ಆಸ್ಕರ್ ಫರ್ನಾಂಡಿಸ್ ಪಾರ್ಥಿವ ಶರೀರ ಮಂಗಳೂರಿನಿಂದ ಉಡುಪಿಗೆ ಶಿಫ್ಟ್
Team Udayavani, Sep 14, 2021, 8:32 AM IST
ಮಂಗಳೂರು : ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ನಿನ್ನೆ ಸೋಮವಾರ ಮಧ್ಯಾಹ್ನ ನಿಧನರಾಗಿದ್ದು, ಅವರ ಪಾರ್ಥಿವ ಶರೀರವನ್ನು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆ ಶವಾಗಾರದಿಂದ ಉಡುಪಿಗೆ ಅಂಬ್ಯುಲೆನ್ಸ್ ಮೂಲಕ ರವಾನೆ ಮಾಡಲಾಗುತ್ತಿದೆ. ಪಾರ್ಥಿವ ಶರೀರಕ್ಕೆ ಭಾರತದ ಧ್ವಜ ಹೊದಿಸಿ ಮಂಗಳೂರು ಪೊಲೀಸರು ಗೌರವ ಸಲ್ಲಿಸಿದ್ದಾರೆ.
ಈ ವೇಳೆ ಶಾಸಕ ಯು.ಟಿ.ಖಾದರ್, ಪರಿಷತ್ ಸದಸ್ಯ ಹರೀಶ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಮಂಜುನಾಥ ಭಂಡಾರಿ, ಐವನ್ ಡಿಸೋಜಾ, ಆಸ್ಕರ್ ಪತ್ನಿ ಬ್ಲಾಸಂ, ಮಗ, ಮಗಳು ಸೇರಿ ಕುಟುಂಬಸ್ಥರು ಭಾಗಿಯಾಗಿದ್ದರು
9.30 ರ ವೇಳೆಗೆ ಉಡುಪಿಯ ಶೋಕಮಾತಾ ಚರ್ಚ್ ಗೆ ಪಾರ್ಥಿವ ಶರೀರ ತಲುಪಲಿದೆ. 11 ಗಂಟೆ ಸುಮಾರಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಾರ್ವಜನಿಕ ದರ್ಶನ ಇಡಲಾಗುತ್ತದೆ. 3 ಗಂಟೆ ವೇಳೆ ಮತ್ತೆ ಮಂಗಳೂರಿನ ಕಾಂಗ್ರೆಸ್ ಕಚೇರಿಗೆ ಕೊಂಡೊಯ್ಯಲಾಗುತ್ತದೆ.
ಮಲ್ಲಿಕಟ್ಟೆ ಬಳಿಯ ಕಾಂಗ್ರೆಸ್ ಕಚೇರಿಯಲ್ಲಿ 3 ರಿಂದ 5 ಗಂಟೆವರೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬಳಿಕ ಫಾದರ್ ಮುಲ್ಲರ್ ಆಸ್ಪತ್ರೆಯ ಶವಾಗಾರದಲ್ಲಿ ಇಡಲು ವ್ಯವಸ್ಥೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.