ಯುಎಇ ಕ್ರಿಕೆಟಿಗ ಶಬೀರ್‌ಗೆ 4 ವರ್ಷ ನಿಷೇಧ
Team Udayavani, Sep 7, 2021, 9:00 PM IST
ದುಬಾೖ: ಭ್ರಷ್ಟಾಚಾರ ನಿಗ್ರಹ ಸಂಹಿತೆಯ ಆರು ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಯುಎಇ ಆಟಗಾರ ಗುಲಾಂ ಶಬೀರ್ ಅವರಿಗೆ ನಾಲ್ಕು ವರ್ಷಗಳ ನಿಷೇಧ ವಿಧಿಸಿದೆ. ಆಗಸ್ಟ್ 2025ರ ವರೆಗೆ ನಿಷೇಧ ಜಾರಿಯಲ್ಲಿರಲಿದೆ.
2 ವರ್ಷ ಹಿಂದಿನ ಪ್ರಕರಣ :
2019ರಲ್ಲಿ ನೇಪಾಲ-ಜಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ನಡೆಯಿತೆನ್ನಲಾದ ಭ್ರಷ್ಟಾಚಾರದ ಆರೋಪಗಳ ಕುರಿತು ಐಸಿಸಿಯ ಭ್ರಷ್ಟಾಚಾರ ನಿಗ್ರಹ ಘಟಕಕ್ಕೆ ವರದಿ ಮಾಡದ ಕಾರಣ ಶಬೀರ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಹೀಗಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯು ಭ್ರಷ್ಟಾಚಾರ ನಿಗ್ರಹ ಸಂಹಿತೆಯನ್ನು ಉಲ್ಲಂ ಸಿದ ಆರೋಪದಲ್ಲಿ ಅವರನ್ನು ದೋಷಿ ಎಂದು ಪರಿಗಣಿಸಲಾಗಿದೆ. ಶಬೀರ್ ಕೂಡ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಶಬೀರ್ ಸೆಕ್ಷನ್ 2.4.4 ನಿಯಮವನ್ನು ಅನುಸರಿಸಲಿಲ್ಲ. ಭ್ರಷ್ಟಾಚಾರ ವಿರೋಧಿ ಘಟಕಕ್ಕೆ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿ ನೀಡಿಲ್ಲ ಎಂದು ಐಸಿಸಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cap Auction: ಬ್ರಾಡ್‌ಮನ್ ಕ್ಯಾಪ್ 2.11 ಕೋಟಿ ರೂ.ಗೆ ಹರಾಜು
Cricket: ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20: ಕರ್ನಾಟಕವನ್ನು ಬಗ್ಗುಬಡಿದ ಬರೋಡ
Hockey: ವನಿತಾ ಜೂ. ಏಷ್ಯಾ ಕಪ್ ಹಾಕಿ: ಭಾರತ ತಂಡ ಮಸ್ಕತ್‌ಗೆ
Pro Kabaddi: ಬೆಂಗಳೂರು ಬುಲ್ಸ್-ಗುಜರಾತ್ ಜೈಂಟ್ಸ್ ಪಂದ್ಯ ಟೈ
Mangaluru: ವಿವಿ ಅಂತರ್ ಕಾಲೇಜು ಆ್ಯತ್ಲೆಟಿಕ್ಸ್: ಸತತ 22 ಬಾರಿ ಆಳ್ವಾಸ್ ಚಾಂಪಿಯನ್
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.