ನಮ್ಮ ಪಾಲಿನ ನೀರನ್ನು ಪಡೆಯುವ ಯೋಜನೆಗಳ ಜಾರಿಗೆ ಸದಾ ಬದ್ಧ: ಗೋವಿಂದ ಕಾರಜೋಳ
Team Udayavani, Sep 11, 2021, 1:49 PM IST
ಬೆಳಗಾವಿ: ನಮ್ಮ ಪಾಲಿನ ನೀರನ್ನು ಉಪಯೋಗಮಾಡಿಕೊಳ್ಳಲು ಯೋಜನೆಗಳ ಜಾರಿಗೆ ಹಿಂದೆ ಮುಂದೆ ನೋಡುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸ್ಪಷ್ಟಪಡಿಸಿದರು.
ಶನಿವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಾನು ನೀರಾವರಿ ಮಂತ್ರಿಯಾಗಿ ಒಂದು ತಿಂಗಳಾಗಿದೆ. ಈ ಅವಧಿಯಲ್ಲಿ ಎರಡು ಬಾರಿ ಸಿಎಂ ಜೊತೆಗೆ ದೆಹಲಿಗೆ ಹೋಗಿ ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರಸಿಂಗ್ ಶೇಖಾವತ್ ಅವರ ಜೊತೆಗೆ ರಾಜ್ಯದ ನೀರಾವರಿ ಯೋಜನೆಗಳ ಕುರಿತು ಸಭೆ ಮಾಡಿದ್ದೇವೆ. ಅವರೂ ನಮ್ಮ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.
ಇದಲ್ಲದೆ ಕಾನೂನು ತಜ್ಞರ ಜೊತೆಗಿನ ಸಭೆಯಲ್ಲಿ ಅಂತರ್ ರಾಜ್ಯ ಜಲವಿವಾದಗಳಲ್ಲಿ ನಮ್ಮ ಪರವಾಗಿ ತೀರ್ಪು ಬರುವಂತೆ ವಾದ ಮಾಡುವಂತೆ ಮುಖ್ಯಮಂತ್ರಿಗಳು ಸೂಚನೆ ಕೊಟ್ಟಿದ್ದಾರೆ ಎಂದ ಅವರು ಎತ್ತಿನಹೊಳೆ ಯೋಜನೆಯಲ್ಲಿ ನಮಗೆ 24 ಟಿಎಂಸಿ ನೀರು ಬರಲಿದೆ. ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದೇನೆ. ಖಂಡಿತವಾಗಲೂ ನಮ್ಮ ಪಾಲಿನ ನೀರನ್ನು ಉಪಯೋಗ ಮಾಡಿಕೊಳ್ಳಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದೇವೆ ಎಂದು ಹೇಳಿದರು.
ಇದನ್ನೂ ಓದಿ:ಮುಂಬೈ: ನಿರ್ಭಯಾ ರೀತಿ ಅತ್ಯಾಚಾರಕ್ಕೊಳಗಾಗಿದ್ದ ಮಹಿಳೆ ಸಾವು
ಸುವರ್ಣ ವಿಧಾನಸೌಧಕ್ಕೆ ಸರಕಾರದ ಕೆಲವು ಕಚೇರಿಗಳನ್ನು ಸ್ಥಳಾಂತರ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಗಂಭೀರವಾಗಿ ಚಿಂತನೆ ನಡೆಸಿದ್ದಾರೆ. ಇದನ್ನು ಐತಿಹಾಸಿಕ ನಗರವಾಗಿ ಸಾಬೀತು ಮಾಡಬೇಕು ಎಂದು ನಿರ್ಧರಿಸಿದ್ದೇವೆ. ಈ ನಿಟ್ಟಿನಲ್ಲಿ ಇನ್ನೂ ಆಗಬೇಕಿರುವ ಅಭಿವೃದ್ಧಿ ಕೆಲಸಗಳ ಕುರಿತು ಶಾಸಕರು, ಸಂಸದರು ತೀರ್ಮಾನಿಸುತ್ತಾರೆ ಎಂದು ಹೇಳಿದರು. ಬೆಳಗಾವಿ ಜಿಲ್ಲೆಯ ಕೆಲ ಶಾಸಕರ ಒಗ್ಗಟ್ಟಿನ ಪ್ರಯತ್ನದ ಪ್ರತಿಫಲವಾಗಿ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಬಹುತೇಕ ಮೂರು ಮಹಾನಗರ ಪಾಲಿಕೆಗಳಲ್ಲಿ ಬಿಜೆಪಿ ಅಧಿಕಾರ ವಹಿಸಲಿದೆ. ಕಲಬುರ್ಗಿ ಪಾಲಿಕೆಯಲ್ಲಿಯೂ ನೂರಕ್ಕೆ ನೂರು ನಾವೇ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೆಳಗಾವಿಯ ವಿಷಯದಲ್ಲಿ ಪದೇ ಪದೇ ವಿವಾದ ಉಂಟುಮಾಡುವ ಎಂ ಇ ಎಸ್ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಯಾರೋ ಹೇಳುತ್ತಾರೆ ಎಂದು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಕರ್ನಾಟಕದ ಒಂದಿಂಚೂ ನೆಲ ಕೊಡುವುದಿಲ್ಲ. ಈ ವಿಷಯದಲ್ಲಿ ಮಹಾಜನ ವರದಿಯೇ ಅಂತಿಮ ಎಂದು ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಸದೆ ಮಂಗಲ ಅಂಗಡಿ, ಶಾಸಕರಾದ ಅಭಯ್ ಪಾಟೀಲ್, ಅನಿಲ್ ಬೆನಕೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಗಾಂಜಾ ಸೇವನೆ; ಯುವಕನ ಬಂಧನ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.