RRR ಚಿತ್ರತಂಡದಿಂದ ಅಭಿಮಾನಿಗಳಿಗೆ ಮತ್ತೆ ನಿರಾಸೆ
Team Udayavani, Sep 11, 2021, 3:03 PM IST
ಹೈದರಾಬಾದ್ : ಸಿನಿ ಪ್ರೇಮಿಗಳಿಗೆ ಮತ್ತೊಂದು ಬಾರಿ ನಿರಾಸೆಯಾಗಿದೆ. ಬಹುನಿರೀಕ್ಷಿತ “RRR” ಚಿತ್ರದ ಬಿಡುಗಡೆಯ ದಿನಾಂಕ ಮತ್ತೆ ಮುಂದಕ್ಕೆ ಹೋಗಿದೆ.
ಅಂದುಕೊಂಡಂತೆ ನಡೆದಿದ್ದರೆ ಈಗಾಗಲೇ ತೆರೆಯ ಮೇಲೆ RRR ಮೂವಿ ಅಬ್ಬರಿಸಬೇಕಿತ್ತು. ಆದರೆ, ಕೋವಿಡ್ ಮೊದಲ ಹಾಗೂ ಎರಡನೇ ಅಲೆಯಿಂದಾಗಿ ಸಿನಿಮಾ ಶೂಟಿಂಗ್ ತಡವಾಯಿತು. ಪರಿಣಾಮ ಬಿಡುಗಡೆಯ ದಿನಾಂಕ ಅನಿವಾರ್ಯವಾಗಿ ಮುಂದೂಡಲೇಬೇಕಾಯಿತು.
2018 ರಿಂದ ಶೂಟಿಂಗ್ ಪ್ರಾರಂಭಿಸಿದ ‘RRR’ ಚಿತ್ರವನ್ನು ಈ ವರ್ಷದ ಅಕ್ಟೋಬರ್ 13 ರಂದು ಪ್ರೇಕ್ಷಕರಿಗೆ ತೋರಿಸಬೇಕೆಂದು ಚಿತ್ರತಂಡ ಪ್ಲ್ಯಾನ್ ಮಾಡಿತ್ತು. ಆದರೆ, ಪೋಸ್ಟ್ ಪ್ರೊಡಕ್ಷನ್ ಕೆಲಸ ಇನ್ನೂ ಬಾಕಿ ಇರುವುದರಿಂದ ಅಂದುಕೊಂಡ ದಿನಕ್ಕೆ ಸಿನಿಮಾ ಬಿಡುಗಡೆ ಮಾಡುವುದು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆ ರಿಲೀಸ್ ಡೇಟ್ ಪೋಸ್ಟ್ ಪೋನ್ ಮಾಡಲಾಗಿದೆ.
Post production nearly done to have #RRRMovie ready by October’21.
But as known to many, we are postponing the release but cannot announce a new date with theatres indefinitely closed.
We will release at the earliest possible date when the world cinema markets are up and running.— RRR Movie (@RRRMovie) September 11, 2021
ಈ ಬಗ್ಗೆ ಆರ್‍ಆರ್‍ಆರ್ ಚಿತ್ರತಂಡದ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಅಕ್ಟೋಬರ್ 21 ರಂದು ನಮ್ಮ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ಮುಕ್ತಾಯವಾಗಲಿದೆ. ಆದ್ದರಿಂದ ಚಿತ್ರದ ಬಿಡುಗಡೆಯ ದಿನಾಂಕವನ್ನು ಮುಂದಕ್ಕೆ ಹಾಕುತ್ತಿದ್ದೇನೆ. ಆದರೆ, ಹೊಸ ದಿನಾಂಕವನ್ನು ಸದ್ಯಕ್ಕೆ ಘೋಷಣೆ ಮಾಡುತ್ತಿಲ್ಲ. ಎಲ್ಲ ಕಡೆ ಚಿತ್ರಮಂದಿರಗಳು ತೆರೆದ ಬಳಿಕ ಸಿನಿಮಾ ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದೆ.
ಇನ್ನು RRR ಚಿತ್ರವನ್ನು ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ನಿರ್ದೇಶನ ಮಾಡುತ್ತಿದ್ದಾರೆ. ಜ್ಯೂನಿಯರ್ ಎನ್‍ಟಿಆರ್ ಹಾಗೂ ರಾಮ್ ಚರಣ್ ಅವರು ಮುಖ್ಯಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಬಾಲಿವುಡ್ ನಟಿ ಆಲಿಯಾ ಭಟ್ ಹಾಗೂ ಅಜಯ್ ದೇವಗನ್ ಅವರೂ ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್ ಮಲಿಕ್; ಇಲ್ಲಿದೆ ಫೋಟೋಸ್
ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್ ಮಾತು
Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.