“ಶಿಕ್ಷಕರ ಬಡ್ತಿ ಗೊಂದಲ ಶೀಘ್ರದಲ್ಲಿ ಇತ್ಯರ್ಥ’

ಇನ್ನೂ ಹೆಚ್ಚಿನ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು

Team Udayavani, Sep 12, 2021, 6:23 PM IST

“ಶಿಕ್ಷಕರ ಬಡ್ತಿ ಗೊಂದಲ ಶೀಘ್ರದಲ್ಲಿ ಇತ್ಯರ್ಥ’

ರಾಯಚೂರು: ಬಹುವರ್ಷಗಳಿಂದ ಗೊಂದಲದ ಗೂಡಾಗಿರುವ ಶಿಕ್ಷಕರ ಬಡ್ತಿ ಸಮಸ್ಯೆಯನ್ನು ಶೀಘ್ರದಲ್ಲೇ ನಿವಾರಿಸಿ, ಅರ್ಹ ಶಿಕ್ಷಕರಿಗೆ ಮುಂಬಡ್ತಿ ಸಿಗುವ ಹಾಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನ ಪರಿಷತ್‌ ಸದಸ್ಯ ಶಶೀಲ್‌ ನಮೋಶಿ ತಿಳಿಸಿದರು.

ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕಾಗೃಹದಲ್ಲಿ ಶನಿವಾರ ಜಿಲ್ಲಾಡಳಿತ, ಜಿಪಂ ಹಾಗೂ ಡಿಡಿಪಿಐ ಕಚೇರಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಹಾಗೂ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಕಳೆದ 15 ವರ್ಷಗಳಿಂದಲೂ ಶಿಕ್ಷಕ ಬಡ್ತಿ ಪ್ರಕರಣಗಳು ಬಾಕಿ ಉಳಿದಿವೆ. ಇದರಿಂದ ಅನೇಕ ಶಿಕ್ಷಕರು ಅರ್ಹತೆ ಇದ್ದರೂ ಮುಂಬಡ್ತಿಯಿಂದ ವಂಚಿತರಾಗುತ್ತಿದ್ದಾರೆ. ಕೆಲವರ ಸೇವಾವಧಿ  ಕೂಡ ಮುಗಿಯುತ್ತಿದೆ. ಹೀಗಾಗಿ ನನೆಗುದಿಗೆ ಬಿದ್ದಿರುವ ಬಡ್ತಿ ಪ್ರಕರಣಗಳ ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಶಿಕ್ಷಣ ಸಚಿವರಿಗೆ ಮನವರಿಕೆ ಮಾಡಲಾಗಿದೆ.

ಸಾಧ್ಯವಾದಷ್ಟು ಬೇಗವೇ ಈ ಸಮಸ್ಯೆಗೆ ಮುಕ್ತಿ ಕಾಣಿಸಲಾಗುವುದು ಎಂದು ಭರವಸೆ ನೀಡಿದರು. ಸ್ವಾತಂತ್ರÂ ಸಿಕ್ಕು 70 ವರ್ಷಗಳೇ ಕಳೆದರೂ ದೇಶದಲ್ಲಿ ಶಿಕ್ಷಣ ನೀತಿ ಬದಲಿಸಲು ಆಗಿರಲಿಲ್ಲ. ಮೋದಿ ದೇಶದ ಪ್ರಧಾನಿಯಾದ ಐದೇ ವರ್ಷದಲ್ಲಿ ತಜ್ಞರ ಅಭಿಪ್ರಾಯ ಪಡೆದುಕೊಂಡು ನೂತನ ಶಿಕ್ಷಣ ನೀತಿ ಜಾರಿಗೆ ಮುಂದಾಗಿದ್ದಾರೆ. ಈ ನೀತಿಯಿಂದ ಶೈಕ್ಷಣಿಕ ವ್ಯವಸ್ಥೆ ಬಲಗೊಳ್ಳಲಿದ್ದು, ಸಾಕಷ್ಟು ಗುರುತರ ಬದಲಾವಣೆಗಳು ಸಾಧ್ಯವಾಗಲಿದೆ ಎಂದರು.

ಕೊರೊನಾದಿಂದ ಶಿಕ್ಷಣ ವಲಯ ಸಾಕಷ್ಟು ದುರ್ಬಲಗೊಂಡಿದೆ. ಸಾಕಷ್ಟು ಶಿಕ್ಷಣ ಸಂಸ್ಥೆಗಳು ಸಮಸ್ಯೆ ಎದುರಿಸಿದವು. ಜಿಲ್ಲಾಡಳಿತ ಕೋವಿಡ್‌ ಲಸಿಕೆ ಗುರಿ ತಲುಪುವಲ್ಲಿ ಸಾಕಷ್ಟು ಶ್ರಮಿಸುತ್ತಿದೆ. ಅಕ್ಟೋಬರ್‌ ವೇಳೆಗೆ ಶೇ.100ರಷ್ಟು ಗುರಿ ತಲುಪಬೇಕು ಎಂದು ಕೇಂದ್ರ ಸರ್ಕಾರ
ಗುರಿ ಹಾಕಿದ್ದು, ಇನ್ನೂ ಹೆಚ್ಚಿನ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಲಸಿಕಾ  ಅಭಿಯಾನಗಳನ್ನು ಬಲಪಡಿಸಲು ಪ್ರಧಾನಿ ಮುಂದಾಗಿದ್ದಾರೆ ಎಂದರು.

ಶಾಸಕ ಡಾ| ಶಿವರಾಜ್‌ ಪಾಟೀಲ್‌ ಮಾತನಾಡಿ, ಒಬ್ಬ ವ್ಯಕ್ತಿ ಜೀವನ ರೂಪಗೊಳ್ಳಲು ಗುರುವೆಂಬ ಶಕ್ತಿಯೇ ಕಾರಣ. ಇಂದು ನಾನು ವೈದ್ಯನಾಗಿ, ಶಾಸಕನಾಗಿ ಇಷ್ಟೆಲ್ಲ ಸಾಧನೆ ಮಾಡಲು ಶಿಕ್ಷಕರ ಮಾರ್ಗದರ್ಶನವೇ ಕಾರಣ. ಶಿಕ್ಷಕರಿಗೆ ಮಾತ್ರ ದೇಶವನ್ನು ಸದೃಢವಾಗಿ ಕಟ್ಟುವ ಶಕ್ತಿ ಇರುವುದು. ಶಿಕ್ಷಕರ ಸಮಸ್ಯೆಗಳೇನಿದ್ದರೂ ಪರಿಹರಿಸಲು ಸದಾ ಶ್ರಮಿಸಲಾಗುವುದು ಎಂದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರರೆಡ್ಡಿ ಮಾತನಾಡಿದರು. ಜಿಲ್ಲೆಯ 22 ಶಿಕ್ಷಕರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ನಗರಸಭೆ ಅಧ್ಯಕ್ಷ ಈ.ವಿನಯ ಕುಮಾರ, ಆರ್‌ಡಿಎ ಅಧ್ಯಕ್ಷ ವೈ.ಗೋಪಾಲರೆಡ್ಡಿ, ಶಿಕ್ಷಣ ಇಲಾಖೆಯ ಉಪನಿರ್ದೇಶಕ ವೃಷಭೇಂದ್ರಯ್ಯ, ಡಯಟ್‌ ಉಪನಿರ್ದೇಶಕ ರಾಮಚಂದ್ರಪ್ಪ ಶಿವಂಗಿ, ಬಿಇಒ ದೊಡ್ಡಮನಿ, ಶಿಕ್ಷಕರ ಸಂಘದ ಸದಸ್ಯರು, ಶಿಕ್ಷಕರು ಇತರರಿದ್ದರು.

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.