ಕೇರಳ ನಿಫಾ ಸೋಂಕು : ಬಾಲಕನ ಸಂಪರ್ಕಕ್ಕೆ ಬಂದವರ ವರದಿ ನೆಗೆಟಿವ್ : ಸಚಿವೆ ವೀಣಾ ಜಾರ್ಜ್
Team Udayavani, Sep 7, 2021, 12:24 PM IST
ಕೇರಳ : ನಿಫಾ ವೈರಾಣು ಸೋಂಕಿನಿಂದ ಮೃತಪಟ್ಟ 12 ವರ್ಷದ ಬಾಲಕನ ನಿಕಟ ಸಂಪರ್ಕದಲ್ಲಿದ್ದವರ ಪರೀಕ್ಷಾ ವರದಿ ಇಂದು(ಮಂಗಳವಾರ, ಸಪ್ಟೆಂಬರ್ 7) ಬಂದಿದ್ದು, ನೆಗೆಟಿವ್ ಇರುವುದರಿಂದ ಕೇರಳದ ಮಂದಿ ನಿಟ್ಟುಸಿರು ಬಿಡುವಂತಾಗಿದೆ ಎಂದು ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.
ಈ ಕುರಿತಾಗಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಾಲಕನ ಪೋಷಕರು, ಆರೋಗ್ಯ ಕಾರ್ಯಕರ್ತರು ಸೇರಿದಂತೆ ಬಾಲಕನ ನಿಕಟ ಸಂಪರ್ಕಕ್ಕೆ ಬಂದಿದ್ದ 8 ಜನರ ಮಾದರಿಗಳನ್ನು ಸಂಗ್ರಹಿಸಲಾಗಿತ್ತು. ಇವರಲ್ಲಿ ಸೋಂಕಿನ ಲಕ್ಷಣಗಳೂ ಇದ್ದವು. ಆದರೆ, ಪರೀಕ್ಷೆ ವರದಿಯು ನೆಗೆಟಿವ್ ಬಂದಿದೆ ಎಂದಿದ್ದಾರೆ.
ಇದನ್ನೂ ಓದಿ : ಸುನೀಲ ಹೆಗಡೆಯವರಿಗೆ ನಿಗಮ ಮಂಡಳಿಯಲ್ಲಿ ಅವಕಾಶದ ಬಾಗಿಲು
“ನಿಫಾ ಸೋಂಕು ಸುಮಾರು 48 ಮಂದಿಗೆ ಹರಡುವ ಸಾಧ್ಯೆತೆ ಹೆಚ್ಚಳವಾಗಿದ್ದು, ಅವರನ್ನು ಪ್ರತ್ಯೇಕಿಸಿ ವೈದ್ಯಕೀಯ ಕಾಲೇಜಿನ ವಾರ್ಡ್ ನಲ್ಲಿ ಇರಿಸಲಾಗಿದೆ. ಸದ್ಯಕ್ಕೆ ಆ 48 ಮಂದಿಯ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಬದಲಾವಣೆ ಅಥವಾ ವ್ಯತ್ಯಾಸ ಕಂಡು ಬಂದಿಲ್ಲ.
ಇನ್ನು, ಈ 48 ಮಂದಿಯ ಪೈಕಿಯಲ್ಲಿ ಕೋಯಿಕ್ಕೋಡ್ ನ 31 ಮಂದಿ, ವಯನಾಡ್ ನ 4 ಮಂದಿ, ಮಲಪ್ಪುರಂ ನ ಎಂಟು ಮಂದಿ, ಕಣ್ಣೂರಿನ 3 ಮಂದಿ ಹಾಗೂ ಪಾಲಕ್ಕಾಡ್, ಎರ್ನಾಕುಲಂ ಜಿಲ್ಲೆಗಳಲ್ಲಿ ತಲಾ ಒಬ್ಬರಿಗೆ ಸೋಂಕು ತಗುಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಮಾತ್ರವಲ್ಲದೇ, ಇಂದು(ಮಂಗಳವಾರ, ಸಪ್ಟೆಂಬರ್ 7) ಇನ್ನಷ್ಟು ಮಾದರಿಗಳನ್ನು ಪರೀಕ್ಷಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ : ಸರ್ಕಾರ ರಚನೆ ಕಾರ್ಯಕ್ರಮಕ್ಕೆ ಆರು ದೇಶಗಳಿಗೆ ಆಹ್ವಾನ ನೀಡಿದ ತಾಲಿಬಾನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.