ಚಲಿಸುತ್ತಿದ್ದ ಕಾರಿನಲ್ಲಿ ಅತ್ಯಾಚಾರ|ಮುಂಬೈ ಘಟನೆ ಮಾಸುವ ಮುನ್ನವೆ ಮತ್ತೊಂದು ಹೀನ ಕೃತ್ಯ
Team Udayavani, Sep 11, 2021, 9:19 PM IST
ಚೆನ್ನೈ: ಚಲಿಸುತ್ತಿದ್ದ ಕಾರಿನಲ್ಲಿ 20 ವರ್ಷ ವಯಸ್ಸಿನ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಚೆನ್ನೈನ ಮೆಲ್ಕತಿರ್ಪುರ ಗ್ರಾಮದ ಬಳಿ ಕಳೆದ ಎರಡು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಘಟನೆಗೆ ಸಂಬಂಧಪಟ್ಟಂತೆ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಯುವತಿಗೆ ಡ್ರಗ್ಸ್ ನೀಡಿ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ಗುಣಶೀಲನ್, ಜೆಬನೇಸನ್, ಗುಣಶೇಖರನ್ ಮತ್ತು ಅಜಿತ್ ಎಂದು ಗುರುತಿಸಲಾಗಿದೆ.
ಸಂತ್ರಸ್ಥ ಯುವತಿ ಖಾಸಗಿ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಈಕೆ ಮತ್ತು ಗುಣಶೀಲನ್ ಇಬ್ಬರೂ ಆನ್ಲೈನ್ ಆ್ಯಪ್ವೊಂದರ ಮೂಲಕ ಸ್ನೇಹಿತರಾಗಿದ್ದರು. ಬುಧವಾರ ಗುಣಶೀಲನ್ ತನ್ನ ಕಾರಿನಲ್ಲಿ ಆ ಯುವತಿಯನ್ನು ಅಂಗಡಿಯಿಂದ ಪಿಕಪ್ ಮಾಡಿ, ಅಲ್ಲಿಂದ ಕಾಂಚಿಪುರಂನಲ್ಲಿರುವ ಆತನ ಫಾರ್ಮ್ಹೌಸ್ಗೆ ಕರೆದುಕೊಂಡು ಹೊರಟಿದ್ದ. ಯುವತಿಗೆ ನೀಡಿದ್ದ ಲೇಸ್ಗೆ ನಿದ್ರೆ ಬರುವ ಯಾವುದೇ ಒಂದು ಮದ್ದನ್ನು ಸವರಲಾಗಿತ್ತು. ಹಾಗೇ ಒಂದು ಸಾಫ್ಟ್ ಡ್ರಿಂಕ್ನ್ನು ಕುಡಿಯಲು ಕೊಡಲಾಗಿತ್ತು. ಆಕೆ ನಿದ್ರೆಗೆ ಜಾರುತ್ತಿದ್ದಂತೆ ಗುಣಶೀಲನ್ ಮತ್ತು ಆತನ ಸ್ನೇಹಿತರು ಸೇರಿ ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾರೆ.
ತನ್ನ ಮೇಲೆ ಅತ್ಯಾಚಾರ ನಡೆಯುತ್ತಿದ್ದಾಗಲೇ ಆ ಯುವತಿಗೆ ಎಚ್ಚರವೇನೋ ಆಗಿದೆ. ಆಕೆ ತಪ್ಪಿಸಿಕೊಳ್ಳಲು ಕಾರಿನ ಕಿಟಕಿ ಒಡೆಯಲು ಯತ್ನಿಸಿದ್ದಾಳೆ. ಆದರೆ ಪ್ರಯೋಜನ ಆಗಲಿಲ್ಲ. ಸ್ಥಳದಲ್ಲಿ ಗಲಾಟೆ ಕೇಳುತ್ತಿದ್ದಂತೆ ಸ್ಥಳೀಯರು ಅಲ್ಲಿಗೆ ಆಗಮಿಸಿದ್ದಾರೆ. ಜನರು ಬರುತ್ತಿರುವುದನ್ನು ನೋಡಿದ ಆರೋಪಿಗಳು ಅಲ್ಲಿಂದ ಕಾರು ಚಲಾಯಿಸಿಕೊಂಡು ಹೋಗಿದ್ದಾರೆ. ಬಳಿಕ ಅಸ್ವಸ್ಥಳಾದ ಆ ಯುವತಿಯನ್ನು ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಟ್ಟು ಹೋಗಿದ್ದರು. ಆ ಯುವತಿ ಹೇಗೋ ಸುಧಾರಿಸಿಕೊಂಡು ಸಮೀಪದ ಪೊಲೀಸ್ ಸ್ಟೇಶನ್ಗೆ ಹೋಗಿ, ದೂರು ನೀಡಿದ್ದಳು. ನಂತರ ಅವಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಒಟ್ಟೂ ಐವರು ಅತ್ಯಾಚಾರ ಮಾಡಿದ್ದು, ಅದರಲ್ಲಿ ನಾಲ್ವರನ್ನು ಮಾತ್ರ ಅರೆಸ್ಟ್ ಮಾಡಲಾಗಿದೆ. ಇನ್ನೊಬ್ಬ ಪರಾರಿಯಾಗಿದ್ದಾನೆ.
ಇನ್ನು ಗುರುವಾರ ರಾತ್ರಿಯಷ್ಟೆ 30 ವರ್ಷ ವಯಸ್ಸಿನ ಯುವತಿ ಮೇಲೆ ಮುಂಬೈನಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯ ಖಾಸಗಿ ಭಾಗಕ್ಕೆ ರಾಡ್ ಸೇರಿಸಿದ ಅಮಾನವೀಯ ಕೃತ್ಯ ನಡೆದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂತ್ರಸ್ಥೆ ಕೊನೆಯುಸಿರೆಳೆದಿದ್ದಾಳೆ. ಈ ಘಟನೆ ಮಾಸುವ ಮುನ್ನವೆ ಚೆನ್ನೈನಲ್ಲಿ ಯುವತಿ ಮೇಲೆ ಅತ್ಯಾಚಾರ ನಡೆದಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Delhi: 5ಜಿ ಸೇವೆಗಾಗಿ ಬಿಎಸ್ಎನ್ಎಲ್ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.