ಕುಸಿದು ಬಿದ್ದ ನಾಲ್ಕು ಅಂತಸ್ತಿನ ಕಟ್ಟಡ : ಮೂವರ ರಕ್ಷಣೆ, ಇನ್ನೂ ಕೆಲವರು ಸಿಲುಕಿರುವ ಶಂಕೆ
Team Udayavani, Sep 13, 2021, 5:26 PM IST
ನವ ದೆಹಲಿ : 4 ಅಂತಸ್ತಿನ ಕಟ್ಟಡವೊಂದು ಕುಸಿದ ಪರಿಣಾಮ ಮಕ್ಕಳು ಸೇರಿದಂತೆ ಹಲವು ಜನರು ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.
ಉತ್ತರ ದೆಹಲಿಯ ಸಬ್ಜಿ ಮಂಡಿ ಪ್ರದೇಶದಲ್ಲಿ ಉಂಟಾಗಿರುವ ಈ ದುರಂತದಲ್ಲಿ ಈಗಾಗಲೇ ಮೂವರನ್ನು ರಕ್ಷಣೆ ಮಾಡಲಾಗಿದ್ದು ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನಾ ಸ್ಥಳದಲ್ಲಿ ಎನ್ಡಿಆರ್ಎಫ್ ಸಿಬ್ಬಂದಿ ಸೇರಿದಂತೆ ದೆಹಲಿ ಪೊಲೀಸರು, ಅಗ್ನಿಶಾಮಕ ದಳದವರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಘಟನೆ ಸ್ಥಳಕ್ಕೆ 5 ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಇದುವರೆಗೆ ನಡೆದ ರಕ್ಷಣೆ ಕಾರ್ಯಾಚರಣೆಯಲ್ಲಿ ಓರ್ವ ವೃದ್ಧ, ಇಬ್ಬರು ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಘಟನೆ ನಡೆದ ಸಂದರ್ಭ ಕಟ್ಟಡದಲ್ಲಿ 4ರಿಂದ 5 ಜನರು ಇದ್ದರು ಎನ್ನಲಾಗಿದೆ. ಅವರೆಲ್ಲರೂ ಕಟ್ಟಡದ ಅಡಿಯಲ್ಲಿ ಸಿಲುಕಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ :ಗುಜರಾತ್ ನೂತನ ಸಿಎಂ ಭೂಪೇಂದ್ರ ಪಟೇಲ್ ಗೆ ಶುಭ ಕೋರಿದ ಬಸವರಾಜ ಬೊಮ್ಮಾಯಿ
ಕಟ್ಟಡ ಕುಸಿಯುವ ವೇಳೆ ಕಟ್ಟಡದ ಬಳಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಕ್ಕಳು ಕೂಡ ಅವಶೇಷಗಳಡಿ ಸಿಲುಕಿದ್ದಾರೆ ಎನ್ನಲಾಗಿದೆ . ಅದಲ್ಲದೆ ಕಟ್ಟಡದ ಬಳಿ ನಿಲ್ಲಿಸಿದ ಕಾರುಗಳು ಅವಶೇಗಳ ಅಡಿಯಲ್ಲಿ ಸಿಲುಕಿದೆ.
ಘಟನೆ ಕುರಿತು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬೇಸರ ವ್ಯಕ್ತಪಡಿಸಿದ್ದಾರೆ,
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ
HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.