ನೀರಜ್ ಚೋಪ್ರಾ ಕನಸು ನನಸಾಯ್ತು: ತಂದೆ ತಾಯಿಯೊಂದಿಗೆ ವಿಮಾನ ಪ್ರಯಾಣ ಮಾಡಿದ ಚಿನ್ನದ ಹುಡುಗ
Team Udayavani, Sep 11, 2021, 12:30 PM IST
ಹೊಸದಿಲ್ಲಿ: ಟೋಕಿಯೊ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾರ ಬಹುದಿನಗಳ ಕನಸೊಂದು ಇದೀಗ ನನಸಾಗಿದೆ. ತಮ್ಮ ತಂದೆ ತಾಯಿಗೆ ವಿಮಾನ ಪ್ರಯಾಣದ ಅನುಭವ ನೀಡಬೇಕೆಂಬ ಅವರ ಕನಸು ನನಸಾಗಿದೆ.
ಹೌದು. ನೀರಜ್ ಚೋಪ್ರಾ ಅವರ ತಂದೆ ತಾಯಿ ಇದೇ ಮೊದಲ ಬಾರಿಗೆ ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ಸ್ವತಃ ನೀರಜ್ ಚೋಪ್ರಾ ಅವರು ಟ್ವಿಟ್ಟರ್ ನಲ್ಲಿ ಈ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಇದನ್ನೂ ಓದಿ:ವಿರಾಟ್ ಕೊಹ್ಲಿಗಾಗಿ ಮ್ಯಾಂಚೆಸ್ಟರ್ ಗೆ ಬರಲಿದೆ ಆರ್ ಸಿಬಿಯ ವಿಶೇಷ ವಿಮಾನ
“ನನ್ನ ಹೆತ್ತವರನ್ನು ಅವರ ಮೊದಲ ಬಾರಿ ವಿಮಾನದಲ್ಲಿ ಕರೆದುಕೊಂಡು ಹೋಗಲು ಇಂದು ಸಾಧ್ಯವಾಗಿದೆ. ನನ್ನ ಒಂದು ಸಣ್ಣ ಕನಸು ಇಂದು ನನಸಾಯಿತು” ಎಂದು ನೀರಜ್ ಚೋಪ್ರಾ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.
A small dream of mine came true today as I was able to take my parents on their first flight.
आज जिंदगी का एक सपना पूरा हुआ जब अपने मां – पापा को पहली बार फ्लाइट पर बैठा पाया। सभी की दुआ और आशिर्वाद के लिए हमेशा आभारी रहूंगा ?? pic.twitter.com/Kmn5iRhvUf
— Neeraj Chopra (@Neeraj_chopra1) September 11, 2021
ಟೋಕಿಯೊ ಒಲಿಂಪಿಕ್ಸ್ ನಲ್ಲಿ ಜಾವೆಲಿಂಗ್ ಥ್ರೋ ವಿಭಾಗದಲ್ಲಿ ನೀರಜ್ ಚೋಪ್ರಾ ಬಂಗಾರದ ಪದಕ ಗೆದ್ದುಕೊಂಡಿದ್ದರು. ಫೈನಲ್ ನಲ್ಲಿ ಅವರು 87.58 ಮೀಟರ್ ದೂರಕ್ಕೆ ಜಾವೆಲಿಂಗ್ ಎಸೆದಿದ್ದರು. ಒಲಿಂಪಿಕ್ಸ್ ನ ಅಥ್ಲೆಟಿಕ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಖ್ಯಾತಿಗೆ ನೀರಜ್ ಚೋಪ್ರಾ ಪಾತ್ರರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.