ಟಿ20 ವಿಶ್ವಕಪ್ ಗೆ ಇಂಗ್ಲೆಂಡ್ ತಂಡ ಪ್ರಕಟ: ಮೂರು ವರ್ಷಗಳ ಬಳಿಕ ಮರಳಿದ ಮಾಜಿ ಆರ್ ಸಿಬಿ ವೇಗಿ
Team Udayavani, Sep 9, 2021, 3:57 PM IST
ಲಂಡನ್: ಟಿ20 ವಿಶ್ವಕಪ್ ಗೆ ಭರ್ಜರಿ ತಯಾರಿ ನಡೆಯುತ್ತಿದೆ. ಭಾಗವಹಿಸುವ ದೇಶಗಳು ತಮ್ಮ ತಂಡಗಳನ್ನು ಪ್ರಕಟಿಸುತ್ತಿದೆ. ಟೀಂ ಇಂಡಿಯಾ ಬುಧವಾರ ತನ್ನ ತಂಡ ಪ್ರಕಟಿಸಿದರೆ, ಇಂದು ಇಂಗ್ಲೆಂಡ್ ತಂಡವನ್ನು ಘೋಷಿಸಿದೆ.
ಅಚ್ಚರಿ ಎಂಬಂತೆ 2018ರ ಬಳಿಕ ಅಂತಾರಾಷ್ಟ್ರೀಯ ಟಿ20 ಪಂದ್ಯವಾಡದ ಟೈಮಲ್ ಮಿಲ್ಸ್ ಅವರು ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. 2017ರಲ್ಲಿ ಆರ್ ಸಿಬಿ ಪರವಾಗಿ ಆಡಿದ್ದ ವೇಗಿ ಮಿಲ್ಸ್ ಈ ಬಾರಿ ಇಂಗ್ಲೆಂಡ್ ತಂಡದಲ್ಲಿ ಮಾರ್ಕ್ ವುಡ್, ಕ್ರಿಸ್ ವೋಕ್ಸ್, ಕ್ರಿಸ್ ಜೋರ್ಡಾನ್ ಮತ್ತು ಡೇವಿಡ್ ವಿಲ್ಲೆ ಜೊತೆಗೆ ವೇಗದ ಬೌಲಿಂಗ್ ವಿಭಾಗದಲ್ಲಿ ಸ್ಥಾನ ಪಡೆದಿದ್ದಾರೆ.
ಇದನ್ನೂ ಓದಿ:ಟಿ20 ವಿಶ್ವಕಪ್ ಗೆ ಯುಜಿ ಚಾಹಲ್ ಆಯ್ಕೆ ಯಾಕಿಲ್ಲ: ಕಾರಣ ಹೇಳಿದ ಆಯ್ಕೆ ಸಮಿತಿ ಮುಖ್ಯಸ್ಥ
ಗಾಯಗೊಂಡಿರುವ ಜೋಫ್ರಾ ಆರ್ಚರ್ ಅವರು ಟಿ20 ವಿಶ್ವಕಪ್ ನಲ್ಲೂ ಆಡುತ್ತಿಲ್ಲ. ಮಾನಸಿಕ ಆರೋಗ್ಯದ ಚೇತರಿಕೆಗಾಗಿ ವಿಶ್ರಾಂತಿಯಲ್ಲಿರುವ ಬೆನ್ ಸ್ಟೋಕ್ಸ್ ಕೂಡಾ ಆಡುತ್ತಿಲ್ಲ.
ಇಯಾನ್ ಮಾರ್ಗನ್ ನಾಯಕತ್ವ ವಹಿಸಿದ್ದು, ತಂಡದಲ್ಲಿ ಮೂವರು ವಿಕೆಟ್ ಕೀಪರ್ ಗಳಾ ಜಾನಿ ಬೈರ್‌ಸ್ಟೊ, ಸ್ಯಾಮ್ ಬಿಲ್ಲಿಂಗ್ಸ್, ಜೋಸ್ ಬಟ್ಲರ್ ಸ್ಥಾನ ಪಡೆದಿದ್ದಾರೆ.
ಇಂಗ್ಲೆಂಡ್ ತಂಡ: ಇಯಾನ್ ಮಾರ್ಗನ್, ಮೊಯೀನ್ ಅಲಿ, ಜಾನಿ ಬೈರ್‌ಸ್ಟೊ, ಸ್ಯಾಮ್ ಬಿಲ್ಲಿಂಗ್ಸ್, ಜೋಸ್ ಬಟ್ಲರ್, ಸ್ಯಾಮ್ ಕರ್ರನ್, ಕ್ರಿಸ್ ಜೋರ್ಡಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲಾನ್, ಟೈಮಲ್ ಮಿಲ್ಸ್, ಆದಿಲ್ ರಶೀದ್, ಜೇಸನ್ ರಾಯ್, ಡೇವಿಡ್ ವಿಲ್ಲಿ, ಕ್ರಿಸ್ ವೋಕ್ಸ್, ಮಾರ್ಕ್ ವುಡ್
ಮೀಸಲು: ಟಾಮ್ ಕರ್ರನ್, ಲಿಯಾಮ್ ಡಾಸನ್, ಜೇಮ್ಸ್ ವಿನ್ಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.