ಜನೋಪಯೋಗಿ ಕಾರ್ಯ ನಿತ್ಯ ನಿರಂತರವಾಗಿರಲಿ
Team Udayavani, Sep 8, 2021, 5:15 PM IST
ಚಿತ್ರದುರ್ಗ : ಕಲ್ಯಾಣದ ಕಾರ್ಯಗಳು ನಿರಂತರವಾಗಿ ನಡೆಯಬೇಕು. ಸತ್ಕಾರ್ಯಗಳು, ಜನೋಪಯೋಗಿ ಕಾರ್ಯಗಳು ನಿತ್ಯವೂ ಸಾಗಬೇಕು. ಧಾರ್ಮಿಕ ಕೇಂದ್ರಗಳು ಇರುವುದು ಜನಸಾಮಾನ್ಯರಿಗಾಗಿ. ಕಲ್ಯಾಣವನ್ನು ಬಿಟ್ಟು ನಾವು ಇರಬಾರದು ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ಹೇಳಿದರು.
ನಗರ ಸಮೀಪದ ವಿಶ್ವಮಾನವ ಸಾಂಸ್ಕೃತಿಕ ಹಾಗೂ ಶೆ„ಕ್ಷಣಿಕ ಸಂಸ್ಥೆಯ ವಸತಿ ಶಾಲಾ ಆವರಣದಲ್ಲಿ ನಡೆದ 2021ರ ಶ್ರಾವಣಮಾಸದ “ನಿತ್ಯಕಲ್ಯಾಣ’ ವಿಶೇಷ ಕಾರ್ಯಕ್ರಮದ ಸಮಾರೋಪದಲ್ಲಿ ಅವರು ಮಾತನಾಡಿದರು. ಅನೇಕ ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗಿದ್ದಾರೆ.
ಇದನ್ನೂ ಓದಿ : 1666 ದೈಹಿಕ ಶಿಕ್ಷಕರಿಗೆ ಕ್ರೀಡಾ ಇಲಾಖೆಯಿಂದ ವೈಜ್ಞಾನಿಕ ತರಬೇತಿ : ಸಚಿವ ಡಾ.ನಾರಾಯಣಗೌಡ
ಅದು ಅವರನ್ನು ಖನ್ನತೆಗೆಕರೆದುಕೊಂಡು ಹೋಗಿದೆ. ಪ್ರಪಂಚದಾದ್ಯಂತ 24 ಲಕ್ಷ ವಿದ್ಯಾರ್ಥಿಗಳು ಸಾವಿಗೆ ಶರಣಾಗಿದ್ದಾರೆ. ಇದಕ್ಕೆ ಯಾರು ಹೊಣೆಯಲ್ಲ.ಕೊರೋನಾ ಇಂತಹ ಸಂದರ್ಭ ಸೃಷ್ಟಿ ಮಾಡಿದೆ ಎಂದರು.
ಮಕ್ಕಳ ಚಲನವಲನದ ಮೇಲೆ ಗಮನ ಹರಿಸಬೇಕು. ಮಕ್ಕಳ ಭವಿಷ್ಯವನ್ನು ನಾವು ರೂಪಿಸಿಬೇಕಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ, ಸಂಸ್ಕಾರ ಕಲಿಸಬೇಕು. ಅದರಿಂದ ಅವರು ಭವಿಷ್ಯ ಕಟ್ಟಿಕೊಳ್ಳುತ್ತಾರೆ. ಆದರೆ ಅವರಿಗೆ ಅಪಾರವಾದ ಆಸ್ತಿಯನ್ನು ಮಾಡಬಾರದು.
ಧಾರ್ಮಿಕ ಮುಖಂಡರು, ಸಮಾಜ ಸುಧಾರಕರು ಕೈಕಟ್ಟಿ ಕುಳಿತರೆ ಅಲ್ಲಿ ಗೂಂಡಾ ರಾಜ್ಯ ನಿರ್ಮಾಣವಾಗುತ್ತದೆ. ಹಾಗಾಗಿ ಕಲ್ಯಾಣ ರಾಜ್ಯದ ಪರಿಕಲ್ಪನೆ ಕೊಡಬೇಕಿದೆ. ಹಾಗಾಗಿ ನಾವು ಎಂದೂ ಸುಮ್ಮನೆ ಕೂರುವವರಲ್ಲ. ಹಾಗಾಗಿ ಅಷ್ಟೊಂದು ಸಾಧನೆ ಮಾಡಲು ಸಾಧ್ಯವಾಯಿತು ಎಂದು ತಿಳಿಸಿದರು.
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಸ್. ಪರಮಶಿವಯ್ಯ ಮಾತನಾಡಿ, ಮುರುಘಾ ಶರಣರು ಸಮಾಜದಲ್ಲಿ ಸಾಕಷ್ಟು ಜಾಗೃತಿ ಮೂಡಿಸುತ್ತಿದ್ದಾರೆ. ಮುರಿಗೆ ಶಾಂತವೀರ ಶ್ರೀಗಳಿಂದ ಜಯವದೇವ ಶ್ರೀಗಳವರೆಗೆ ಅನೇಕ ಪವಾಡಗಳು ನಡೆದಿವೆ. ಜಯದೇವ ಜಗದ್ಗುರುಗಳು ಅನೇಕ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪಿಸಿದ್ದಾರೆ.
ಯಾರೂ ಸಹ ಶಿಕ್ಷಣದಿಂದ ವಂಚಿತರನ್ನಾಗಿ ಮಾಡಬಾರದು. ನಾನು ನಿಜವಾಗಿ ವಿರಕ್ತ ಪರಂಪರೆಯವನು. ಬಸವ ತತ್ವ ಸಿದ್ಧಾಂತಗಳನ್ನು ಇಟ್ಟುಕೊಂಡು ಸಮಾಜವನ್ನು ಕಟ್ಟುತ್ತಿದ್ದೇನೆ. ಅಭಿವೈದ್ಧಿ ನಿಗಮದ ಅಧ್ಯಕ್ಷನಾಗಿ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ ಎಂದರು.
ಎಚ್. ಜಲೀಲ್ ಸಾಬ್, ವೀರಶೈವ ಸಮಾಜದ ಅಧ್ಯಕ್ಷ ಎಲ್. ಬಿ. ರಾಜಶೇಖರಪ್ಪ ಮಾತನಾಡಿದರು. ನಗರಸಭೆ ಅಧ್ಯಕ್ಷೆ ತಿಪ್ಪಮ್ಮ ವೆಂಕಟೇಶ್, ಪ್ರಸನ್ನಕುಮಾರ್, ಮರುಳಾರಾಧ್ಯ ವೇದಿಕೆಯಲ್ಲಿದ್ದರು. ಜಮುರಾ ಕಲಾವಿದರು ಪ್ರಾರ್ಥಿಸಿದರು. ಮೋಕ್ಷಾ ರುದ್ರಸ್ವಾಮಿ ಸ್ವಾಗತಿಸಿದರು.
ಇದನ್ನೂ ಓದಿ : ಕೋವಿಡ್ : ಮನೆಮನೆಗೆ ತೆರಳಿ ಲಸಿಕೆ ನೀಡಿಯೆಂದು ಆದೇಶಿಸಲು ಸಾಧ್ಯವಿಲ್ಲ : ಸುಪ್ರೀಂ ಅಭಿಪ್ರಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.