120 ಆ್ಯಂಬುಲೆನ್ಸ್‌ಗಳಿಗೆ ಚಾಲನೆ: ಗುಣಮಟ್ಟದ ಸೇವೆ ನೀಡಿ ಜೀವ ಉಳಿಸಿ; ಸಿಎಂ

Team Udayavani, Sep 12, 2021, 9:15 PM IST

120 ಆ್ಯಂಬುಲೆನ್ಸ್‌ಗಳಿಗೆ ಚಾಲನೆ: ಗುಣಮಟ್ಟದ ಸೇವೆ ನೀಡಿ ಜೀವ ಉಳಿಸಿ; ಸಿಎಂ

ಬೆಂಗಳೂರು: ಆರೋಗ್ಯ ಕವಚ ಯೋಜನೆಯ “108 ವಾಹನ’ವು ರೋಗಿಗಳನ್ನು ಸಕಾಲದಲ್ಲಿ ಆಸ್ಪತ್ರೆಗೆ ಸೇರಿಸುವ ವಾಹನಗಳಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರೋಗ್ಯ ಕವಚ ಯೋಜನೆಯಡಿ ನೂತನವಾಗಿ ಸೇರ್ಪಡೆಗೊಳಿಸಿರುವ 120 ಆ್ಯಂಬುಲೆನ್ಸ್‌ಗಳಿಗೆ ವಿಧಾನಸೌಧದ ಮುಂಭಾಗ ಹಸಿರು ನಿಶಾನೆ ತೋರಿದ ಅವರು, ಕರೆ ಬಂದ ಕೂಡಲೇ ನಿಗದಿತ ಸ್ಥಳಕ್ಕೆ ತೆರಳಿ ರೋಗಿ ಗಳನ್ನು ಆಸ್ಪತ್ರೆಗೆ ದಾಖಲಿಸಿ ಪ್ರಾಣ ಉಳಿಸಲು ಶ್ರಮಿಸಬೇಕು ಎಂದು ಆ್ಯಂಬುಲೆನ್ಸ್‌ ಚಾಲಕರಿಗೆ ಕರೆ ನೀಡಿದರು. 108 ಆ್ಯಂಬುಲೆನ್ಸ್‌ ಸೇವೆ ಗ್ರಾಮೀಣ ಭಾಗದಲ್ಲಿ ಬಹಳ ಉಪಯುಕ್ತವಾಗಿದೆ. ಆ್ಯಂಬುಲೆನ್ಸ್‌ ಆರೋಗ್ಯದ ಜೀವನಾಡಿಯಾಗಿದೆ ಎಂದು ಹೇಳಿದರು.

ಅಡ್ವಾನ್ಸ್‌ಡ್‌ ಲೈಫ್ ಸಪೋರ್ಟ್‌
ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ. ಸುಧಾಕರ್‌ ಮಾತನಾಡಿ, ಆರೋಗ್ಯ ಕವಚ ಯೋಜನೆಯಡಿ 710 ಆ್ಯಂಬುಲೆನ್ಸ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಆ ಪೈಕಿ 155 ಅಡ್ವಾನ್ಸ್‌ಡ್‌ ಲೈಫ್‌ ಸಪೋರ್ಟ್‌ ವ್ಯವಸ್ಥೆ ಹೊಂದಿವೆ ಎಂದು ಹೇಳಿದರು.

ಆ್ಯಂಬುಲೆನ್ಸ್‌ ಸೇವೆಯು ಆರೋಗ್ಯ ರಂಗದ ಪ್ರಮುಖ ಅಂಗವಾಗಿದ್ದು, ತುರ್ತು ಪರಿಸ್ಥಿತಿಗಳಲ್ಲಿ ಜೀವ ಉಳಿಸಲು ನಿರ್ಣಾಯಕ ಪಾತ್ರ ವಹಿಸುತ್ತವೆ. ಹೃದ್ರೋಗ, ಸ್ಟ್ರೋಕ್‌ ಮುಂತಾದ ಸಂದರ್ಭಗಳಲ್ಲಿ ಗೋಲ್ಡನ್‌ ಅವರ್‌ ಎಂದು ಕರೆಯಲ್ಪಡುವ ಸಮಯ ನಿರ್ಣಾಯಕವಾಗಿದ್ದು, ಇಂಥ ಸಂದರ್ಭಗಳಲ್ಲಿ ಆ್ಯಂಬುಲೆನ್ಸ್‌ ಜವಾಬ್ದಾರಿ ಅತಿ ಪ್ರಮುಖವಾಗಿದೆ ಎಂದು ಹೇಳಿದರು.

ಇದನ್ನೂ ಓದಿ:ದೇವಾಲಯ ನೆಲಸಮ ಅಕ್ಷಮ್ಯ ಅಫರಾಧ: ಸಂಸದ ಪ್ರತಾಪ್ ಸಿಂಹ ಕಿಡಿ

2008ರಲ್ಲಿ ಆಗಿನ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಶ್ರೀರಾಮುಲು ಅವರ ಅವಧಿಯಲ್ಲಿ ಆರಂಭವಾದ ಆರೋಗ್ಯ ಕವಚ ಸೇವೆಗೆ ಆಧುನಿಕ ಸ್ಪರ್ಶ ನೀಡಲಾಗುವುದು. ಆಸ್ಪತ್ರೆಗಳ ಮ್ಯಾಪಿಂಗ್‌, ಜಿಪಿಎಸ್‌ ತಂತ್ರಜ್ಞಾನ ಅಳವಡಿಸಿಕೊಂಡರೆ ವ್ಯಕ್ತಿ ಕರೆ ಮಾಡಿದ 10-15 ನಿಮಿಷದಲ್ಲಿ ಆ್ಯಂಬುಲೆನ್ಸ್‌ ಸ್ಥಳಕ್ಕೆ ತಲುಪಲಿದೆ ಹಾಗೂ ಸಮೀಪದ ಆಸ್ಪತ್ರೆಯನ್ನು ಗುರುತಿಸಬಹುದು ಎಂದು ತಿಳಿಸಿದರು.

40- 50 ಸಾವಿರ ಜನರಿಗೆ ಒಂದು ಆ್ಯಂಬುಲೆನ್ಸ್‌
ಪ್ರಸ್ತುತ ನಗರ ಪ್ರದೇಶದಲ್ಲಿ 30 ರಿಂದ 45 ನಿಮಿಷ ಹಾಗೂ ಗ್ರಾಮೀಣ ಭಾಗದಲ್ಲಿ 45 ನಿಮಿಷಕ್ಕಿಂತ ಹೆಚ್ಚು ಸಮಯ ಬೇಕಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ವೇಗವಾಗಿ ಸೇವೆ ದೊರಕುವಂತೆ ಸುಧಾರಣೆ ತರಲಾಗುವುದು. ಪ್ರಸ್ತುತ 1 ಲಕ್ಷ ಜನಸಂಖ್ಯೆಗೆ ಒಂದು ಆ್ಯಂಬುಲೆನ್ಸ್‌ ಲಭ್ಯವಿದ್ದು, ಮುಂದಿನ ದಿನಗಳಲ್ಲಿ ಅದನ್ನು 40ರಿಂದ 50 ಸಾವಿರ ಜನಸಂಖ್ಯೆಗೆ ಇಳಿಸಲಾಗುವುದು ಎಂದು ಹೇಳಿದರು.

ಸಚಿವರಾದ ಶ್ರೀರಾಮುಲು, ಎಸ್‌.ಟಿ. ಸೋಮಶೇಖರ್‌, ಮುನಿರತ್ನ, ಬೈರತಿ ಬಸವರಾಜ್‌ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

5 ಕೋಟಿ ಲಸಿಕೆಯತ್ತ ರಾಜ್ಯ ದಾಪುಗಾಲು
ರಾಜ್ಯದಲ್ಲಿ ದಿನಕ್ಕೆ ಸರಾಸರಿ 3.8 ಲಕ್ಷ ಡೋಸ್‌ ಲಸಿಕೆ ನೀಡಲಾಗುತ್ತಿದ್ದು, ಇದು ಇಡೀ ರಷ್ಯಾ ದೇಶದಲ್ಲಿ ನೀಡುತ್ತಿರುವ ಲಸಿಕೆಗಿಂತ ಹೆಚ್ಚಾಗಿದೆ. ಕರ್ನಾಟಕ 5 ಕೋಟಿ ಡೋಸ್‌ ಲಸಿಕೆ ವಿತರಣೆ ಪೂರೈಸುವತ್ತ ದಾಪುಗಾಲು ಇಡುತ್ತಿದೆ.
– ಡಾ| ಕೆ. ಸುಧಾಕರ್‌, ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ

ಟಾಪ್ ನ್ಯೂಸ್

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

KN-Rajaanna

Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.