ವಿದ್ಯಾರ್ಥಿ ಸೇರ್ಪಡೆಗೆ ತಕ್ಕ ಸೌಲಭ್ಯ ಅಗತ್ಯ
Team Udayavani, Sep 9, 2021, 3:00 AM IST
ಪುಂಜಾಲಕಟ್ಟೆ: ವಿದ್ಯಾರ್ಥಿಗಳ ಉನ್ನತ ಭವಿಷ್ಯ ರೂಪಿಸಲು ಸರಕಾರ ಕೈಗೊಂಡ ಯೋಜನೆ ಅನ್ವಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ಗೆ ಆಯ್ಕೆಯಾದ ಬೆಳ್ತಂಗಡಿ ತಾಲೂಕಿನ ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವಿದ್ಯಾರ್ಥಿಗಳ ಸೇರ್ಪಡೆ ಹೆಚ್ಚಿ ದ್ದು, ಇದೀಗ ಹಲವು ಮೂಲ ಸೌಲಭ್ಯಗಳನ್ನು ಕಲ್ಪಿಸಲು ಸರಕಾರ, ದಾನಿಗಳು ಹಾಗೂ ಹಳೇ ವಿದ್ಯಾ ರ್ಥಿಗಳ ನೆರವನ್ನು ನಿರೀಕ್ಷಿ ಸುತ್ತಿದೆ.
ಬೆಳ್ತಂಗಡಿ-ಬಂಟ್ವಾಳ ತಾಲೂಕಿನ ಗಡಿಭಾಗವಾಗಿರುವ ಪುಂಜಾಲಕಟ್ಟೆಯಲ್ಲಿ 1927ರಲ್ಲಿ ಸ್ಥಾಪನೆಯಾದ ಈ ಶಾಲೆಯು 2004ರಲ್ಲಿ ಅಮೃತ ಮಹೋತ್ಸವವನ್ನು ಆಚರಿಸಿ ಶತಮಾನೋತ್ಸವಕ್ಕೆ ಸಜ್ಜಾಗುತ್ತಿದೆ. ಈ ಶಾಲೆ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾದಾನವನ್ನು ಮಾಡಿದೆ. ವಿಶಾಲ ಮೈದಾನದ ಪ್ರದೇ ಶದಲ್ಲಿ 1ರಿಂದ 8ನೇ ತರಗತಿಯವರೆಗೆ ಪ್ರಾಥಮಿಕ ವಿಭಾಗವಾಗಿದ್ದು, ಇದೇ ಸಂಕೀರ್ಣದಲ್ಲಿ ಪ್ರೌಢಶಾಲೆ ಮತ್ತು ಪದವಿ ಪೂರ್ವ ತರಗತಿಗಳನ್ನು ಹೊಂದಿದೆ.
ಮೂಲ ಸೌಕರ್ಯ ಅಗತ್ಯ :
ಶಾಲೆಗೆ ಕೆಲವು ಮೂಲ ಸೌಲಭ್ಯಗಳು ಬೇಕಾಗಿವೆ. ಖಾಲಿ ಇರುವ ಹುದ್ದೆಗಳ ಭರ್ತಿ, ತರಗತಿ ಕೊಠಡಿಗಳು, ಸುಸಜ್ಜಿತ ಅಡುಗೆ ಕೋಣೆ, ಗ್ರಂಥಾಲಯ, ಶೌಚಾಲಯ, ಪ್ರಯೋಗಾಲಯಗಳು, ಕಂಪ್ಯೂಟರ್ ಲ್ಯಾಬ್, ಸ್ಮಾರ್ಟ್ ಕ್ಲಾಸ್ ವ್ಯವಸ್ಥೆ, ಸೋಲಾರ್ ಸಿಸ್ಟಂ, ಪೀಠೊಪರಕಣಗಳ ಕೊರತೆ ಇದೆ. ಜತೆಗೆ ಆವರಣ ಗೋಡೆಯ ಅಗತ್ಯವಿದೆ.
ಕಟ್ಟಡ ಶಿಥಿಲ :
ಶಾಲೆ ಹಳೆಯ ಕಟ್ಟಡದಲ್ಲಿ 1ರಿಂದ 7ನೇ ತರಗತಿಗಳಿದ್ದು, ಕಟ್ಟಡ ಶಿಥಿಲಗೊಳ್ಳುತ್ತಿದೆ. ಪ್ರಸ್ತುತ ಪ್ರಾಥ ಮಿಕ ವಿಭಾಗದಲ್ಲಿ 764 ವಿದ್ಯಾ ರ್ಥಿಗಳಿದ್ದು, ಆಂಗ್ಲ ಮಾಧ್ಯಮ ವಿಭಾಗವಿದೆ. ಎಲ್‌ಕೆಜಿ, ಯುಕೆಜಿಗೆ ದಾನಿಗಳ ಸಹಕಾರದಿಂದ ನೂತನ ಕಟ್ಟಡ ನಿರ್ಮಾಣಗೊಂಡಿದೆ. ಆದರೆ ಪ್ರಾಥಮಿಕ ವಿಭಾಗಕ್ಕೆ ನೂತನ ಕಟ್ಟಡದ ನಿರೀಕ್ಷೆಯಲ್ಲಿದೆ. ಕನ್ನಡ-ಆಂಗ್ಲ ಮಾಧ್ಯಮ ತರಗತಿಗಳಿರುವುದರಿಂದ ಶಿಕ್ಷಕರ ನೇಮಕಾತಿಯಾಗಬೇಕಾಗಿದೆ. ಮುಖ್ಯ ಶಿಕ್ಷಕ, ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಸಮಿತಿ ಈಗಾಗಲೇ ಬಸ್‌ನ ವ್ಯವಸ್ಥೆ, ಎರಡು ಕೊಠಡಿಗಳ ನಿರ್ಮಾಣ, ಗೌರವ ಶಿಕ್ಷಕಿಯರ ನೇಮಕ ಸಹಿತ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದಾರೆ. ವಿವಿಧ ಬೇಡಿಕೆಗಳ ಬಗ್ಗೆ ಸರಕಾರಕ್ಕೂ ಮನವಿ ಮಾಡಲಾಗಿದೆ.
ಪುಂಜಾಲಕಟ್ಟೆ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗ ಸರಕಾರದ ಅನುದಾನದೊಂದಿಗೆ ಜನ ಪ್ರತಿನಿಧಿಗಳ ನೆರವಿನಿಂದ, ದಾನಿಗಳ ಸಹಕಾರದಿಂದ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಈ ಬಾರಿ ಆಂಗ್ಲ ಮಾಧ್ಯಮ ದೊಂದಿಗೆ ಕನ್ನಡ ಮಾಧ್ಯಮ ತರಗತಿಗೂ ಉತ್ತಮ ದಾಖಲಾತಿಯಾಗಿದೆ. ಅಗತ್ಯ ಸವಲತ್ತು ಗಳನ್ನು ಪೂರೈಸಿದಲ್ಲಿ ಮತ್ತಷ್ಟು ಅಭಿವೃದ್ಧಿ ಹೊಂದುತ್ತದೆ. –ಮೋನಪ್ಪ ಕೆ., ಮುಖ್ಯ ಶಿಕ್ಷಕರು, ಪ್ರಾಥಮಿಕ ವಿಭಾಗ.
ಈ ವರ್ಷ ನಮ್ಮ ಶಾಲೆಗೆ ಅತೀ ಹೆಚ್ಚಿನ ಸಂಖ್ಯೆ ಯಲ್ಲಿ ವಿದ್ಯಾರ್ಥಿಗಳು ದಾಖಲಾಗಿದ್ದು, ಮಕ್ಕಳ ಸಂಖ್ಯೆಗನುಗುಣವಾಗಿ ಸೌಲಭ್ಯಗಳು ಅಗತ್ಯ ವಿದೆ. ಈ ಬಗ್ಗೆ ಸರಕಾರದ ಗಮನಕ್ಕೆ ತಂದಿದ್ದು, ಅನುದಾನದ ನಿರೀಕ್ಷೆಯಲ್ಲಿದ್ದೇವೆ. ಪ್ರಸ್ತುತ ಅಭಿವೃದ್ಧಿ ಯೋಜನೆಗಳನ್ನು ನಡೆ ಸುತ್ತಿದ್ದು, ಇನ್ನಷ್ಟು ಯೋಜನೆಗಳು ಅನುಷ್ಠಾನಗೊಳಿಸಲು ದಾನಿಗಳು ಹಾಗೂ ಹಳೇ ವಿದ್ಯಾರ್ಥಿಗಳ ಸಹಕಾರದ ಅಗತ್ಯ. –ಕೆ.ಜಯರಾಮ ಶೆಟ್ಟಿ, ಅಧ್ಯಕ್ಷರು, ಶಾಲಾಭಿವೃದ್ಧಿ ಸಮಿತಿ.
-ರತ್ನದೇವ್ ಪುಂಜಾಲಕಟ್ಟೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.