ಕಾಸನಾಡಿ -ಬುಗುರಿಕಡು ರಸ್ತೆ ಅಭಿವೃದ್ಧಿಗೆ ಬೇಡಿಕೆ


Team Udayavani, Sep 13, 2021, 3:20 AM IST

ಕಾಸನಾಡಿ -ಬುಗುರಿಕಡು ರಸ್ತೆ ಅಭಿವೃದ್ಧಿಗೆ ಬೇಡಿಕೆ

ಹೆಮ್ಮಾಡಿ: ಸಂತೋಷನಗರ ಸಮೀಪದ ಕಾಸನಾಡಿ ಬೊಬ್ಬರ್ಯ ದೈವಸ್ಥಾನ ಬಳಿಯಿಂದ ಬುಗುರಿಕಡು ಹಾಲಾಡಿ ಬೊಬ್ಬರ್ಯ ದೈವಸ್ಥಾನದವರೆಗಿನ ರಸ್ತೆ ಸಂಪೂರ್ಣ ಹೊಂಡ-ಗುಂಡಿಮಯವಾಗಿದ್ದು, ವಾಹನ ಸಂಚಾರವೇ ದುಸ್ತರಗೊಂಡಿದೆ. ಸುಮಾರು 1 ಕಿ.ಮೀ. ಉದ್ದದ ರಸ್ತೆಯ ಡಾಮರೆಲ್ಲ ಕಿತ್ತು ಹೋಗಿದ್ದು, ಮಳೆ ನೀರು ರಸ್ತೆಯಲ್ಲಿಯೇ ಹರಿದು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.

ಹೆಮ್ಮಾಡಿ ಗ್ರಾ.ಪಂ. ವ್ಯಾಪ್ತಿಯ ಸಂತೋಷನಗರದ ಮುಖ್ಯ ರಸ್ತೆಯಿಂದ ಬುಗುರಿಕಡುವರೆಗೆ ಒಟ್ಟು 2.4 ಕಿ.ಮೀ. ದೂರವಿದ್ದು, ಈ ಪೈಕಿ ಅಂದಾಜು 900 ಮೀ.ವರೆಗೆ ಈವರೆಗೆ ಅಭಿವೃದ್ಧಿಯಾಗಿದೆ. ಆದರೆ ಅಲ್ಲಿಂದ ಮುಂದಕ್ಕೆ ಈವರೆಗೆ ಅಭಿವೃದ್ಧಿಯಾಗದೆ ನನೆಗುದಿಗೆ ಬಿದ್ದಿದೆ.

15 ವರ್ಷಗಳ ಹಿಂದೆ ಡಾಮರು :

ಈ ಕಾಸನಾಡಿ ಬೊಬ್ಬರ್ಯ ದೈವಸ್ಥಾನ ಬಳಿಯಿಂದ ಬುಗುರಿಕಡು ಹಾಲಾಡಿ ಬೊಬ್ಬರ್ಯ ದೈವಸ್ಥಾನದವರೆಗಿನ ಸುಮಾರು 1 ಕಿ.ಮೀ. ದೂರದ ರಸ್ತೆಗೆ ಮೊದಲ ಬಾರಿಗೆ ಡಾಮರು ಕಾಮಗಾರಿಯಾಗಿದ್ದು ಸುಮಾರು 15 ವರ್ಷಗಳ ಹಿಂದೆ. ಅಲ್ಲಿಂದ ಇಲ್ಲಿಯವರೆಗೆ ಒಂದೇ ಒಂದು ಸಲವೂ ಮರು ಡಾಮರು ಕಾಮಗಾರಿಯೇ ಆಗಿಲ್ಲ. ಆಗಾಗ ರಸ್ತೆಯ ಹೊಂಡ- ಗುಂಡಿಗಳಿಗೆ ತೇಪೆ ಹಾಕಿದ್ದು ಬಿಟ್ಟರೆ, ಈವರೆಗೆ ಬೇರೆ ಯಾವುದೇ ಅಭಿವೃದ್ಧಿಯಾಗಿಲ್ಲ.

ರಸ್ತೆಯೇ ಚರಂಡಿ :

ಈ ರಸ್ತೆಯುದ್ದಕ್ಕೂ ಮಳೆ ನೀರು ಹರಿದು ಹೋಗಲು ಎರಡೂ ಕಡೆಗಳಲ್ಲಿಯೂ ಚರಂಡಿ ವ್ಯವಸ್ಥೆಯೇ ಇಲ್ಲ. ಹೀಗಾಗಿ ಮಳೆ ನೀರು ಪೂರ್ತಿ ರಸ್ತೆಯಲ್ಲಿಯೇ ಹರಿದು ಹೋಗುತ್ತಿದೆ. ರಸ್ತೆಯ ಹಲವೆಡೆಗಳಲ್ಲಿ ದೊಡ್ಡ – ದೊಡ್ಡ ಹೊಂಡ ಬಿದ್ದಿದ್ದು, ಮಳೆ ನೀರು ನಿಂತು ಗುಂಡಿಯು ಕಾಣದೆ ವಾಹನ ಸವಾರರು ಸಂಕಷ್ಟಪಡುವಂತಾಗಿದೆ.

80ಕ್ಕೂ ಹೆಚ್ಚು ಮನೆ :

ಈ ಕಾಸನಾಡಿ, ಬುಗುರಿಕಡು ಭಾಗದ ಜನರು ಪಂಚಾಯತ್‌, ಪಡಿತರ, ಅಂಚೆ, ಬ್ಯಾಂಕ್‌, ಪೇಟೆ ಇನ್ನಿತರ ಎಲ್ಲ ಕೆಲಸ ಕಾರ್ಯಗಳಿಗೆ ಹೆಮ್ಮಾಡಿ ಪೇಟೆಯನ್ನೇ ಆಶ್ರಯಿಸಿದ್ದಾರೆ. ಇಲ್ಲಿನ ನಾಗರಿಕರು ಹೆಮ್ಮಾಡಿ ಪೇಟೆಗೆ ಬರಬೇಕಾದರೆ ಇದೇ ರಸ್ತೆಯನ್ನು ಆಶ್ರಯಿಸಿದ್ದಾರೆ. ಈ ಭಾಗದಲ್ಲಿ 80ಕ್ಕೂ ಹೆಚ್ಚು ಮನೆಗಳಿದ್ದು, ನಿತ್ಯ ನೂರಾರು  ವಾಹನಗಳು ಈ ಮಾರ್ಗದಲ್ಲಿ ಓಡಾಟ ನಡೆಸುತ್ತವೆ.

ನಾವು ಸಂತೋಷನಗರದಲ್ಲಿ ಅನೇಕ ವರ್ಷಗಳಿಂದ ರಿಕ್ಷಾ ಬಾಡಿಗೆಗೆ ಮಾಡಿಕೊಂಡಿದ್ದು, ಕಾಸನಾಡಿ, ಬುಗುರಿಕಡು ಕಡೆಗೆ ನಮಗೆ ಹೆಚ್ಚಿನ ಬಾಡಿಗೆ ಇರುವುದು. ಆದರೆ ಈ ಹೊಂಡ-ಗುಂಡಿಮಯ ಮಾರ್ಗದಲ್ಲಿ ನಿತ್ಯ ಸಂಚರಿಸುತ್ತಿರುವುದರಿಂದ ನಮಗೆ ಸಿಗುವ ಬಾಡಿಗೆ ಪೂರ್ತಿ ನಮ್ಮ ರಿಕ್ಷಾ ದುರಸ್ತಿಗೆ ಆಗುತ್ತದೆ. ಇಂಧನ ದರವೂ ದುಬಾರಿ, ಹೀಗೆ ಆದರೆ ಜೀವನ ಹೇಗೆ? ನಾವು ಬಿಟ್ಟರೆ ಬೇರೆ ಕಡೆಗಳ ವಾಹನಗಳು ಇಲ್ಲಿಗೆ ಬಾಡಿಗೆಗೆ ಬರಲು ಸಹ ಹಿಂದೇಟು ಹಾಕುತ್ತಾರೆ. ಆದಷ್ಟು ಬೇಗ ಈ ರಸ್ತೆಯ ಅಭಿವೃದ್ಧಿಯಾಗಲಿ.ಪ್ರಶಾಂತ್‌ ಪಡುಮನೆ, ರಿಕ್ಷಾ ಚಾಲಕರು

ಸಂತೊಷನಗರದಿಂದ ಬುಗುರಿಕಡು ರಸ್ತೆ ಅವ್ಯವಸ್ಥೆ ಬಗ್ಗೆ ಗಮನದಲ್ಲಿದ್ದು, ಈ ರಸ್ತೆಯ ಸುಮಾರು 1 ಕಿ.ಮೀ.ವರೆಗೆ ಈಗಾಗಲೇ ಅಭಿವೃದ್ಧಿ ಮಾಡಲಾಗಿದೆ. ಸಂಪೂರ್ಣ ರಸ್ತೆ ಅಭಿವೃದ್ಧಿ ಬಗ್ಗೆ  ಈಗಾಗಲೇ 50 ಲಕ್ಷ ರೂ. ಅನುದಾನಕ್ಕಾಗಿ ಸಂಬಂಧಪಟ್ಟ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಬಿ.ಎಂ. ಸುಕುಮಾರ್‌ ಶೆಟ್ಟಿ, ಬೈಂದೂರು ಶಾಸಕರು

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Kundapura: ರಿಕ್ಷಾದಿಂದ ಬಿದ್ದು ಮಹಿಳೆಗೆ ಗಂಭೀರ ಗಾಯ

Kundapura: ರಿಕ್ಷಾದಿಂದ ಬಿದ್ದು ಮಹಿಳೆಗೆ ಗಂಭೀರ ಗಾಯ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.