ಪ.ಬಂ: ರಾಜ್ಯದ 61 ಬಿಜೆಪಿ ನಾಯಕರಿಗೆ ವಿಐಪಿ ಭದ್ರತೆ ನೀಡಿ : ದೀದಿ ಸರ್ಕಾರಕ್ಕೆ ಕೇಂದ್ರ ಮನವಿ
Team Udayavani, Sep 8, 2021, 3:20 PM IST
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳ : ರಾಜ್ಯದ 61 ಬಿಜೆಪಿ ನಾಯಕರಿಗೆ ಹೆಚ್ಚಿನ ಭದ್ರತೆ ನೀಡುವಂತೆ ಕೋರಿ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪತ್ರ ಬರೆದಿದ್ದು, ವಿಐಪಿ ರಕ್ಷಣೆ ನೀಡುವಂತೆ ಮನವಿ ಮಾಡಿಕೊಂಡಿದೆ.
ಆಗಸ್ಟ್ 31 ರ ದಿನಾಂಕದಲ್ಲಿ ಪಶ್ಚಿಮ ಬಂಗಾಳದ ಗೃಹ ಸಚಿವಾಲಯಕ್ಕೆ ಕೇಂದ್ರ ಸರ್ಕಾರ ಪತ್ರ ಬರೆದಿದ್ದು, ಕೇಂದ್ರ ಪಡೆಗಳ ಭದ್ರತೆಯನ್ನು ಪಶ್ಚಿಮ ಬಂಗಾಳದ 61 ಪ್ರಮುಖ ಬಿಜೆಪಿ ನಾಯಕರಿಗೆ ನೀಡಲಾಗಿದೆ ಮತ್ತು ರಾಜ್ಯ ಸರ್ಕಾರ ಪ್ರೋಟೋಕಾಲ್ ಅನುಸರಿಸಬೇಕು ಮತ್ತು ವಿಐಪಿ ಭದ್ರತೆ ನೀಡುವಂತೆ ಕೇಳಿಕೊಂಡಿದೆ ಎಂದು ರಾಜ್ಯದ ಗೃಹ ಸಚಿವಾಲಯ ಮಾಹಿತಿ ನೀಡಿದೆ.
ಇದನ್ನೂ ಓದಿ : ಜಾತ್ಯತೀತತೆ ಹೆಸರಿನಲ್ಲಿ ಮುಸ್ಲಿಮರನ್ನು ವಂಚಿಸಲಾಗಿದೆ: ಅಸಾದುದ್ದೀನ್ ವಾಗ್ದಾಳಿ
ಕೇಂದ್ರ ಸರ್ಕಾರ ದೀದಿ ಸರ್ಕಾರಕ್ಕೆ ಕಳುಹಿಸಿದ ಪತ್ರದಲ್ಲಿ ರಾಜ್ಯದ ಮಿಥುನ್ ಚಕ್ರವರ್ತಿ ಹಾಗೂ ಬಿಜೆಪಿ ಎಂ ಪಿ ಅರ್ಜುನ್ ಸಿಂಗ್ ಅವರನ್ನೊಳಗೊಂಡು 61ಟ ಮಂದಿಗೆ ರಕ್ಷಣೆ ಕೋರಿದೆ.
ಪಶ್ಚಿಮ ಬಂಗಾಳದ ಉತ್ತರ 24 ಪರಗಣಗಳಲ್ಲಿರುವ ಅರ್ಜುನ್ ಸಿಂಗ್ ನಿವಾಸದ ಮೇಲೆ ಬುಧವಾರ ಮುಂಜಾನೆ ಮೂರು ಕಚ್ಚಾ ಬಾಂಬ್ ಗಳನ್ನು ಎಸೆದ ಹಿನ್ನೆಲೆ ಕೇಂದ್ರ ಸರ್ಕಾರ ಈ ಮನವಿ ಮಾಡಿಕೊಂಡಿದ್ದು, ಬಾಂಬ್ ದಾಳಿ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆಂದು ವರದಿಯಾಗಿದೆ.
ಬಾಂಬ್ ದಾಳಿಯಲ್ಲಿ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಇನ್ನು, ಬಾಂಬ್ ಸ್ಫೋಟದ ಪರಿಣಾಮವಾಗಿ ಅರ್ಜುನ್ ಸಿಂಗ್ ಅವರ ಮನೆಯ ಗೇಟ್ ಗೆ ಹಾನಿಯಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ : ವೈರಲ್ ವೀಡಿಯೋ | ಹಿಜಾಬ್ ಇಲ್ಲದ ಮಹಿಳೆ, ಕತ್ತರಿಸಿದ ಕಲ್ಲಂಗಡಿ ಹಣ್ಣಿನಂತೆ : ತಾಲಿಬಾನ್ ಉಗ್ರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.