ಕಾಂಗ್ರೆಸ್ ‘ಭಯೋತ್ಪಾದನೆಯ ತಾಯಿ’ | ರಾಮನನ್ನು ನಿಂದಿಸಿದ್ದಕ್ಕೆ ಫಲ ಅನುಭವಿಸಲೇಬೇಕು : ಯೋಗಿ
Team Udayavani, Sep 13, 2021, 10:54 AM IST
ಉತ್ತರ ಪ್ರದೇಶ : ವಿಧಾನ ಸಭಾ ಚುನಾವಣೆಗೆ ಇನ್ನೇನು ಕೆಲವು ತಿಂಗಳುಗಳು ಬಾಕಿ ಇರುವಾಗಲೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರತಿಪಕ್ಷಗಳ ವಿರುದ್ಧ ಹರಿಹಾಯ್ದಿದ್ದಾರೆ.
ಸಂತ ಕಬೀರ್ ನಗರದಲ್ಲಿ 126 ಕೋಟಿ ವೆಚ್ಚದಲ್ಲಿ ನಿರ್ಮಾಣದ ಯೋಜನೆಯ ಅಡಿಯಲ್ಲಿ ಜಿಲ್ಲಾ ಕಾರಾಗೃಹದ ಶಿಲಾನ್ಯಾಸ ಕಾರ್ಯಕ್ರಮವನ್ನು ಸಭೆಯನ್ನು ಉದ್ದೆಶಿಸಿ ಮಾತನಾಡಿದ ಯೋಗಿ, ಕಾಂಗ್ರೆಸ್ ನನ್ನು ಭಯೋತ್ಪಾದನೆಯ ತಾಯಿ ಎಂದು ಕರೆದಿದ್ದಾರೆ.
ಇದನ್ನೂ ಓದಿ : ಉತ್ತರ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಪ್ರಿಯಾಂಕಾ ಗಾಂಧಿ ನಾಯಕತ್ವ
ಕಾಂಗ್ರೆಸ್ ಪಕ್ಷ ಇಡೀ ದೇಶದಲ್ಲಿ ಭಯೋತ್ಪಾದನೆಯ ವಿಷ ಬೀಜ ಬಿತ್ತಿದ ಪಕ್ಷ ಎಂದು ಕಿಡಿ ಕಾರಿದ್ದಲ್ಲದೇ, 2022 ರ ಚುನಾವಣೆಯ ನಂತರ ಕಾಂಗ್ರೆಸ್ ನಿರ್ನಾಮವಾಗಿ ಹೋಗುತ್ತದೆ ಎನ್ನುವುದರಲ್ಲಿ ಅನುಮಾನವಿಲ್ಲ. ಚುನಾವಣೆಯಲ್ಲಿ ಎರಡು ಕ್ಷೇತ್ರದಲ್ಲಿ ಗೆಲ್ಲುವುದು ಕೂಡ ಅನುಮಾನ ಎಂದಿದ್ದಾರೆ.
ಇನ್ನು, ಸಮಾಜವಾದಿ ಪಕ್ಷ ಹಾಗೂ ಬಹುಜನ ಸಮಾಜ ಪಕ್ಷದ ವಿರುದ್ಧವೂ ಕೂಡ ಗುಡುಗಿದ ಅವರು, ಅಧಿಕಾರದಲ್ಲಿದ್ದಾಗ ರಾಜ್ಯದ ಜನರ ನಿರೀಕ್ಷೆಯನ್ನು ಹುಸಿ ಮಾಡಿದ್ದಾರೆ. ಜನರಿಗೆ ಸರಿಯಾಗಿ ವಿದ್ಯುತ್ ಪೂರೈಕೆ ಕೂಡ ಮಾಡಿಲ್ಲ ಎಂದು ಅವರು ಹರಿಹಾಯ್ದಿದ್ದಾರೆ.
ಭಗವಾನ್ ರಾಮನ ಭಕ್ತರ ಮೇಲೆ ಗುಂಡು ಹಾರಿಸಿದವರು ಮತ್ತು ತಾಲಿಬಾನಿಗಳನ್ನು ತಮ್ಮ ಜಾತೀಯತೆ ಮತ್ತು ರಾಜವಂಶದ ಮನಸ್ಥಿತಿಯಿಂದ ಬೆಂಬಲಿಸುವವರನ್ನು ರಾಜ್ಯದ ಜನರು ಎಂದಿಗೂ ಸಹಿಸುವುದಿಲ್ಲ ಎಂದು ಅವರು ಗುಡುಗಿದ್ದಾರೆ.
ಯುಪಿಗೆ ಏನು ಕೊರತೆ ಇತ್ತು?ನಿರುದ್ಯೋಗ, ಮಾಫಿಯಾ ಆಡಳಿತ ಮತ್ತು ಭ್ರಷ್ಟಾಚಾರವನ್ನು ಹೊರತುಪಡಿಸಿ ಕಾಂಗ್ರೆಸ್, ಎಸ್‌ಪಿ ಮತ್ತು ಬಿಎಸ್‌ಪಿ ಏನು ನೀಡಿದೆ? ಎಂದು ಅವರು ಪ್ರಶ್ನಿಸಿದ್ದಲ್ಲದೇ, ಭಗವಾನ್ ರಾಮನನ್ನು ನಿಂದಿಸಿದ್ದು, ರಾಮ ಭಕ್ತರ ಮೇಲೆ ಗುಂಡು ಹಾರಿಸಿದ ಫಲವನ್ನು ಕಾಂಗ್ರೆಸ್ ಅನುಭವಿಸಲಿದೆ ಎಂದಿದ್ದಾರೆ.
ಇದನ್ನೂ ಓದಿ : ಈ ವ್ಯಕ್ತಿ ಪ್ರತಿದಿನ 6 ಕೆಜಿ ಚಿನ್ನ ಧರಿಸ್ತಾನೆ : 3 ಕೆಜಿ ಚಿನ್ನದ ಶರ್ಟ್ ಖರೀದಿಸಿದ್ದಾನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.