ಭವಾನಿಪುರ ಉ.ಚುನಾವಣೆ: ನಾಮಪತ್ರ ಸಲ್ಲಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
Team Udayavani, Sep 10, 2021, 2:34 PM IST
ಕೋಲ್ಕತ್ತ: ಭವಾನಿಪುರ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಕಣಕ್ಕಿಳಿದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಂದು (ಶುಕ್ರವಾರ) ನಾಮಪತ್ರ ಸಲ್ಲಿಸಿದ್ದಾರೆ.
ಇಂದು ಸರ್ವೇ ಭವನಕ್ಕೆ ಆಗಮಿಸಿದ ದೀದಿ, ಭವಾನಿಪುರ ವಿಧಾನ ಸಭಾ ಮತಕ್ಷೇತ್ರಕ್ಕೆ ಟಿಎಂಸಿ ಪಕ್ಷದ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದರು.
ಭವಾನಿಪುರ ಕ್ಷೇತ್ರದಲ್ಲಿ ದೀದಿ ವಿರುದ್ಧ ಬಿಜೆಪಿಯ ಪ್ರಿಯಾಂಕಾ ಟಿಬ್ರೆವಾಲ್ ಅವರು ಸ್ಪರ್ಧಿಸುತ್ತಿದ್ದಾರೆ. ಸಿಪಿಐ-ಎಂ ಪಕ್ಷದಿಂದ ಶ್ರೀಜಿಬ್ ಬಿಸ್ವಾಸ್ ಅವರು ಕಣಕ್ಕಿಳಿದಿದ್ದಾರೆ.
#WATCH West Bengal CM Mamata Banerjee files nomination for by-polls to Bhabhanipur seat
BJP and CPI-M have fielded Priyanka Tibrewal and Srijib Biswas respectively against the CM pic.twitter.com/LSvB1Zdfyk
— ANI (@ANI) September 10, 2021
ಇನ್ನು ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧಿಸಿದ್ದ ಮಮತಾ ಅವರು ಸುವೇಂದು ಅಧಿಕಾರಿ ವಿರುದ್ಧ ಅಲ್ಪ ಮತಗಳ ಅಂತರದಲ್ಲಿ ಪರಾಭವಗೊಂಡಿದ್ದರು. ಆ ಹಿನ್ನೆಲೆಯಲ್ಲಿ ಮಮತಾ ಉಪ ಚುನಾವಣೆಯಲ್ಲಿ ಕಣಕ್ಕಿಳಿದಿದ್ದಾರೆ.
ಮಮತಾ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲು ಭವಾನಿಪುರ ಕ್ಷೇತ್ರದಲ್ಲಿ ಗೆಲುವು ಸಾಧಿಸುವುದು ಅನಿವಾರ್ಯವಾಗಿದೆ. 2011 ಮತ್ತು 2016ರ ವಿಧಾನಸಭೆ ಚುನಾವಣೆಗಳಲ್ಲಿ ಭವಾನಿಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಮತಾ ಗೆಲುವು ಸಾಧಿಸಿದ್ದರು. ಸೆ.30ರಂದು ನಡೆಯುತ್ತಿರುವ ಉಪಚುನಾವಣೆಯಲ್ಲಿ ಮಮತಾ ವಿರುದ್ಧ ಅಭ್ಯರ್ಥಿಯನ್ನು ಹಾಕದಿರಲು ಕಾಂಗ್ರೆಸ್ ನಿರ್ಧರಿಸಿದೆ. ಅಕ್ಟೋಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar remarks; ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ಒತ್ತಾಯ
Kasganj: ವಿವಾಹಿತನಿಗೆ ಪೊಲೀಸ್ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!
Uttara Pradesh: ಬುಲ್ಡೋಜರ್ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ
Manipur ಗಲಭೆಗಳಲ್ಲಿ ‘ಸ್ಟಾರ್‌ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್
AAP; ಸಂಜಯ್ ಸಿಂಗ್ ವಿರುದ್ಧ ಗೋವಾ ಸಿಎಂ ಪತ್ನಿಯಿಂದ 100 ಕೋಟಿ ಮಾನನಷ್ಟ ಮೊಕದ್ದಮೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.