ಜಮೀನು ಬಳಕೆ: 15 ದಿನದ ಗಡುವು
Team Udayavani, Sep 9, 2021, 6:36 AM IST
ಬೆಂಗಳೂರು: ಕೈಗಾರಿಕಾ ಉದ್ದೇಶಗಳಿಗಾಗಿ ಕೆಐಎಡಿಬಿ ಮೂಲಕ ಪಡೆದ ಜಮೀನನ್ನು ನಿಗದಿತ ಅವಧಿಯಲ್ಲಿ ಬಳಸಬೇಕು. ಇಲ್ಲದಿದ್ದರೆ 15 ದಿನಗಳಲ್ಲಿ ನೋಟಿಸ್ ನೀಡಿ ವಾಪಸ್ ಪಡೆಯ ಲಾಗುತ್ತದೆ ಎಂದು ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಎಚ್ಚರಿಕೆ ನೀಡಿದ್ದಾರೆ.
ನೋಟಿಸ್ ನೀಡುವ ಪ್ರಕ್ರಿಯೆ ಆರಂಭವಾಗಿದೆ. 15 ದಿನದಲ್ಲಿ ಸಮ ರ್ಪಕ ಉತ್ತರ ಬಾರದಿದ್ದರೆ ಮತ್ತೂಂದು ನೋಟಿಸ್ ನೀಡಿ ಜಮೀನು ವಾಪಸ್ ಪಡೆಯಲಾಗುವುದು ಎಂದರು. ರಾಜ್ಯದ ಯಾವ ಯಾವ ಕಡೆ ಜಮೀನನ್ನು ಖಾಲಿ ಬಿಡಲಾಗಿದೆ ಎಂಬ ಬಗ್ಗೆ ಸಮೀಕ್ಷೆ ನಡೆಸಲಾಗುವುದು ಎಂದರು.
ಮೊದಲ ಸ್ಥಾನ:
ಪ್ರಸಕ್ತ ವರ್ಷದ ಮೊದಲ ತ್ರೈಮಾಸಿಕದಲ್ಲಿ ಎಪ್ರಿಲ್‌ನಿಂದ ಜೂನ್ ವರೆಗೆ 62,085 ಕೋಟಿ ರೂ. ವಿದೇಶಿ ನೇರ ಬಂಡವಾಳ ಆಕರ್ಷಿಸಿ ರಾಜ್ಯ ಮೊದಲ ಸ್ಥಾನದಲ್ಲಿದೆ. ದೇಶದ ಒಟ್ಟಾರೆ ವಿದೇಶಿ ಹೂಡಿಕೆಯಲ್ಲಿ ರಾಜ್ಯದ ಪಾಲು ಶೇ. 48ರಷ್ಟಿದ್ದು, 2019-20 ರಲ್ಲಿ 30,746 ಕೋಟಿ ರೂ. ಬಂಡವಾಳ ಆಕರ್ಷಿಸಿ ರಾಜ್ಯವು 3ನೇ ಸ್ಥಾನದಲ್ಲಿತ್ತು.
ನವೆಂಬರ್ಗೆ ಇನ್ವೆಸ್ಟ್ ಕರ್ನಾಟಕ :
ನವೆಂಬರ್‌ನಲ್ಲಿ ಇನ್ವೆಸ್ಟ್ ಕರ್ನಾಟಕ, ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸಲು ಸಿದ್ಧತೆ ನಡೆಯುತ್ತಿದೆ. ಸಿಎಂ ಜತೆ ಚರ್ಚಿಸಿ ದಿನಾಂಕ ನಿಗದಿಪಡಿಸಲಾಗುವುದು ಎಂದರು. ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಮುನ್ನ ನಾಲ್ಕು ವಿಭಾಗಗಳಲ್ಲಿ ಕೈಗಾರಿಕೆ ಅದಾಲತ್ ಸಹ ನಡೆಸಲಾಗುವುದು. ಈ ನಡುವೆ ದುಬಾೖಯಲ್ಲಿ ಬಂಡವಾಳ ಹೂಡಿಕೆ ಮೇಳ ನಡೆಯಲಿದ್ದು ಕರ್ನಾಟಕದ ವತಿಯಿಂದಲೂ ರೋಡ್ ಶೋ ನಡೆಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.