![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 8, 2021, 4:57 PM IST
ಬೆಂಗಳೂರು : ತಳಮಟ್ಟದಿಂದಲೇ ಕ್ರೀಡಾಪಟುಗಳನ್ನು ತಯಾರು ಮಾಡಲು ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. 1666 ದೈಹಿಕ ಶಿಕ್ಷಕರಿಗೆ ಗುಣಮಟ್ಟದ ವೈಜ್ಞಾನಿಕ ತರಬೇತಿ ನೀಡಲು ಯೋಜನೆ ಸಿದ್ದವಾಗಿದೆ. ಶೀಘ್ರದಲ್ಲೇ ತರಬೇತಿ ಆರಂಭಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣ ಗೌಡ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಕ್ರೀಡಾಪಟುಗಳಿಗೆ ಉತ್ತೇಜನ ನೀಡಲು ಸರ್ಕಾರ ಈಗಾಗಲೆ ವಿವಿಧ ಯೋಜನೆ ಜಾರಿಗೆ ಬಂದಿದೆ. ಅದಕ್ಕಿಂತ ಮುಖ್ಯವಾಗಿ ತಳಮಟ್ಟದಲ್ಲೇ ಕ್ರೀಡಾಪಟುಗಳನ್ನು ಗುರುತಿಸಿ ಸೂಕ್ತ ತರಬೇತಿ ನೀಡಲು ದೈಹಿಕ ಶಿಕ್ಷರಿಗೇ ಕ್ರೀಡಾ ಇಲಾಖೆಯಿಂದ ವೈಜ್ಞಾನಿಕ ತರಬೇತಿ ನೀಡಲು ತೀರ್ಮಾನಿಸಲಾಗಿದೆ. ವಿಕಾಸ ಸೌಧದಲ್ಲಿ ಇಂದು (ಸಪ್ಟೆಂಬರ್ 7) ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ತೀರ್ಮಾನ ಮಾಡಲಾಗಿದೆ. ಕ್ರೀಡಾ ವಿಜ್ಞಾನ ಕೇಂದ್ರದ ಮೂಲಕ ಗ್ರಾಮೀಣ ಮಟ್ಟದ ಕ್ರೀಡಾ ಪ್ರತಿಭೆಗಳನ್ನು ಗುರುತಿಸಲಾಗುತ್ತಿದ್ದು, ಅಂತವರಿಗೆ ತರಬೇತಿ ಪಡೆದ 1666 ಪರಿಣಿತ ದೈಹಿಕ ಶಿಕ್ಷಕರಿಂದ ತರಬೇತಿ ನೀಡಲಾಗುವುದು. ಶಿಕ್ಷಣ ಇಲಾಖೆಯಿಂದ ಈಗಾಗಲೇ 1666 ದೈಹಿಕ ಶಿಕ್ಷಕರ ಪಟ್ಟಿ ಪಡೆಯಲಾಗಿದ್ದು, ತಿಂಗಳಾಂತ್ಯದಲ್ಲಿ ಕ್ರೀಡಾ ಇಲಾಖೆಯಿಂದ ತರಬೇತಿ ನೀಡಲು ಆರಂಭಿಸಲಾಗುವುದು ಎಂದಿದ್ದಾರೆ.
ಇದನ್ನೂ ಓದಿ : ಅನುಶ್ರೀ ಜೈಲಿಗೆ ಹೋಗುವುದು ಪಕ್ಕಾ:ಪ್ರಶಾಂತ್ ಸಂಬರಗಿ|UDAYAVANI NEWS BULLETIN|8/9/2021
ಖೇಲೊ ಇಂಡಿಯಾ ಕೇಂದ್ರ ಪ್ರಾರಂಭಿಸಲು ಹಣ ಬಿಡುಗಡೆಯಾದರೂ ಆರಂಭವಾಗದ ಕೇಂದ್ರ : ಸಚಿವರು ಗರಂ
ಇದೇ ವೇಳೆ ಖೇಲೊ ಇಂಡಿಯಾ ಕೇಂದ್ರದ ಬಗ್ಗೆ ಚರ್ಚಿಸಿದ ಸಚಿವರು, ಅಧಿಕಾರಿಗಳ ಕಾರ್ಯವೈಖರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. 31 ಕೇಂದ್ರಗಳ ಸ್ಥಾಪನೆಗೆ ಕೇಂದ್ರ ಸರ್ಕಾರ ಈಗಾಗಲೆ ಅನುದಾನ ನೀಡಿದೆ. ಪ್ರತಿ ಕೇಂದ್ರದ ಮೂಲಕ ಸೌಕರ್ಯಕ್ಕೆ ರೂ.5 ಲಕ್ಷ ಹಾಗೂ ತರಬೇತಿಗೆ ರೂ. 5 ಲಕ್ಷ ನೀಡಿದೆ. ಆದರೆ ಈ ವರೆಗೆ ಯಾವುದೇ ಪ್ರಕ್ರಿಯೆ ಆರಂಭವಾಗಿಲ್ಲ. ಕೇವಲ ಘೋಷಣೆಗೆ ಯೋಜನೆ ಸೀಮಿತವಾದರೆ ಹೇಗೆ. ತಕ್ಷಣ ಕೆಲಸ ಆರಂಭಿಸದಿದ್ದರೆ ಸುಮ್ಮನಿರಲ್ಲ. ಕಠಿಣ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಸಚಿವರು ಖಡಕ್ ಎಚ್ಚರಿಕೆ ನೀಡಿದರು. ವಾರದೊಳಗೆ ಕೆಲಸ ಆರಂಭಿಸುವುದಾಗಿ ಅಧಿಕಾರಿಗಳು ತಿಳಿಸಿದರು.
ಸೆ. 24 ರಂದು ವೈಮಾನಿಕ ತರಬೇತಿ ಶಾಲೆ ಪುನಾರಂಭ
ಸರ್ಕಾರಿ ವೈಮಾನಿಕ ತರಬೇತಿ ಶಾಲೆ ಆರಂಭ ಆಗಲೇಬೇಕು. ಇನ್ನಷ್ಟು ಸಮಯ ನೀಡಲು ಸಾಧ್ಯವಿಲ್ಲ. ಅಧಿವೇಶನ ಮುಗಿದ ಮಾರನೆ ದಿನ ವೈಮಾನಿಕ ತರಬೇತಿ ಶಾಲೆ ಪುನಾರಂಭ ಆಗಬೇಕು. ಮುಖ್ಯ ಮಂತ್ರಿಗಳನ್ನು ಆಹ್ವಾನಿಸಿ, ಉದ್ಘಾಟಿಸಲಾಗುವುದು ಎಂದು ಸಚಿವ ಡಾ. ನಾರಾಯಣ ಗೌಡ ತಿಳಿಸಿದರು. 45 ಹಳೆ ವಿದ್ಯಾರ್ಥಿಗಳಿದ್ದು, ಈಗಾಗಲೆ 35 ವಿದ್ಯಾರ್ಥಿಗಳು ತರಬೇತಿ ಪಡೆಯಲು ಬರುವುದಾಗಿ ತಿಳಿಸಿದ್ದಾರೆ. ಹಿಂದಿನ ಶುಲ್ಕ ದರದಲ್ಲೇ ತರಬೇತಿ ನೀಡಲಾಗುವುದು. ಹೊಸದಾಗಿ ಪ್ರವೇಶ ಪಡೆಯುವವರಿಗೆ ಪರಿಷ್ಕೃತ ದರ ನಿಗದಿ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಮುಂದಿನ ಮಾರ್ಚ್ 5 ರಿಂದ ಖೇಲೊ ಇಂಡಿಯಾ ಯೂನಿವರ್ಸಿಟಿ ಗೇಮ್ ಬೆಂಗಳೂರಿನಲ್ಲಿ ಆರಂಭವಾಗಲಿದೆ. ಕ್ರೀಡೆಯ ಆಯೋಜನೆಗೆ ರೂ. 25 ಕೋಟಿ ಅನುದಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮೂಲ ಸೌಕರ್ಯಕ್ಕಾಗಿ ರೂ. 18 ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸಲಾಗಿದೆ. ರಾಜ್ಯ ಸರ್ಕಾರಕ್ಕೂ ರೂ. 22 ಕೋಟಿ ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅರ್ಥಿಕ ಇಲಾಖೆ ಪರಿಶೀಲನೆಯಲ್ಲಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಅಲ್ಲದೆ ಅತಿ ಶೀಘ್ರದಲ್ಲಿ ಖೇಲೊ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ನ ಲೋಗೋ, ಥೀಮ್ ಸಾಂಗ್, ಜೆರ್ಸಿ ಲಾಂಚ್ ಆಗಬೇಕು ಎಂದು ಸಚಿವರು ತಿಳಿಸಿದ್ದಾರೆ.
ಸಭೆಯಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಕ್ರೀಡಾ ಇಲಾಖೆ ಆಯುಕ್ತ ವೆಂಕಟೇಶ್, ಇಲಾಖೆ ಅಧಿಕಾರಿಗಳು ಉಪಸ್ಥಿರಿದ್ದರು.
ಇದನ್ನೂ ಓದಿ : ಕೋವಿಡ್ : ಮನೆಮನೆಗೆ ತೆರಳಿ ಲಸಿಕೆ ನೀಡಿಯೆಂದು ಆದೇಶಿಸಲು ಸಾಧ್ಯವಿಲ್ಲ : ಸುಪ್ರೀಂ ಅಭಿಪ್ರಾಯ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.