ಭೂಮಿ ನೀಡುವಂತೆ ಒತ್ತಾಯಿಸಿ ಮಾಜಿ ಸೈನಿಕರ ಒಕ್ಕೂಟದ ವತಿಯಿಂದ ಪ್ರತಿಭಟನೆ
Team Udayavani, Sep 7, 2021, 6:05 PM IST
ಹುಣಸೂರು :ಭೂಮಿ ನೀಡುವಂತೆ ಒತ್ತಾಯಿಸಿ ಮಾಜಿ ಸೈನಿಕರ ಒಕ್ಕೂಟದ ವತಿಯಿಂದ ಅರಸು ಪುತ್ಥಳಿ ಎದುರು ಹೆದ್ದಾರಿ ತಡೆದು ಪ್ರತಿಭಟನೆ ನಡೆಯಿತು.
ನಗರದ ಹಳೆ ಬಸ್ ನಿಲ್ದಾಣದಲ್ಲಿ ಜಮಾವಣೆಗೊಂಡ ಮಾಜಿ ಸೈನಿಕರು ಕೇಂದ್ರ ಸರಕಾರದ ಮಾರ್ಗಸೂಚಿಯಂತೆ ಮಾಜಿ ಸೈನಿಕರು ಅಥವಾ ಅವರ ಅವಲಂಬಿತರಿಗೆ ನೀಡಬೇಕಿರುವ ಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿದರು.
ಮೈಸೂರು ಮತ್ತು ಕೊಡಗು ಜಿಲ್ಲೆಗಳಿಂದ ಆಗಮಿಸಿದ್ದ ಮಾಜಿ ಸೈನಿಕರು ದೇವರಾಜ ಅರಸು ಪುತ್ಥಳಿವರೆಗೆ ಮೌನ ಮೆರವಣಿಗೆ ನಡೆಸಿದರು.ಅಲ್ಲಿ ಕೆಲ ಹೊತ್ತು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಈ ವೇಳೆ ಹೆದ್ದಾರಿ ಬಂದ್ ಆಗಿದ್ದರಿಂದ ಸ್ಥಳಕ್ಕಾಗಮಿಸಿದ ಪೋಲೀಸರು ರಸ್ತೆ ತಡೆ ನಡೆಸುವಂತಿಲ್ಲವೆಂಬ ಹೇಳಿಕೆಯಿಂದ ಕೋಪಗೊಂಡ ಮಾಜಿ ಸೈನಿಕರು ಭೂಮಿ ಮಂಜೂರಾತಿ ಮಾಡುವ ಲಿಖಿತ ಭರವಸೆ ನೀಡುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲವೆಂದು ಪಟ್ಟು ಹಿಡಿದರು.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಇನ್ಸ್ ಪೆಕ್ಟರ್ ರವಿ. ಎಸ್.ಐ ಲತೇಶ್ ಕುಮಾರ್ ಹೆದ್ದಾರಿಯಲ್ಲಿ ರಸ್ತೆ ತಡೆ ಮಾಡಿದಲ್ಲಿ ತುರ್ತು ಸಂದರ್ಭದಲ್ಲಿ ಹೋಗುವವರಿಗೆ ತೊಂದರೆಯಾಗಲಿದೆ ಎಂದರು.
ಮೊದಲೇ ಅನುಮತಿ ಪಡೆದಿರಬೇಕೆಂಬ ಮಾತಿಗೆ ಮಡಿಕೇರಿಯಲ್ಲೇ ಹೆದ್ದಾರಿ ತಡೆ ಮಾಡುತ್ತೇವೆ ತಾಲೂಕು ಅನುಮತಿ ಏಕೆ ಬೇಕು. ನಮ್ಮನ್ನು ಅರೆಸ್ಟ್ ಬೇಕಾದರೆ ಮಾಡಿರೆಂದು ಪಟ್ಟು ಹಿಡಿದರು.
ಹೆದ್ದಾರಿ ಬಂದ್ ಆಗಿರುವ ಬಗ್ಗೆ ಮಾಹಿತಿ ಪಡೆದ ಡಿವೈಎಸ್ ಪಿ ರವಿಪ್ರಸಾದ್ ಸ್ಥಳಕ್ಕಾಗಮಿಸಿ ಪ್ರತಿಭಟನಾ ನಿರತ ಮಾಜಿ ಸೈನಿಕರನ್ನು ಮನವೊಲಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಇದನ್ನೂ ಓದಿ:ಇಲಾಖೆಯಲ್ಲಿನ ಅನಗತ್ಯ ಖರ್ಚಿಗೆ ಕಡಿವಾಣ ಹಾಕುವುದು ಮೊದಲ ಗುರಿ ; ಸಚಿವ ಕೋಟ
ನಂತರ ಉಪ ವಿಭಾಗಾಧಿಕಾರಿ ವರ್ಣಿತ್ ನೇಗಿಯವರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು ನಿಗದಿತ ಗಡುವಿನೊಳಗೆ ಭೂಮಿ ಮಂಜೂರಾತಿ ಮಾಡಿಕೊಡಬೇಕು ಇಲ್ಲದಿದ್ದಲ್ಲಿ ಅನಿವಾರ್ಯವಾಗಿ ಮತ್ತೆ ಪ್ರತಿಭಟನೆ ಹಾದಿ ಹಿಡಿಯುತ್ತೇವೆಂದರು.
ಮನವಿ ಸ್ವೀಕರಿಸಿದ ಎಸಿ
ಮಾಜಿ ಸೈನಿಕರಿಗೆ ಸಿಗಬೇಕಾದ ಸೌಲಭ್ಯ ಕಲ್ಪಿಸಬೇಕಾಗಿರುವುದು ಅಧಿಕಾರಿಗಳ ಜವಾಬ್ದಾರಿಯಾಗಿದ್ದು. ಈ ಬಗ್ಗೆ ಶ್ರೀಘ್ರದಲ್ಲೇ ಉಪ ವಿಭಾಗದ ತಹಸೀಲ್ದಾರ್ ಗಳ ಸಭೆ ನಡೆಸಿ. ವಸ್ತು ಸ್ಥಿತಿಯ ಕುರಿತು ಜಿಲ್ಲಾಧಿಕಾರಿಗಳಿಗೆ ವರದಿ ನೀಡಲಾಗುವುದೆಂಬ ಭರವಸೆ ಮೇರೆಗೆ ಪ್ರತಿಭಟನೆ ಹಿಂಪಡೆದರು.
ಪ್ರತಿಭಟನೆಯಲ್ಲಿ ಮಾಜಿ ಸೈನಿಕರಾದ ಸತ್ಯ ಪೌಡೇಶನ್ ಅಧ್ಯಕ್ಷ ಸತ್ಯಪ್ಪ ನೇತೃತ್ವದಲ್ಲಿ ಹುಣಸೂರು, ಹೆಚ್.ಡಿ.ಕೋಟೆ, ಪಿರಿಯಾಪಟ್ಟಣ, ಕೊಡಗುಜಿಲ್ಲೆಯ ಕುಶಾಲನಗರ ಮತ್ತಿತರ ಕಡೆಗಳಿಂದ ಆಗಮಿಸಿದ್ದ 150 ಕ್ಕೂ ಹೆಚ್ಚು ಮಾಜಿ ಸೈನಿಕರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.