ಅಸಮಾಧಾನ: ಅಫ್ಘಾನ್ ಟಿ20 ತಂಡದ ನಾಯಕತ್ವ ತ್ಯಜಿಸಿದ ರಶೀದ್
Team Udayavani, Sep 12, 2021, 6:24 AM IST
ಕಾಬೂಲ್: ಟಿ20 ವಿಶ್ವಕಪ್ ಟೂರ್ನಿಗೆ ಅಫ್ಘಾನಿಸ್ತಾನ ಕ್ರಿಕೆಟ್ ತಂಡ ಪ್ರಕಟವಾದ ಬೆನ್ನಲ್ಲೇ ರಶೀದ್ ಖಾನ್ ತಮ್ಮ ನಾಯಕನ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ತಂಡದ ಆಯ್ಕೆ ವಿಚಾರದಲ್ಲಿ ಅಸಮಾಧಾನಗೊಂಡಿರುವುದೇ ಇದಕ್ಕೆ ಕಾರಣ. ಪ್ರಸ್ತುತ ಇಡೀ ದೇಶದಲ್ಲಿ ತಾಲಿಬಾನ್ ಆಡಳಿತವಿದೆ. ಅಫ್ಘಾನಿಸ್ತಾನ ಕ್ರಿಕೆಟ್ ಅನ್ನೂ ತಾಲಿಬಾನ್ ಪರೋಕ್ಷವಾಗಿ ನಿಯಂತ್ರಿಸುತ್ತಿದೆ. ತಾಲಿಬಾನ್ ವಿರುದ್ಧ ಬಹಿರಂಗವಾಗಿಯೇ ರಶೀದ್ ಖಾನ್ ಬೇಸರ ವ್ಯಕ್ತಪಡಿಸಿದ್ದಾರೆ. ಇದರ ಮಧ್ಯೆಯೇ ರಶೀದ್‌ರನ್ನು ಕೇಳದೇ ಅಫ್ಘಾನಿಸ್ತಾನ ಟಿ20 ತಂಡ ಆಯ್ಕೆಯಾಗಿದೆ. ಅದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
“ಟಿ20 ವಿಶ್ವಕಪ್ ಟೂರ್ನಿಗೆ ತಂಡವನ್ನು ಆಯ್ಕೆ ಮಾಡುವಾಗ ಅಫ್ಘಾನ್ ಕ್ರಿಕೆಟ್ ಮಂಡಳಿ ನನಗೆ ಯಾವುದೇ ಮಾಹಿತಿ ನೀಡಿಲ್ಲ. ಮಂಡಳಿಯ ಈ ನಡೆ ಬೇಸರ ತಂದಿದೆ. ಹೀಗಾಗಿ ನಾನು ಟಿ20 ತಂಡದ ನಾಯಕನ ಸ್ಥಾನದಿಂದ ಕೆಳಗಿಳಿಯುತ್ತಿದ್ದೇನೆ’ ಎಂದು ರಶೀದ್ ಖಾನ್ ಟ್ವೀಟ್ ಮಾಡಿದ್ದಾರೆ. ಅಫ್ಘಾನಿಸ್ಥಾನದ ಪ್ರತಿಭಾವಂತ ಆಟಗಾರ ರಶೀದ್ ಖಾನ್ ಕಳೆದ ಜುಲೈ ತಿಂಗಳಲ್ಲಷ್ಟೇ ಟಿ20 ತಂಡದ ನಾಯಕರಾಗಿ ನೇಮಕಗೊಂಡಿದ್ದರು.
ಪ್ರಸ್ತುತ ಬೆಳವಣಿಗೆಯನ್ನು ಗಮನಿಸಿದರೆ ರಶೀದ್ ಖಾನ್, ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಉಳಿಸಿಕೊಳ್ಳುವುದೂ ಕಷ್ಟವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.