ರೈತ ಮಕ್ಕಳಿಗೆ ವಿದ್ಯಾನಿಧಿ ಸಹಕಾರಿ : ಶಾಸಕ ಕೆ. ಮಹದೇವ್
Team Udayavani, Sep 7, 2021, 3:16 PM IST
ಪಿರಿಯಾಪಟ್ಟಣ : ಭಾರತ ಸರ್ಕಾರ ರೈತ ವಿದ್ಯಾನಿಧಿ ಕಾರ್ಯಕ್ರಮದ ಮೂಲಕ ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟಿರುವ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಕೆ.ಮಹದೇವ್ ತಿಳಿಸಿದರು.
ತಾಲೂಕಿನ ಹುಣಸವಾಡಿ, ಬೆಟ್ಟದಪುರ, ಹಾರನಹಳ್ಳಿ ರೈತ ಸಂಪರ್ಕ ಕೇಂದ್ರಗಳಲ್ಲಿ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ವತಿಯಿಂದ ಏರ್ಪಡಿಸಿದ್ದ ವಿಡಿಯೋ ಕಾನ್ಪರೆನ್ಸ್ ವೀಕ್ಷಣೆ ಹಾಗೂ ರೈತರಿಗೆ ರಾಗಿ ಬೆಳೆ ಕುರಿತ ಪ್ರಾತಿಕ್ಷತೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇದನ್ನೂ ಓದಿ : ರಸ್ತೆ ಅಪಘಾತಕ್ಕೆ ವಕೀಲ ಬಲಿ : ಕಲಾಪ ಬಹಿಷ್ಕರಿಸಿ ವಕೀಲರಿಂದ ಪ್ರತಿಭಟನೆ
ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜ್ಯದ ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ನೀಡುವ ನಿಟ್ಟಿನಲ್ಲಿ ರೈತ ವಿದ್ಯಾನಿಧಿ ಕಾರ್ಯಕ್ರಮವನ್ನು ಜಾರಿಗೆ ತಂದಿರುವುದು ಹೆಮ್ಮಯ ಸಂಗತಿಯಾಗಿದ್ದು, ಆ ಮೂಲಕ ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಚೆಕ್ ಮೂಲಕ ವಿದ್ಯಾರ್ಥಿ ವೇತನವನ್ನು ಹಸ್ತಾಂತರ ಮಾಡಲಾಗುತ್ತಿದ್ದು, ಇದರ ಉಪಯೋಗವನ್ನು ರೈತರ ಮಕ್ಕಳು ಪಡೆದುಕೊಳ್ಳಬೇಕು ಎಂದರು.
ವೈಜ್ಞಾನಿಕತೆಯಲ್ಲಿ ರಾಗಿ ಬೆಳೆಯಿರಿ :
ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಮಾತನಾಡಿ ರೈತರು ಕೃಷಿಯಲ್ಲಿ ಹಳೆಯ ಪದ್ಧತಿಗಳನ್ನು ಕೈಬಿಟ್ಟು ಆಧುನಿಕ ಬಿತ್ತನೆ ಪದ್ಧತಿಯನ್ನು ಅಳವಡಿಸಿಕೊಳ್ಳುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕು. ತಂತ್ರಜ್ಞಾನ ಬೆಳೆದಂತೆ ಕೃಷಿ ಕ್ಷೇತ್ರದಲ್ಲಿ ಅನೇಕ ಆವಿಷ್ಕಾರಗಳು ಮತ್ತು ಬದಲಾವಣೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರೈತರು ಉತ್ತಮ ಇಳುವರಿ ಹಾಗೂ ಆರ್ಥಿಕ ಭಧ್ರತೆಗಾಗಿ ವೈಜ್ಞಾನಿಕ ಪದ್ದತಿಯಲ್ಲಿ ವ್ಯವಸಾಯದ ಕ್ರಮಗಳನ್ನು ಅನುಸರಿಸಬೇಕು, ಭೂಮಿಯ ಹವಾಗುಣಕ್ಕೆ ಹೊಂದಿಕೊಳ್ಳುವಂತ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕಗಳನ್ನು ಸಿಂಪಡಿಸಿ ಉತ್ತಮ ಇಳುವರಿ ಪಡೆದು ಆರ್ಥಿಕವಾಗಿ ರೈತರು ಅಭಿವೃದ್ಧಿ ಹೊಂದಬೇಕು. ಪಿರಿಯಾಪಟ್ಟಣ ತಾಲೂಕಿನಲ್ಲಿ ಪ್ರತೀ ವರ್ಷ ಹೆಚ್ಚಾಗಿ ರೈತರು ರಾಗಿ ಬೆಳೆ ಬೆಳೆಯಲು ಹೆಚ್ಚಿನ ಆಸಕ್ತಿ ವಹಿಸುತ್ತಿದ್ದು ಆರ್ಥಿಕವಾಗಿ ಸಬಲರಾಗಲು ಮಾರ್ಗೋಪಾಯ ಕಂಡುಕೊಂಡಿರುವುದು ಹೆಮ್ಮಯ ಸಂಗತಿ ಎಂದರು.
ಕಾರ್ಯಕ್ರಮದಲ್ಲಿ ಕೃಷಿ ಅಧಿಕಾರಿ ಮಹೇಶ್, ವಿಕಾಶ್, ಹಿತೈಶ್, ಧನಂಜಯ್, ಗ್ರಾ.ಪಂ. ಅಧ್ಯಕ್ಷೆ ಸುವರ್ಣ ಗಣೇಶ್, ಉಪಾಧ್ಯಕ್ಷೆ ಲಕ್ಷ್ಮಮ್ಮ, ಮುಖಂಡರಾದ ಬಿಟಿಎಂ ಅಶೋಕ್, ಶಾಂತೇಗೌಡ, ಗೋವಿಂದೇಗೌಡ, ರಘುನಾಥ್ ಸೇರಿದಂತೆ ಮತ್ತಿತರರು ಹಾಜರಿದ್ದರು.
ಇದನ್ನೂ ಓದಿ : ಭಾಯಂದರ್ ಮಂಥನ್ ಸಾಮಾಜಿಕ ಸೇವಾ ಸಂಸ್ಥೆ; ಉಚಿತ ಆರೋಗ್ಯ ತಪಾಸಣೆ ಶಿಬಿರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.