ಸರಕಾರದ ಮಾರ್ಗಸೂಚಿಯಲ್ಲಿ ಕೆಲವು ಬದಲಾವಣೆ ಗಳೊಂದಿಗೆ ಕಳೆದ ವರ್ಷದ ರೀತಿಯಲ್ಲೇ ಸರಳ ರೀತಿಯ ಗಣೇಶೋತ್ಸವ ಆಚರಣೆಗೆ ಸಂಬಂಧಪಟ್ಟು ಮಂಗಳವಾರ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಡಿಸಿ ಡಾ| ರಾಜೇಂದ್ರ ಕೆ.ವಿ. ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಗಣೇಶೋತ್ಸವ ಮೂರು ದಿನಗಳಿಗೆ ಸೀಮಿತ. ಮೈದಾನಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಶಾಮಿಯಾನ, ಪೆಂಡಾಲ್ ಹಾಕಿ ಸಾರ್ವಜನಿಕ ಗಣೇಶೋತ್ಸವಕ್ಕೆ ನಿರ್ಬಂಧ ಸಹಿತ ಕೆಲವು ನಿರ್ಧಾರಗಳನ್ನು ಸಭೆಯಲ್ಲಿ ಕೈಗೊಳ್ಳಲಾಗಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ
Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ
Mangaluru: ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ
Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ
ಹೊಸ ವರ್ಷಾಚರಣೆಗೆ ಡ್ರಗ್ಸ್ ಪಾರ್ಟಿ: ಪೊಲೀಸ್ ನಿಗಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.