ಕೇರಳದಿಂದ ಗೋವಾಕ್ಕೆ ಆಗಮಿಸುವವರಿಗೆ 5 ದಿನಗಳ ಕ್ವಾರಂಟೈನ್ ಕಡ್ಡಾಯಗೊಳಿಸಿದ ಸರ್ಕಾರ
Team Udayavani, Sep 13, 2021, 3:49 PM IST
ಪ್ರಾತಿನಿಧಿಕ ಚಿತ್ರ
ಪಣಜಿ : ಗೋವಾ ರಾಜ್ಯದಲ್ಲಿ ಜಾರಿಯಲ್ಲಿರುವ ಕರ್ಫ್ಯೂ ಕಾಲಾವಧಿಯನ್ನು ಸರ್ಕಾರ ಇನ್ನೂ ಒಂದು ವಾರಗಳ ಕಾಲ ವಿಸ್ತರಣೆ ಮಾಡಿದೆ. ರಾಜ್ಯದಲ್ಲಿ ಜಾರಿಯಲ್ಲಿರುವ ಕರ್ಫ್ಯೂವನ್ನು ಸಪ್ಟೆಂಬರ್ 20 ರವರೆಗೆ ವಿಸ್ತರಣೆ ಮಾಡಲಾಗಿದೆ. ಇಷ್ಟೇ ಅಲ್ಲದೆಯೇ ಕೇರಳದಿಂದ ಗೋವಾಕ್ಕೆ ಆಗಮಿಸುವ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳಿಗೆ 5 ದಿನಗಳ ಕ್ವಾರಂಟೈನ್ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇದನ್ನೂ ಓದಿ : “ಇನ್ನೂ ಸಮಯ ಇದೆ”: ಕಲಬುರಗಿ ಪಾಲಿಕೆ ಬೆಂಬಲ ವಿಚಾರದಲ್ಲಿ ಕುಮಾರಸ್ವಾಮಿ ನಡೆ ಇನ್ನೂ ನಿಗೂಢ
ಕೇರಳದಿಂದ ಗೋವಾಕ್ಕೆ ಆಗಮಿಸುವ ವಿದ್ಯಾರ್ಥಿಗಳು ಹಾಗೂ ಕಾರ್ಮಿಕರಿಗೆ ಕ್ವಾರಂಟೈನ್ ವ್ಯವಸ್ಥೆಯನ್ನು ಸಂಬಂಧಿಸಿದ ಸಂಸ್ಥೆಯ ಪ್ರಮುಖರು ಮಾಡಬೇಕು ಎಂದು ಸರ್ಕಾರವು ತನ್ನ ಆದೇಶದಲ್ಲಿ ಹೇಳಿದೆ. ಇಷ್ಟೇ ಅಲ್ಲದೆಯೇ 5 ದಿನಗಳ ಕ್ವಾರಂಟೈನ್ ಮುಗಿದ ನಂತರ ಮತ್ತೆ ಆರ್ ಟಿ ಪಿ ಸಿ ಆರ್ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಕೂಡ ಸರ್ಕಾರ ತಿಳಿಸಿದೆ.
ಆದರೆ ಕೇರಳ ರಾಜ್ಯವನ್ನು ಹೊರತುಪಡಿಸಿ ಇತರ ರಾಜ್ಯಗಳಿಂದ ಗೋವಾಕ್ಕೆ ಆಗಮಿಸುವ ಪ್ರಯಾಣಿಕರಿಗೆ ಈ ಹಿಂದೆ ಇದ್ದ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಇತರ ರಾಜ್ಯಗಳಿಂದ ಗೋವಾಕ್ಕೆ ಆಗಮಿಸುವವರು ಕೋವಿಡ್ ಎರಡು ಲಸಿಕೆ ಪಡೆದಿರುವ ಪ್ರಮಾಣಪತ್ರ ಅಥವಾ ಕೋವಿಡ್ ಎಂಟಿಜನ್ ನೆಗೆಟಿವ್ ಪ್ರಮಾಣಪತ್ರ ಹೊಂದಿರುವುದು ಕಡ್ಡಾಯವಾಗಿದೆ.
ಇದನ್ನೂ ಓದಿ : ವಾಜಪೇಯಿಯವರೂ ಎತ್ತಿನ ಗಾಡಿಯಲ್ಲಿ ಬಂದಿದ್ದರು, ನಾವು ಬಂದರೆ ತಪ್ಪೇಕೆ?: ಸಿದ್ದರಾಮಯ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.